ಸತ್ತೂರು, ಧಾರವಾಡ: “ನೆನಪು ಮತ್ತು ಮರೆವು” ಕಾರ್ಯಾಗಾರ
ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರ ಕ್ರೀಯಾ ಶಾಸ್ತ್ರ ವಿಭಾಗದಿಂದ “ನೆನಪು ಮತ್ತು ಮರೆವು” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಜೂ. 1ರಂದು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಅತಿಥಿಗಳಾದ ಡಾ. ರತ್ನಮಾಲಾ ಎಂ. ದೇಸಾಯಿ ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ ನೆನಪು ಮಾನವನಿಗೆ ಅತೀ ಮೌಲ್ಯವಾದ ಆಯುಧವಾಗಿದೆ. ಕಹಿ ನೆನಪುಗಳನ್ನು ಮರೆಯುವುದು ಒಂದು ವರದಾನವಾಗಿದೆ. ಗೊಂದಲಗಳು ಹೆಚ್ಚಾಗುವುದು ಮತ್ತು ಏಕಾಗ್ರತೆ ಕಡಿಮೆಯಾಗುವುದು ಒಳ್ಳೆಯ ಲಕ್ಷಣವಲ್ಲಾ. ಉತ್ತಮ ಶಿಕ್ಷಣ ನೀಡುವುದಕ್ಕೆ ಶಿಕ್ಷಕರು ಒಳ್ಳೆಯ ನೆನಪಿನ ಶಕ್ತಿ ಹೊಂದಿರಬೇಕು. ಉತ್ತಮ ನೆನಪು ಮತು ಒಳ್ಳೆಯ ಜ್ಞಾನವು ಜೀವನದಲ್ಲಿ ಮರುಕಳಿಸುತ್ತಿರಬೇಕು ಎಂದು ಹೇಳಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಕಾರ್ಯಾಗಾರದ ಸಂಘಟನಾ ಅಧ್ಯಕ್ಷರು ಮತ್ತು ಶರೀರ ಕ್ರೀಯಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಲಕ್ಷ್ಮೀ ಉಪಸ್ಥಿತರಿದ್ದರು. ಡಾ. ಗ್ರಾಮೋಪಾಧ್ಯಾಯ ಭೂಷಣ, ಡಾ. ನಾಗಲಕ್ಷ್ಮೀ , ಡಾ. ಸಚಿನ್ ಬಿ.ಎಸ್., ಡಾ. ಮಲ್ಲಿಕಾರ್ಜುನಗೌಡರ ಅವರು ವಿಷಯದ ಕುರಿತು ತಜ್ಞ ಉಪನ್ಯಾಸವನ್ನು ನೀಡಿದರು. ಈ ಕಾರ್ಯಾಗಾರದಲ್ಲಿ ಉತ್ತರ ಕರ್ನಾಟಕದ ಸುಮಾರು 200ಕ್ಕೂ ಹೆಚ್ಚು ಪ್ರಾಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಘಟನಾ ಕಾರ್ಯದರ್ಶಿಗಳಾದ ಡಾ. ಶ್ವೇತಾ ಗೌಡಪ್ಪಣ್ಣವರ ಸ್ವಾಗತಿಸಿದರು. ವೈಷ್ಣವಿ ಕುಲಕರ್ಣಿ ಮತ್ತು ವೇಣು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಸಂಘಟನಾ ಕಾರ್ಯದರ್ಶಿಗಳಾದ ಡಾ. ವಿದ್ಯಾ ನಾಡಗೇರ ಅವರು ವಂದನಾರ್ಪಣೆ ಸಲ್ಲಿಸಿದರು.