ಪಂಚಕಲ್ಯಾಣ ಮಹೋತ್ಸವ
Published Date: 17-Feb-2025 Link-Copied
ಸಾಗರ ತಾಲೂಕಿನ ಸುಳ್ಳಳ್ಳಿ ಅಂಚೆ, ಆವಿಗೆಯಲ್ಲಿ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿಯ ಜಿನ - ಚೈತ್ಯಾಲಯವನ್ನು ನೂತನವಾಗಿ ನಿರ್ಮಿಸಿದ್ದು, ಇದರ ಪಂಚಕಲ್ಯಾಣ ಮಹೋತ್ಸವ ಮತ್ತು ಮಾನಸ್ತಂಭೋಪರಿ ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಹಾಗೂ ಕನಕಗಿರಿ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕಂಬದಹಳ್ಳಿ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಹೊಂಬುಜ ಶ್ರೀ ಜೈನ ಮಠದ ಪ.ಪೂ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹಾಗೂ ನರಸಿಂಹರಾಜಪುರ ಶ್ರೀ ಜೈನ ಮಠದ ಪ.ಪೂ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಇವರುಗಳ ದಿವ್ಯ ಸಾನ್ನಿಧ್ಯದಲ್ಲಿ ಇಂದಿನಿಂದ (ಫೆ.17) ಪ್ರಾರಂಭಗೊಂಡು ದಿನಾಂಕ 21-02-2025ನೇ ಶುಕ್ರವಾರದವರೆಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.