ವೇಣೂರು ಭ| ಬಾಹುಬಲಿ ಮಹಾಮಸ್ತಕಾಭಿಷೇಕ: ಬೆಳ್ತಂಗಡಿಯಲ್ಲಿ ಅಧಿಕಾರಿಗಳೊಂದಿಗೆ ಎಸಿ ಸಭೆ


Logo

Published Date: 08-Feb-2024 Link-Copied

ಫೆ. 22ರಿಂದ ಮಾ. 1ರ ತನಕ ನಡೆಯಲಿರುವ ವೇಣೂರಿನ ಭ| ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಯಶಸ್ಸಿಗಾಗಿ ಪೂರ್ವಸಿದ್ಧತೆ ಸಭೆಯು ಬೆಳ್ತಂಗಡಿಯ ಆಡಳಿತ ಸೌಧದಲ್ಲಿ ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮೊಹಾಪಾತ್ರ ಅವರ ಅಧ್ಯಕ್ಷತೆಯಲ್ಲಿ ಫೆ. 7ರಂದು ನಡೆಯಿತು. ಸಭೆಯನ್ನು ಮುನ್ನಡೆಸಿದ ಸಹಾಯಕ ಕಮಿಷನರ್ ಎಲ್ಲ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರಲ್ಲದೆ, ಅಧಿಕಾರಿಗಳ ಜವಾಬ್ದಾರಿಗಳನ್ನು ಮನವರಿಕೆ ಮಾಡಿದರು. ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಅವರ ಹೆಸರು ಮತ್ತು ಮೊಬೈಲ್ ನಂಬರನ್ನು ತಾಲೂಕು ತಹಶೀಲ್ದಾರರಿಗೆ ನೀಡುವಂತೆ ಸೂಚಿಸಿದರು. ಮಹಾಮಸ್ತಕಾಭಿಷೇಕದ ಸಂದರ್ಭ ಬಾಹುಬಲಿ ಬೆಟ್ಟದಲ್ಲಿ ಇಲಾಖಾ ಅಧಿಕಾರಿಗಳಿಗಾಗಿ ಪ್ರತ್ಯೇಕ ಮಾಹಿತಿ ಕೇಂದ್ರ ತೆರೆಯುವಂತೆ ಸೂಚಿಸಿದರು. ಒಟ್ಟಿನಲ್ಲಿ ಮಹಾಮಸ್ತಕಾಭಿಷೇಕದ ಯಶಸ್ಸಿಗೆ ಸರಕಾರದ ಕಡೆಯಿಂದ ಸರ್ವರೀತಿಯ ಸಹಕಾರ ನೀಡಲು ಹಾಗೂ ಎಲ್ಲೂ ಯಾವುದೇ ಪ್ರಮಾದವಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದರು. ಸಭೆಯಲ್ಲಿ ಮಹಾಮಸ್ತಕಾಭಿಷೇಕದ ಸರಕಾರದ ಪರವಾಗಿ ನೋಡಲ್ ಅಧಿಕಾರಿ ಮಾಣಿಕ್ಯ ಎಂ., ಸಹಾಯಕ ನೋಡಲ್ ಅಧಿಕಾರಿ ಡಾ| ಜಯಕೀರ್ತಿ ಜೈನ್, ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್., ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಅಳದಂಗಡಿ ಅರಮನೆಯ ಡಾ| ಪದ್ಮಪ್ರಸಾದ್ ಅಜಿಲ, ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ಇಂದ್ರ ಉಪಸ್ಥಿತರಿದ್ದು ಅಗತ್ಯ ಸಲಹೆ-ಸೂಚನೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ನಿತಿನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಶಿವಕುಮಾರ್, ಆರೋಗ್ಯ ಇಲಾಖೆ ತಾಲೂಕು ವೈದ್ಯಾಧಿಕಾರಿ ಡಾ| ಪ್ರಕಾಶ್, ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಶ್ರೀಶೈಲ, ಅಗ್ನಿಶಾಮಕದಳ ಇಲಾಖೆಯ ಪ್ರಭಾರ ಅಧಿಕಾರಿ ನೀಲಯ್ಯ ಗೌಡ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿ ಉದಯ ಶೆಟ್ಟಿ‌, ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕ್ಲಮೆಂಟ್ ಬೆಂಜಮಿನ್, ವೇಣೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ವೇಣೂರು ಕಂದಾಯ ನಿರೀಕ್ಷಕ ಕುಮಾರ ಸ್ವಾಮಿ, ತಾ.ಪಂ. ಕಚೇರಿ ವ್ಯವಸ್ಥಾಪಕ ಪ್ರಶಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪ್ರಿಯಾ ಆಗ್ನೆಸ್ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img