ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ
Published Date: 25-Sep-2024 Link-Copied
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಘವೇಂದ್ರ ಆಚಾರ್ಯ, ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರು ಹಾಗೂ ವಿದುಷಿ ಅನುಸೂಯ ಪಾಠಕ್, ಉಜಿರೆ ಇವರು ಹಾಡುಗಳನ್ನು ಸುಂದರವಾಗಿ ಕಲಿಸಿಕೊಟ್ಟರು. ಕಮ್ಮಟಕ್ಕೆ ಆಗಮಿಸಿದ ಪೂಜ್ಯನೀಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಯವರು ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಪ್ರೇರೇಪಿಸಿದರು. ಉಪನ್ಯಾಸ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಸಮಾಜಕ್ಕೆ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. 84 ಲಕ್ಷ ಜೀವರಾಶಿಗಳಲ್ಲಿ ಮಾನವಜನ್ಮ ದೊಡ್ಡದು. ಏಕೆಂದರೆ ಇತರ ಎಲ್ಲಾ ಪ್ರಾಣಿಗಳಿಗಿಂತ ಮನುಷ್ಯನಿಗೆ ವಿವೇಚನಾ ಶಕ್ತಿ ಅಂದರೆ ಯಾವುದು ಸರಿ, ಯಾವುದು ತಪ್ಪು ಎಂದು ನಿರ್ಧರಿಸುವ ಶಕ್ತಿ ಇದೆ. ಆದುದರಿಂದ ಎಲ್ಲರೂ ತಮ್ಮ ಆತ್ಮಸಾಕ್ಷಿಗೆ ಸರಿಯಾಗಿ ಕೆಲಸ ಮಾಡಿದಾಗ ಎಲ್ಲವೂ ಪರಿಶುದ್ಧವಾಗಿ ಮಾಡಿದ ಕೆಲಸ ಕೂಡಾ ಉತ್ತಮ ಪರಿಣಾಮವನ್ನು ಬೀರುತ್ತದೆ. ಭಗವಂತನ ಭಜನೆಯಿಂದ ನಮ್ಮ ಆತ್ಮ ಪರಿಶುದ್ಧವಾಗಿ, ನಾವು ಮಾಡುವ ಎಲ್ಲಾ ಕೆಲಸಗಳು ಕೂಡಾ ಪರಿಶುದ್ಧವಾಗಿರುತ್ತವೆ. ಇಂತಹ ಕಾರ್ಯಗಳಿಂದ ನಮಗೂ ಆತ್ಮತೃಪ್ತಿ ಸಿಗುತ್ತದೆ ಹಾಗೂ ಸಮಾಜಕ್ಕೂ ಒಳಿತಾಗುತ್ತದೆ. ಭಜನಾ ತರಬೇತಿ ಕಮ್ಮಟದಲ್ಲಿ ನೀಡಿದ ಎಲ್ಲಾ ಮಾಹಿತಿ ಮಾರ್ಗದರ್ಶನವನ್ನು ಮುಂದೆ ನೀವು ನಿತ್ಯವೂ ಜೀವನದಲ್ಲಿ ಅನುಷ್ಠಾನಗೊಳಿಸಿ, ಇತರರನ್ನೂ ಪ್ರೇರೇಪಿಸಿದಲ್ಲಿ ನಿಮಗೆ ಆತ್ಮತೃಪ್ತಿಯೂ ಸಿಗುತ್ತದೆ. ಅಲ್ಲದೆ ರಾಮರಾಜ್ಯದ ಕನಸು ನನಸಾಗುತ್ತದೆ. ಈ ದಿಸೆಯಲ್ಲಿ ನೀವೆಲ್ಲರೂ ಸಿದ್ಧರಾಗಿ, ಬದ್ಧರಾಗಿ ಸಮಾಜ ಕಲ್ಯಾಣ ಕಾರ್ಯಗಳನ್ನು ಮಾಡಬಹುದು. ಇದರಿಂದಾಗಿ ಮಾನಸಿಕ ನೆಮ್ಮದಿ ಹಾಗೂ ಶಾಂತಿ ಸಿಗುವುದಲ್ಲದೆ ಸಮಾಜ ಸೇವೆ ಮಾಡಿದ ಸಂತೃಪ್ತಿಯೂ ನಿಮಗೆ ಸಿಗುತ್ತದೆ ಎಂದು ಹೇಳಿದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಶ್ರೀ ಹೆಗ್ಗಡೆಯವರು ಬಹುಮುಖಿ ಸಮಾಜ ಸೇವಾಕಾರ್ಯಗಳ ಮೂಲಕ ಮಾಡುತ್ತಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ನೀಡಿದರು. ಸಂಜೆ ಭಜಣಾ ತಂಡದಿಂದ ನಗರ ಭಜನೆ ನಡೆಯಿತು. ರಂಗಶಿವ ಕಲಾಬಳಗ, ಧರ್ಮಸ್ಥಳ ಇವರಿಂದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ನಿರ್ದೇಶನದಲ್ಲಿ ಮೂಡಿಬಂದ “ಕೇಳೆಸಖಿ ಚಂದ್ರಮುಖಿ’ ನಾಟಕ ಪ್ರದರ್ಶನ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್‌ರವರು ದಿನದ ಕಾರ್ಯಕ್ರಮವನ್ನು ಸಂಘಟಿಸಿದರು, ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಸಾಲ್ಯನ್, ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಸದಸ್ಯರಾದ ಪದ್ಮರಾಜ್ ಜೈನ್ ಸಹಕರಿಸಿದರು. ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಶ್, ನಾಗೇಶ್ ಹಾಗೂ ಚೈತ್ರ ನಡೆಸಿಕೊಟ್ಟರು. ಶಿಬಿರಾರ್ಥಿಗಳಾಗಿ ರಾಘವೇಂದ್ರ, ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು.