ಧರ್ಮಸ್ಥಳ: 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ
Published Date: 19-Apr-2024 Link-Copied
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ನೆರವೇರುವ ಉಚಿತ ಸಾಮೂಹಿಕ ವಿವಾಹವು ದಿನಾಂಕ 01-05-2024ನೇ ಬುಧವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಜರುಗಲಿರುವುದು. ಈ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾಗಲಿಚ್ಛಿಸುವವರು ದಿನಾಂಕ 25-04-2024ನೇ ಗುರುವಾರದ ಒಳಗಾಗಿ ವಧೂ-ವರರ ಹೆಸರು ದಾಖಲು ಮಾಡಿಸುವುದು. ಬರುವಾಗ ಮಂಡಲ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಯಾ ಕಾರ್ಯದರ್ಶಿಯವರಿಂದ ವಧೂ-ವರರ ಹೆಸರು, ಪ್ರಾಯ, ಹಿರಿಯರ ಒಪ್ಪಿಗೆ ಹಾಗೂ ಅವಿವಾಹಿತನೆಂಬುದಕ್ಕೆ ಅವಶ್ಯ ದೃಢಪತ್ರಿಕೆ ಮತ್ತು ವಧೂ-ವರರ ಇತ್ತೀಚಿನ ಭಾವಚಿತ್ರ 1+1 (ಪಾಸ್‌ಪೋರ್ಟ್ ಅಳತೆ) ತರಬೇಕು. ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆಕಣ ಮತ್ತು ಮಂಗಲಸೂತ್ರವನ್ನು ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ: ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿರುವ ಸಾಮೂಹಿಕ ವಿವಾಹ ನೋಂದಣಿ ಕಚೇರಿಯನ್ನು ಸಂಪರ್ಕಿಸಿ: 9663464648/8147263422/08256 - 266644 ಅರ್ಜಿ ಮತ್ತು ಹೆಚ್ಚಿನ ಮಾಹಿತಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ: www.shridharmasthala.org ವಿ.ಸೂ.: ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.