ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವ
Published Date: 04-Jun-2024 Link-Copied
ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವವು ಜೂನ್ 3ರಂದು ಶಾಲಾ ಆವರಣದಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟಕರಾಗಿ ಮೂಡುಬಿದಿರೆಯ ಖ್ಯಾತ ಲೆಕ್ಕ ಪರಿಶೋಧಕರಾದ ಉಮೇಶ್ ರಾವ್ ಮಿಜಾರುರವರು ಉಪಸ್ಥಿತರಿದ್ದು, ಕಷ್ಟವನ್ನು ಎದುರಿಸುವ ಸಾಮರ್ಥ್ಯ, ಸಮಯಪ್ರಜ್ಞೆ ಹಾಗೂ ಶಾಲಾ ನಿಯಮಗಳನ್ನು ಸರಿಯಾಗಿ ವಿದ್ಯಾರ್ಥಿಗಳು ಪಾಲಿಸಿದರೆ ಗೆಲುವು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ಶಾಲೆಯಲ್ಲಿ ಪೂರಕವಾದ ಕಲಿಕಾ ವಾತಾವರಣ ಇದ್ದಾಗ ಮಕ್ಕಳು ಉತ್ತಮ ರೀತಿಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಹತ್ತನೆಯ ತರಗತಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಸುವಿತ್ ಭಂಡಾರಿ, ಸುಯೋಗ್ ಅಂಚನ್, ಪೃಥ್ವಿ ಪ್ರಕಾಶ್ ಭಂಡಾರಿ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಇಸ್ರೋ ‘ಯುವಿಕ’ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ, ಸಂಸ್ಥೆಯ ಹಳೆಯ ವಿದ್ಯಾರ್ಥಿನಿಯಾಗಿರುವ ಮೌಲ್ಯ ವೈ. ಆರ್. ಜೈನ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಶಾಲಾ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕರಾದ ಪುಪ್ಪರಾಜ್ ಬಿ., ಶಾಲಾ ಪ್ರಾಂಶುಪಾಲರಾದ ಸುರೇಶ ಹಾಗೂ ಶೈಕ್ಷಣಿಕ ಸಂಯೋಜಕರಾದ ಶ್ರೀಪ್ರಸಾದ್‌ರವರು ಉಪಸ್ಥಿತರಿದ್ದರು. ವಿಮಲಾ ಶೆಟ್ಟಿಯವರು ಕಾರ್ಯಕ್ರಮದ ನಿರೂಪಿಸಿ, ಪದ್ಮಾವತಿಯವರು ವಂದಿಸಿದರು.