ಬಾವಂತಬೆಟ್ಟು ನಿರಂಜನ್ ಜೈನ್ ನಿಧನ
Published Date: 12-Feb-2024 Link-Copied
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿ, ಹಿರಿಯ ಸಹಕಾರಿ ಧುರೀಣ, ಸಜ್ಜನ ರಾಜಕಾರಣಿ ನಿರಂಜನ್ ಜೈನ್ ಬಾವಂತಬೆಟ್ಟು (75 ವ.)ರವರು ಇಂದು (ಫೆ. 12) ನಿಧನರಾಗಿದ್ದಾರೆ. ಇವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಣಿಯೂರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸುಮಾರು 38 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರು ಪತ್ನಿ ಅರುಣ, ಮಕ್ಕಳಾದ ಪವಿತ್ರ, ಚೈತ್ರ ಹಾಗೂ ಅಪಾರ ಬಂಧು-ವರ್ಗದವರನ್ನು ಅಗಲಿದ್ದಾರೆ