ವೇಣೂರು ಭಗವಾನ್‌ ಬಾಹುಬಲಿ ಕ್ಷೇತ್ರಕ್ಕೆ ಮೈಸೂರು ಮಹಾರಾಜರ ಭೇಟಿ


Logo

Published Date: 27-Feb-2024 Link-Copied

ವೇಣೂರು ಭ| ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ 5ನೇ ದಿನದ ಕಾರ್ಯಕ್ರಮಕ್ಕೆ ಮೈಸೂರು ಅರಮನೆ, ಮೈಸೂರು ಮಹಾಸಂಸ್ಥಾನದ ಮಹಾರಾಜರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಆಗಮಿಸಿದ್ದರು. ಮಹಾರಾಜರನ್ನು ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸ್ವಾಗತಿಸಿ ಬಾಹುಬಲಿ ಕ್ಷೇತ್ರಕ್ಕೆ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು, ಸೇವಾಕರ್ತರಾದ ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಯುವರಾಜ್‌ ಜೈನ್ ದಂಪತಿಗಳು, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್‌ ಕುಮಾರ್‌ ಇಂದ್ರ, ಕೆ. ಕೃಷ್ಣರಾಜ್‌ ಹೆಗ್ಡೆ, ಮುಲ್ಕಿ ಅರಮನೆಯ ಎಂ. ಗೌತಮ್‌ ಜೈನ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಮೊದಲಿಗೆ ಭ| ಬಾಹುಬಲಿ ಸ್ವಾಮಿಗೆ ನಮಿಸಿ, ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕೊನೆಗೆ ರಾತ್ರಿ ನಡೆದ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿಯೂ ಭಾಗವಹಿಸಿದ್ದರು. ಇದಕ್ಕೂ ಮೊದಲು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಅರಮನೆಗೆ ತಿಮ್ಮಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ಆಹ್ವಾನದ ಮೇರೆಗೆ ಮೈಸೂರಿನ ಅರಮನೆಯ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು. ಅಜಿಲರು ಮಹಾರಾಜರನ್ನು ಗೌರವಿಸಿದ ಸಂದರ್ಭದಲ್ಲಿ ಶಿವಪ್ರಸಾದ್ ಅಜಿಲರು, ದೇವೇಂದ್ರ ಹೆಗ್ಡೆ ಕೊಕ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img