ವೇಣೂರು: ವಾರ್ಷಿಕ ಮಹೋತ್ಸವ
Published Date: 29-May-2025 Link-Copied
ವೇಣೂರು: ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ವಾರ್ಷಿಕ ಮಹೋತ್ಸವವು ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಪರಮ ಪೂಜ್ಯ "ಭಾರತಭೂಷಣ" ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ದಿನಾಂಕ 1-06-2025ನೇ ಆದಿತ್ಯವಾರದಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಲಿರುವುದು.