ಯೋಗ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ: ಡಾ. ಶಶಿಕಾಂತ ಜೈನ್‌ರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
Published Date: 17-Aug-2024 Link-Copied
ಯೋಗ ಕ್ಷೇತ್ರದಲ್ಲಿ ಮಾಡಿದ ಉನ್ನತ ಸೇವೆ, ಸಾಧನೆಗಾಗಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಏಶಿಯಾ ಪೆಸಿಫಿಕ್ ಐಕಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅ. 22 ರಂದು ಗುರುವಾರ ಕೊಲೊಂಬೊದಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.