ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ‘ಶ್ರೀಸಾನ್ನಿಧ್ಯ’ ಕ್ಯೂಕಾಂಪ್ಲೆಕ್ಸ್‌ ಉದ್ಘಾಟನೆ


Logo

Published Date: 07-Jan-2025 Link-Copied

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ಸುಸಜ್ಜಿತ ಸೌಕರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ‘ಶ್ರೀಸಾನ್ನಿಧ್ಯ’ ಮತ್ತು 2024-25ರ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ ನೆರವೇರಿಸಿ ಅವರು ಮಂಗಳವಾರ ಇಲ್ಲಿನ ಅಮೃತವರ್ಷಿಣಿ ಸಭಾಭವನದಲ್ಲಿ ಮಾತನಾಡಿದರು. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿಯಾದರೆ, ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ. ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು ಎಂದು ಅಭಿಪ್ರಾಯಪಟ್ಟರು. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದು ಅವರು ಹೇಳಿದರು. ದೇಸ ಸೇವೆಗೆ ಮುಂದೆ ಬನ್ನಿ: ನಾವು ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪಟೋಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ಆದರೆ ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಬಾಹ್ಯ ಶಕ್ತಿಗಳು ನಮ್ಮನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಸಾರ್ವಜನಿಕ ಸೊತ್ತುಗಳನ್ನು ನಾಶಮಾಡುವಂತಹ ವೈಪರೀತ್ಯಗಳು ಸಂಭವಿಸುತ್ತಿವೆ. ಇವುಗಳಿಗೆ ಪೂರ್ಣ ತಿಲಾಂಜಲಿ ನೀಡಬೇಕು. 2047ರ ವೇಳೆಗೆ ಪರಿಪೂರ್ಣ ಸಶಕ್ತ ಭಾರತದ ಗುರಿಯನ್ನು ತಲುಪಬೇಕಾಗಿದೆ. ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ. ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ ಎಂದರು. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ ಇತ್ಯಾದಿ ಬಗ್ಗೆ ಯೋಚಿಸಬೇಕು. ಅತ್ಯುನ್ನತ ನಾಗರಿಕತೆ ನಮ್ಮದು. ಯಾವುದಕ್ಕೂ ದ್ವೇಷ ಉತ್ತರವಲ್ಲ. ದೇಶದಲ್ಲಿ ಸಮಗ್ರತೆ, ವೈವಿಧ್ಯತೆಯನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಮೂಡಬೇಕಾಗಿದೆ. ಸಾಮಾಜಿಕ ಸದ್ಭಾವ ಬರಬೇಕಾದರೆ ಭಾರತಮಾತೆ ಒಂದೇ ಎಂದು ಭಾವಿಸಿದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ. ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಅವರು ಆಶಿಸಿದರು. ಭಾರತೀಯ ಕಾರ್ಪೊರೇಟ್‌ ಸಂಸ್ಥೆಗಳು ಧಾರ್ಮಿಕ ಸಂಸ್ಥೆಗಳ ಮೂಲಸೌಕರ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉತ್ತೇಜಿಸಲು ಸಿಎಸ್‌ಆರ್‌ ನಿಧಿಯನ್ನು ಕಾಣಿಕೆಯಾಗಿ ನೀಡುತ್ತಿವೆ. ಈ ಭೂಮಿಯನ್ನು ಪರಿಸರಸ್ನೇಹಿಯಾಗಿ ಕಾಣುವುದರ ಜೊತೆಗೆ ಎಳವೆಯಲ್ಲೇ ಮಕ್ಕಳು ಧಾರ್ಮಿಕತೆಗೆ ತೆರೆದುಕೊಳ್ಳುವಂತೆ ಮಾಡಬೇಕು. ದೇಶಕ್ಕಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಎಲ್ಲರಲ್ಲೂ ಬೆಳೆಸಬೇಕು ಎಂದು ಅವರು ಆಶಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮಗಳ ಅಧ್ಯಕ್ಷೆ ಡಾ.ಹೇಮಾವತಿ ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್‌, ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್‌ ವೇದಿಕೆಯಲ್ಲಿದ್ದರು. ಉಪನ್ಯಾಸಕ ಡಾ.ಶ್ರೀಧರ ಭಟ್‌ ನಿರೂಪಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img