ಡಾ. ಅಜಿತಪ್ರಸಾದ ಇವರು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ
Published Date: 20-Sep-2025 Link-Copied
ಕರ್ನಾಟಕ ವಿದ್ಯಾವರ್ಧಕ ಸಂಘವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಮಹಾಸಾಧಕರಿಗೆ ಗೌರವ ಉಪಾಧ್ಯಕ್ಷರನ್ನಾಗಿ ನೇಮಿಸಿ ತನ್ನ ಘನತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಇವರಲ್ಲಿ ಪ್ರಮುಖರಾದ ಡಾ. ಅಜಿತಪ್ರಸಾದ ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಬೆಟ್ಟದಷ್ಟು. ಜೆ.ಎಸ್.ಎಸ್. ಸಂಸ್ಥೆಯ ಮೂಲಕ ಶ್ರೇಷ್ಠ ಗುಣಮಟ್ಟದ ಶಿಕ್ಷಣ ಕೊಡುವದಕ್ಕೆ ಅಪಾರವಾಗಿ ಶ್ರಮಿಸಿದ್ದಾರೆ. ಈಗಲೂ ಅದೇ ದಾರಿಯಲ್ಲಿ ಮುನ್ನಡೆದಿದ್ದಾರೆ. ನಮ್ಮ ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟಿನ ಗೌರವಾಧ್ಯಕ್ಷರಾದ ಇವರು ಸಾಹಿತ್ಯದ ಚಟುವಟಿಕೆಗಳನ್ನು ಅಭಿವೃದ್ಧಿ ಮಾಡುವಲ್ಲಿ ಸಲಹೆ ಮಾರ್ಗದರ್ಶನ ನೀಡುತ್ತ ಪ್ರೋತ್ಸಾಹಿಸುತ್ತಿದ್ದಾರೆ. ಪ್ರಸ್ತುತ 130 ವರ್ಷಗಳ ಇತಿಹಾಸ ಹೊಂದಿದ ಕರ್ನಾಟಕದ ಹೆಮ್ಮೆಯ ಮತ್ತು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ ಮಾಡಿ ಗೌರವಿಸಿದ್ದು ಸಮಾಜಕ್ಕೆ ಅವರ ಶಿಷ್ಯ ಬಳಗಕ್ಕೆ, ಅಭಿಮಾನಿಗಳಿಗೆ ಬಾರೀ ಸಂತೋಷವನ್ನುಂಟುಮಾಡಿದೆ. ಎಸ್. ಆರ್. ಮಲ್ಲಸಮುದ್ರ