ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನಾ ಮಹೋತ್ಸವ
Published Date: 27-May-2025 Link-Copied
ಸಹ್ಯಾದ್ರಿಯ ತಪ್ಪಲಿನಲ್ಲಿರುವ ಮಲೆನಾಡಿನ ಸುಂದರ ನಗರ ಶಿವಮೊಗ್ಗದ ಮಹಾವೀರ ನಗರದಲ್ಲಿರುವ ಭಗವಾನ್ 1008 ಶ್ರೀ ಆದಿನಾಥ ಸ್ವಾಮಿ ಜಿನಮಂದಿರದಲ್ಲಿ ಮಾನ ಸ್ಥಂಭೋಪರಿ 24 ತೀರ್ಥಂಕರರ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನೆ, ನೂತನ ಶಿಲಾಮಯ ಗರ್ಭಗುಡಿಯಲ್ಲಿ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಹಾಗೂ ಮಹಾಮಾತೆ ಶ್ರೀ ಜ್ವಾಲಾಮಾಲಿನೀ ದೇವಿ ಮತ್ತು ಕ್ಷೇತ್ರಪಾಲ ಪ್ರತಿಷ್ಠಾಪನೆ, ನಾಗ ಪ್ರತಿಷ್ಠೆ ಮುಂತಾದ ಕಾರ್ಯಕ್ರಮಗಳನ್ನು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಮಾರ್ಗದರ್ಶನ ಹಾಗೂ ನೇತೃತ್ವ ಮತ್ತು ನಾಡಿನ ಸಮಸ್ತ ಭಟ್ಟಾರಕ ಶ್ರೀಗಳವರ ಪಾವನ ಸಾನ್ನಿಧ್ಯದಲ್ಲಿ ಇಂದಿನಿಂದ (ಮೇ. 28) ಮೊದಲ್ಗೊಂಡು ಮೇ. 30ರವರೆಗೆ ಮೂರು ದಿನಗಳ ಕಾಲ ವೈಭವಪೂರ್ಣವಾಗಿ ಜರುಗಲಿದೆ.