ಹಂ.ಪ. ನಾಗರಾಜಯ್ಯ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ
Published Date: 25-Feb-2025 Link-Copied
ಉಡುಪಿ, ಫೆ. 24: ಮಾಹೆ ವಿ.ವಿ.ಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡುವ ಟಿ. ವಿಮಲಾ ಪೈ ಪ್ರಾಯೋಜಿತ 2024ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಹಿರಿಯ ಸಾಹಿತಿ ಪ್ರೊ| ಹಂ.ಪ. ನಾಗರಾಜಯ್ಯ(ಹಂಪನಾ) ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲ. ರೂ., ಪಾರಿತೋಷಕ, ಪ್ರಶಸ್ತಿಪತ್ರ ಒಳಗೊಂಡಿದೆ. ಮಾ.23ರಂದು ಗೋವಿಂದ ಪೈ ಸಂಶೋಧನ ಸಂಪುಟದ ದ್ವಿತೀಯ ಭಾಗದ ಬಿಡುಗಡೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಸಮಿತಿ ಸದಸ್ಯರಾದ ಡಾ| ತಾಳ್ತಜೆ ವಸಂತ ಕುಮಾರ್, ಡಾ| ಕೆ. ಚಿನ್ನಪ್ಪ ಗೌಡ, ಡಾ| ಪ್ರಭಾಕರ ಜೋಷಿ, ಡಾ| ಕಿಶೋರಿ ನಾಯಕ್, ಡಾ| ಎಸ್. ಪಾಡೀಗಾರ್ ಸಹಕರಿಸಿದ್ದಾರೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.