ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ


Logo

Published Date: 02-Feb-2024 Link-Copied

ಧರ್ಮಸ್ಥಳ : ದೇವರ ಪೂಜೆ, ಆರಾಧನೆ, ಅಭಿಷೇಕದಿಂದ ಪಾಪಗಳ ಕ್ಷಯವಾಗಿ ಪುಣ್ಯ ಸಂಚಯವಾಗುತ್ತದೆ ಎಂದು ಪರಮಪೂಜ್ಯ ದಿವ್ಯಸಾಗರ ಮುನಿಮಹಾರಾಜರು ಹೇಳಿದರು. ಅವರು ಶುಕ್ರವಾರ (ಫೆ. 2) ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕದ ಸಂದರ್ಭ ಮಂಗಲ ಪ್ರವಚನ ನೀಡಿದರು. ನಂತರ ಪ.ಪೂ. ಆದಿಸಾಗರ ಮುನಿಮಹಾರಾಜರು ಮತ್ತು ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಪರಮಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಾಭಿಷೇಕದಲ್ಲಿ ಭಾಗವಹಿಸಿದರು. ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ರತ್ನಗಿರಿಯಲ್ಲಿ ೨೧೬ ಕಲಶಗಳಿಂದ ಜಲಾಭಿಷೇಕ ಹಾಗೂ ಎಳನೀರು, ಗಂಧ, ಚಂದನ, ಅಷ್ಟಗಂಧ ಮೊದಲಾದ ಮಂಗಳದ್ರವ್ಯಗಳಿಂದ ಪಾದಾಭಿಷೇಕ ನಡೆಯಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img