ಮಾ. 31ರ ಭಾನುವಾರ ಬ್ಯಾಂಕ್‌ಗೆ ಇಲ್ಲ ರಜೆ
ಹೊಸದಿಲ್ಲಿ: ಮಾರ್ಚ್ 31ರ ಭಾನುವಾರ ದೇಶದ ಪ್ರಮುಖ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಬ್ಯಾಂಕ್ ವ್ಯವಹಾರಗಳನ್ನು ಮಾಡಬಹುದಾಗಿದೆ. ಸರಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಆರ್ಥಿಕ ವರ್ಷದ ಕೊನೆ ದಿನ (ಮಾ.31) ಕಾರ್ಯನಿರ್ವಹಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ. ಮಾ.31ರಂದು ಸೇವೆ ನೀಡಲಿರುವ ಬ್ಯಾಂಕ್‌ಗಳ ಮಾಹಿತಿ ಇಲ್ಲಿದೆ.
ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುಸಿಒ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ.
ಖಾಸಗಿ ವಲಯದ ಬ್ಯಾಂಕ್‌ಗಳು: ಎಕ್ಸಿಸ್ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್, ಡಿಸಿಬಿ ಬ್ಯಾಂಕ್, ಫೆಡರಲ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್, ಕರ್ಣಾಟಕ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಆರ್‌ಬಿಎಲ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್, ಯೆಸ್ ಬ್ಯಾಂಕ್, ಧನಲಕ್ಷ್ಮಿ ಬ್ಯಾಂಕ್, ಬಂಧನ್ ಬ್ಯಾಂಕ್, ಸಿಎಸ್‌ಬಿ ಬ್ಯಾಂಕ್.