ಇನ್ನರ್ ವೀಲ್ ಕ್ಲಬ್ ಮೂಡುಬಿದಿಯ ಜೈನ್ ಪೇಟೆಯಲ್ಲಿ ಸೋಲಾರ್ ಸ್ಟ್ರೀಟ್ ಲೈಟ್ ಅಳವಡಿಕೆ
Published Date: 02-Jul-2025 Link-Copied
ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಯವರು ಸಾರ್ವಜನಿಕರಿಗೆ ಉಪಯೋಗ ಆಗುವಂತೆ ಸೋಲಾರ್ ಸ್ಟ್ರೀಟ್ ಲೈಟ್ ಅನ್ನು ಸಾವಿರ ಕಂಬದ ಬಸದಿಯ ಹತ್ತಿರ ಅಳವಡಿಸಿದರು. ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಉದ್ಘಾಟಿಸಿ ಇನ್ನರ್ ವೀಲ್ ಕ್ಲಬ್ ಇನ್ನಷ್ಟು ಸಮಾಜ ಮುಖಿಯಾಗಿ ತೊಡಗಿಸಿಕೊಳ್ಳಲಿ ಎಂದು ಹಾಗೂ ನೂತನ ಅಧ್ಯಕ್ಷರಾದ ಶ್ವೇತಾ ಜೈನ್ ಹಾಗೂ ಕಾರ್ಯದರ್ಶಿ ಅನಿತಾರವರಿಗೆ ಶುಭವನ್ನು ಹಾರೈಸಿ ಆರ್ಶೀವದಿಸಿದರು. ಎಂ.ಸಿ.ಎಸ್ ಬ್ಯಾಂಕಿನ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಎಂ ಬಾಹುಬಲಿ ಪ್ರಸಾದ್ ರವರು ಎಲ್ಲರಿಗೂ ಉಪಯೋಗವಾಗುವಂತಹ ಸಮಾಜಮುಖಿ ಕಾರ್ಯಕ್ರಮ ಇದಾಗಿದ್ದು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿದೆ. ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯ ಪಕ್ಕದಲ್ಲಿ ಇರುವಂತಹ ಈ ರಸ್ತೆಯಲ್ಲಿ ಸ್ಥಳೀಯರು ಮಾತ್ರವಲ್ಲದೆ ಹೊರ ಪ್ರದೇಶದಿಂದ ಬರುವವರು ಕೂಡ ಸಂಚರಿಸುತ್ತಾರೆ. ಇನ್ನರ್ ವೀಲ್ ಕ್ಲಬ್ ಕಳೆದ 33 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ವರ್ಷವು ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕೆಲಸವನ್ನು ಮುಂದುವರಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಮ್., ಮಾಜಿ ಸಚಿವರಾದ ಕೆ. ಅಭಯ ಚಂದ್ರ ಜೈನ್, ಪುರಸಭಾ ಸದಸ್ಯ ಶ್ವೇತಾ ಪ್ರವೀಣೆ, ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾದ ಡಾ| ಹರೀಶ್ ನಾಯಕ್, ಡಾ| ವಿನಯ್ ಕುಮಾರ್ ಹೆಗ್ಡೆ, ರೋ. ಜಯರಾಜ್ ಕಂಬಳಿ, ಇನ್ನರ್ ವೀಲ್ ಕ್ಲಬ್ ಸದಸ್ಯರಾದ ಪ್ರಕಾಶಿನಿ ಹೆಗ್ಡೆ, ಸುಜಯ ವೇದ ಕುಮಾರ, ವೀಣಾ, ರೇಷ್ಮಾ, ರಮ್ಯಾ, ಅಪೇಕ್ಷೆ, ದಿವ್ಯಾ ಹಾಗೂ ಜೈನ್ ಮಿಲನ್‌ನ ಪದಾಧಿಕಾರಿಗಳು ಭಾಗವಹಿಸಿದ್ದರು.