ಗೃಹರಕ್ಷಕ ಪಾಂಡುರಾಜ್‌ಗೆ ಮುಖ್ಯಮಂತ್ರಿ ಚಿನ್ನದ ಪದಕ
Published Date: 10-Mar-2026 Link-Copied
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ತಾಲೂಕು ಗೃಹರಕ್ಷಕ ದಳ ಘಟಕದ ಹಿರಿಯ ಗೃಹ ರಕ್ಷಕ, ಘಟಕಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಪಾ೦ಡುರಾಜ ಅವರ ಸೇವೆ ಗುರುತಿಸಿ 2024-25ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವ ನೀಡಲಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ ಪೌರ ರಕ್ಷಣೆ ಮತ್ತು ಎಸ್.ಡಿ.ಆರ್.ಎಫ್ ಅವರಿಗೆ ನೀಡಲಾಗುವ ಗೌರವಕ್ಕೆ ದ.ಕ ಜಿಲ್ಲೆಯಿಂದ ಏಕೈಕ ಪ್ರತಿನಿಧಿಯಾಗಿ ಪಾಂಡುರಾಜ ಈ ಗೌರವ ಸ್ವೀಕರಿಸಿದ್ದಾರೆ. ಬೆಂಗಳೂರಿನ ಆರ್.ವಿ. ಮುಂಡೂರ್ ಅಗ್ನಿಶಾಮಕ ತರಬೇತಿ ಅಕಾಡೆಮಿ ಆವರಣದಲ್ಲಿ ಕಳೆದ ಮಂಗಳವಾರ ಜರಗಿದ ಸಮಾರಂಭದಲ್ಲಿ ರಾಜ್ಯ ಗೃಹ ಸಚಿವ ಡಾ. ಪರಮೇಶ್ವರ್‌ಸೇವಾಸಾಧಕರಿಗೆ ಪದಕಪ್ರದಾನ ಮಾಡಿ ಗೌರವಿಸಿದರು. ಗೃಹರಕ್ಷಕರಾಗಿ 1986 ರಿಂದ ಹಾಗೂ ಘಟಕಾಧಿಕಾರಿಯಾಗಿ 2015ರಿಂದ 2024 ರ ಅವಧಿಗೆ ಒಟ್ಟು 38 ವರ್ಷಗಳ ಕರ್ತವ್ಯ ನಿರ್ವಹಿಸಿದ್ದಾರೆ.