ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್.ಡಿ.ಎಂ ಸ್ವಾತಂತ್ರ್ಯೋತ್ಸವ ಸಂಭ್ರಮ
Published Date: 15-Aug-2025 Link-Copied
ಉಜಿರೆ, ಆಗಸ್ಟ್ 15: ಸಮೃದ್ಧಿ, ಸುರಕ್ಷತೆ ಮತ್ತು ದಿಟ್ಟ ಹೆಜ್ಜೆಗಳೊಂದಿಗೆ ಮುನ್ನಡೆಯುವ “39;ಹೊಸ ಭಾರತ” ಕಟ್ಟುವ ಘೋಷವಾಕ್ಯದೊಂದಿಗೆ ಎಸ್.ಡಿ.ಎಂ ಕಾಲೇಜಿನ ಶ್ರೀರತ್ನವರ್ಮ ಹೆಗ್ಗಡೆ ಕ್ರೀಡಾಂಗಣವು 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಯಿತು. ಎಸ್.ಡಿ.ಎಂ ಶಾಲೆ, ಪದವಿ ಪೂರ್ವ, ಪದವಿ, ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ, ತಾಂತ್ರಿಕ ಸೇರಿದಂತೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳ ಸಮಕ್ಷಮದಲ್ಲಿ ನಿವೃತ್ತ ಸೇನಾಧಿಕಾರಿ ಮೇಜರ್ ಜನರಲ್ ಎಂ.ವಿ.ಭಟ್ ಅವರು ಧ್ವಜಾರೋಹಣ ನೆರವೇರಿಸಿದರು. ಎನ್.ಸಿ.ಸಿ. ಕೆಡೆಟ್‌ಗಳಿಂದ ಧ್ವಜವಂದನೆ ನಡೆಯಿತು. ಈ ವೇಳೆ ಎನ್‌ಸಿಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್, ಎನ್‌ಸಿಸಿ ಆಫಿಸರ್ ಸದಾನಂದ್, ರೋವರ್ ಸ್ಕೌಟ್ ಲೀಡರ್ ಪ್ರಸಾದ್ ಕುಮಾರ್ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್.ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಶ್ವನಾಥ ಪಿ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ ಕುಮಾರ್, ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ, ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಮತ್ತಿತರ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ ಕಾಲೇಜಿನ ಆಡಳಿತಾಂಗ ಕುಲಸಚಿವರಾದ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.