ಬೆಳ್ತಂಗಡಿ: ನೂತನ ಶಿಲಾಮಯ ಬಸದಿಯ ಮುಖ್ಯ ದ್ವಾರದ ಕಲ್ಲಿನ ದಾರಂದವನ್ನು ಇಡುವ ಕಾರ್ಯಕ್ರಮ
Published Date: 24-Sep-2025 Link-Copied
ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗುಂಡದ ಬಸದಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರದ ನಿಮಿತ್ತ ನಿರ್ಮಾಣಗೊಂಡ ನೂತನ ಶಿಲಾಮಯ ಬಸದಿಯ ಮುಖ್ಯ ದ್ವಾರದ ಕಲ್ಲಿನ ದಾರಂದವನ್ನು ಇಡುವ ಕಾರ್ಯಕ್ರಮವು ಇಂದು ಬೆಳಿಗ್ಗೆ ಕಾರ್ಕಳ ಶ್ರೀ ಜೈನಮಠದ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಗಣ್ಯರು, ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದರು.