ಮಂಗಳೂರು ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ
Published Date: 28-Jun-2024 Link-Copied
ಮಿತವಾದ ವ್ಯಾಯಾಮ, ಮಿತವಾದ ಆಹಾರ ಪದ್ಧತಿಯನ್ನು ರೂಢಿಸಿಕೊಂಡಾಗ ಉತ್ತಮ ಆರೋಗ್ಯ ಪಡೆಯಬಹುದು ಎಂದು ಕೆ. ಎಂ.ಸಿ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ| ದಿತೇಶ್ ಎಂ. ಅವರು ಹೇಳಿದರು. ಇವರು ಲಾರ್ಡ್ ಮಹಾವೀರ ಜೈನ್ ಬೋರ್ಡಿಂಗ್ ಶಾಲೆಯ ವರ್ಧಮಾನ ಸಿದ್ದಾರ್ಥ ಸಭಾಂಗಣದಲ್ಲಿ ಭಾರತೀಯ ಜೈನ್ ಮಿಲನ್ ಮಂಗಳೂರು ಇದರ ಮಾಸಿಕ ಸಭೆಯ ಸಂದರ್ಭದಲ್ಲಿ ಹೃದಯದ ಆರೋಗ್ಯ ಕಾಪಾಡುವುದು ಹೇಗೆ? ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಬಳಿಕ ಎನ್. ಜಗತ್ಪಾಲ್, ಸುಮತಿ ದಂಪತಿಯನ್ನು ಸಮ್ಮಾನಿಸಲಾಯಿತು. ದ.ಕ. ಜೈನ್ ಮಿಲನ್ ನಿರ್ದೇಶಕ ಸುಕುಮಾರ ಬಳ್ಳಾಲ್, ಸುರೇಶ್ ಬಳ್ಳಾಲ್, ಪುಷ್ಪರಾಜ್ ಜೈನ್, ಕಾರ್ಯದರ್ಶಿ ವೈಶಾಲಿ ಪಡಿವಾಲ್, ಪ್ರಮುಖರಾದ ನಿರ್ಮಲ್ ಕುಮಾರ್, ಮಹಾವೀರ ಪ್ರಸಾದ್, ಸನತ್ ಕುಮಾರ್ ಜೈನ್, ಸಂತೋಷ್ ಕುಮಾರ್ ಜೈನ್ ಉಪಸ್ಥಿತರಿದ್ದರು ಮಂಗಳೂರು ಭಾರತೀಯ ಜೈನ್ ಮಿಲನ್ ಅಧ್ಯಕ್ಷರಾದ ರತ್ನಾಕರ್ ಜೈನ್ ಸ್ವಾಗತಿಸಿದರು. ರಾಜೇಶ್ ಎಂ. ಸಮ್ಮಾನಿತರನ್ನು ಪರಿಚಯಿಸಿದರು. ಪ್ರಿಯಾ ಸುದೇಶ್ ನಿರೂಪಿಸಿ, ವಂದಿಸಿದರು.