ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ
Published Date: 12-Jun-2024 Link-Copied
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಕರಿಮಣೇಲು ಮಾಗಣೆಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ಇವರು ಹೃದಯಾಘಾತದಿಂದ ಇಂದು(ಜೂ. 12) ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ, ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ. ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕದ ಮಾಧ್ಯಮ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 2000 ಇಸವಿಯ ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಮಸ್ತಕಾಭಿಷೇಕದ ದೃಶ್ಯಗಳನ್ನು ವಿದ್ಯುನ್ಮಾನಗಳ ಮೂಲಕ ಪ್ರಚಾರ ಪಡಿಸುವ ವಿಧಾನವನ್ನು ಮೊತ್ತಮೊದಲಿಗೆ ಈ ಪರಿಸರದಲ್ಲಿ ಪ್ರಚಾರ ಪಡಿಸಿದ ಹೆಗ್ಗಳಿಕೆ ಇವರದು. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.