ಎಸ್.ಡಿ.ಎಂ. ರಿಸರ್ಚ್ ಇನ್‌ಸ್ಟಿಟ್ಯೂಟ್ ಫಾರ ಬಯೋಮೆಡಿಕಲ್ ಸೈನ್ಸಸ್‌ನಲ್ಲಿ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ
Published Date: 24-Aug-2024 Link-Copied
ಸತ್ತೂರು, ಧಾರವಾಡ: "ಆರೋಹಣ"ವನ್ನು 23 ಆಗಸ್ಟ್ 2024 ರಂದು ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಉದ್ಘಾಟಿಸಿದರು. ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ವಿವಿಧ ಪಠ್ಯೇತರ ಚಟುವಟಿಕೆ, ಮನರಂಜನೆ ಕಾರ್ಯಕ್ರಮ, ಕ್ರೀಡೆ, ರಂಗೋಲಿ, ಛಾಯಾಗ್ರಹಣ, ಚಿತ್ರಕಲೆ, ಅಡುಗೆ, ಮೆಹಂದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಚಟುವಟಿಕೆಗಳನ್ನು ಒಳಗೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಮನಸ್ಸು ಮತ್ತು ದೇಹದ ಸಮತೋಲನೆಯನ್ನು ಕಾಪಾಡಿಕೊಳ್ಳಬಹುದು ಹಾಗೂ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು. ಮುಖ್ಯ ಅತಿಥಿಗಳಾದ ಡಾ. ನಿರಂಜನ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮತನಾಡುತ್ತಾ: "ಆರೋಹಣ" ಎಂದರೆ ಉತ್ತಮ ಸಾಧನೆಗಾಗಿ ಸೃಜನಶೀಲತೆಯನ್ನು ಕಂಡುಕೊಳ್ಳುವುದು. ಸೃಜನಶೀಲತೆಯು ಅವರ ಅಧ್ಯಯನದ ಉದ್ದಕ್ಕೂ ವಿದ್ಯಾರ್ಥಿಗಳ ಶಕ್ತಿಯಾಗಿರಬೇಕು. ವಿದ್ಯಾರ್ಥಿಗಳು ಪರಸ್ಪರ ಹೋಲಿಕೆ ಮಾಡದೆ ಆರೋಗ್ಯಕರ ಸ್ಪರ್ಧೆಯನ್ನು ಅಳವಡಿಸಿಕೊಳ್ಳಬೇಕು. ತಪ್ಪುಗಳನ್ನು ಒಪ್ಪಿಕೊಂಡು ವಿದ್ಯಾರ್ಥಿಗಳು ಅವುಗಳ ಪುನರಾವರ್ತನೆಯಾಗದಂತೆ ಮುನ್ನಡೆಯಬೇಕು. ಶಿಕ್ಷಣವು ಸ್ಪಷ್ಟ ಉದ್ದೇಶ ಮತ್ತು ಜಾಗತಿಕ ಬೆಳವಣಿಗೆಯತ್ತ ಗಮನಹರಿಸಬೇಕು ಎಂದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು, ಸಂಶೋಧನಾ ನಿರ್ದೇಶಕರಾದ ಡಾ. ಕೆ. ಸತ್ಯಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಎಸ್.ಡಿ.ಎಂ. ರಿಸರ್ಚ್ ಇನ್‌ಸ್ಟಿಟ್ಯೂಟ್ ಫಾರ ಬಯೋಮೆಡಿಕಲ್ ಸೈನ್ಸಸ್ ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಅಜಯಕುಮಾರ ಓಲಿ ಸ್ವಾಗತಿಸಿದರು. ಡಾ. ಅಜಯ್ ಎಸ್.ಕೆ ಪ್ರಶಸ್ತಿ ವಿಜೇತರ ಪಟ್ಟಿಯನ್ನು ವಾಚಿಸಿದರು. ಕುಮಾರಿ ಅಕ್ಸಾ ಶಫೀಕ್ ಕಾರ್ಯಕ್ರಮ ನಿರೂಪಿಸಿದರು. ಶ್ರೀದೇವಿ ಆಚಾರ್ಯ ವಂದನಾರ್ಪಣೆ ಸಲ್ಲಿಸಿದರು.