ಪರಾಗ್ ಜೈನ್ ರಾ ಹೊಸ ಮುಖ್ಯ
Published Date: 02-Jul-2025 Link-Copied
ಹೊಸದಿಲ್ಲಿ: ‘ಆಪರೇಷನ್ ಸಿಂದೂರ’ ಸೇನಾ ಕಾರ್ಯಾಚರಣೆ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಗುಪ್ತಚರ ಸಂಸ್ಥ ‘ರಾ’ ಮುಖ್ಯಸ್ಥರನ್ನಾಗಿ ಕೇಂದ್ರ ಸರಕಾರ ನೇಮಿಸಿದೆ. ‘ರಾ’ ಹಾಲಿ ಮುಖ್ಯಸ್ಥ ರವಿ ಸಿನ್ಹಾ ಅವರು ಜೂನ್ 30ರಂದು ನಿವೃತ್ತಿ ಹೊಂದಲಿದ್ದಾರೆ. ಸದ್ಯ ‘ರಾ’ದ ವೈಮಾನಿಕ ಸಂಶೋಧನಾ ಕೇಂದ್ರದ ಮುಖ್ಯಸ್ಥರಾಗಿರುವ ಪರಾಗ್ ಅವರು ಜುಲೈ 1ರಂದು ‘ರಾ’ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಇವರ ಅಧಿಕಾರ ಅವಧಿ ಎರಡು ವರ್ಷ ಇರಲಿದೆ. ಪರಾಗ್ 1989ನೇ ಸಾಲಿನ ಪಂಜಾಬ್ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಗುಪ್ತಚರ ಇಲಾಖೆಯಲ್ಲಿ ಮಾನವ ಬುದ್ಧಿಮತ್ತೆ ಹಾಗೂ ಕೃತಕ ಬುದ್ಧಿಮತ್ತೆಯನ್ನು ಪರಿಣಾಮಕಾರಿಯಾಗಿ ಸಂಯೋಜಿಸಿ ಬಳಸುವಲ್ಲಿ ಪರಿಣತಿ ಹೊಂದಿದ್ದಾರೆ.