ಎಕ್ಸಲೆಂಟ್: ನೂತನ ಪ್ರಾಂಶುಪಾಲರಾಗಿ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ


Logo

Published Date: 29-May-2026 Link-Copied

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರಸಿದ್ಧ ಶಿಕ್ಷಣ ತಜ್ಞ ಹಾಗೂ ಆಡಳಿತಗಾರರಾದ ಪುಷ್ಪರಾಜ್ ಬಿ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಇದೇ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ (Academic Director) ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಬರೋಬ್ಬರಿ 30 ವರ್ಷಗಳ ಸುದೀರ್ಘ ಬೋಧನಾ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಪುಷ್ಪರಾಜ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಪರಿಚಿತ ಹಾಗೂ ಗೌರವಾನ್ವಿತ ಹೆಸರಾಗಿದ್ದಾರೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಆಪ್ತಸಮಾಲೋಚಕರು (Counsellor), ತರಬೇತುದಾರರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ವಿಧಾನಗಳ ಕುರಿತು ತರಬೇತಿ ನೀಡಿದ್ದಾರೆ. ಇದರೊಂದಿಗೆ, ರಾಜ್ಯದಾದ್ಯಂತ ವಿವಿಧ ಕಾಲೇಜುಗಳ 20,000 ಕ್ಕೂ ಹೆಚ್ಚು ಶಿಕ್ಷಕರಿಗೆ 'ತರಗತಿ ನಿರ್ವಹಣೆ' (Classroom Management) ಕುರಿತು ವಿಶೇಷ ಕಾರ್ಯಾಗಾರ ಹಾಗೂ ತರಬೇತಿಯನ್ನು ನೀಡಿದ್ದಾರೆ. ದಕ್ಷ ಆಡಳಿತಗಾರರಾಗಿರುವ ಪುಷ್ಪರಾಜ್ ಬಿ. ಅವರು ಇದೀಗ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಈ ಸಂದರ್ಭದಲ್ಲಿ, ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್, ಅವರು ನೂತನ ಪ್ರಾಂಶುಪಾಲರನ್ನು ಅಭಿನಂದಿಸಿ, ಇವರ ಸಮರ್ಥ ನಾಯಕತ್ವದಲ್ಲಿ ಕಾಲೇಜು ಶೈಕ್ಷಣಿಕವಾಗಿ ಮತ್ತಷ್ಟು ಉನ್ನತ ಯಶಸ್ಸನ್ನು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಸಂಪತ್ ಕುಮಾರ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img