Article Image

ಎಸ್.ಡಿ.ಎಂ. ರಿಸರ್ಚ್ ಇನ್‌ಸ್ಟಿಟ್ಯೂಟ್ ಫಾರ ಬಯೋಮೆಡಿಕಲ್ ಸೈನ್ಸಸ್‌ನಲ್ಲಿ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ

Article Image

ಎಸ್.ಡಿ.ಎಂ. ರಿಸರ್ಚ್ ಇನ್‌ಸ್ಟಿಟ್ಯೂಟ್ ಫಾರ ಬಯೋಮೆಡಿಕಲ್ ಸೈನ್ಸಸ್‌ನಲ್ಲಿ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ

ಸತ್ತೂರು, ಧಾರವಾಡ: "ಆರೋಹಣ"ವನ್ನು 23 ಆಗಸ್ಟ್ 2024 ರಂದು ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಉದ್ಘಾಟಿಸಿದರು. ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ವಿವಿಧ ಪಠ್ಯೇತರ ಚಟುವಟಿಕೆ, ಮನರಂಜನೆ ಕಾರ್ಯಕ್ರಮ, ಕ್ರೀಡೆ, ರಂಗೋಲಿ, ಛಾಯಾಗ್ರಹಣ, ಚಿತ್ರಕಲೆ, ಅಡುಗೆ, ಮೆಹಂದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಚಟುವಟಿಕೆಗಳನ್ನು ಒಳಗೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಮನಸ್ಸು ಮತ್ತು ದೇಹದ ಸಮತೋಲನೆಯನ್ನು ಕಾಪಾಡಿಕೊಳ್ಳಬಹುದು ಹಾಗೂ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು. ಮುಖ್ಯ ಅತಿಥಿಗಳಾದ ಡಾ. ನಿರಂಜನ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮತನಾಡುತ್ತಾ: "ಆರೋಹಣ" ಎಂದರೆ ಉತ್ತಮ ಸಾಧನೆಗಾಗಿ ಸೃಜನಶೀಲತೆಯನ್ನು ಕಂಡುಕೊಳ್ಳುವುದು. ಸೃಜನಶೀಲತೆಯು ಅವರ ಅಧ್ಯಯನದ ಉದ್ದಕ್ಕೂ ವಿದ್ಯಾರ್ಥಿಗಳ ಶಕ್ತಿಯಾಗಿರಬೇಕು. ವಿದ್ಯಾರ್ಥಿಗಳು ಪರಸ್ಪರ ಹೋಲಿಕೆ ಮಾಡದೆ ಆರೋಗ್ಯಕರ ಸ್ಪರ್ಧೆಯನ್ನು ಅಳವಡಿಸಿಕೊಳ್ಳಬೇಕು. ತಪ್ಪುಗಳನ್ನು ಒಪ್ಪಿಕೊಂಡು ವಿದ್ಯಾರ್ಥಿಗಳು ಅವುಗಳ ಪುನರಾವರ್ತನೆಯಾಗದಂತೆ ಮುನ್ನಡೆಯಬೇಕು. ಶಿಕ್ಷಣವು ಸ್ಪಷ್ಟ ಉದ್ದೇಶ ಮತ್ತು ಜಾಗತಿಕ ಬೆಳವಣಿಗೆಯತ್ತ ಗಮನಹರಿಸಬೇಕು ಎಂದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಹಣಕಾಸು ಅಧಿಕಾರಿಗಳಾದ ವಿ. ಜಿ. ಪ್ರಭು, ಸಂಶೋಧನಾ ನಿರ್ದೇಶಕರಾದ ಡಾ. ಕೆ. ಸತ್ಯಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಎಸ್.ಡಿ.ಎಂ. ರಿಸರ್ಚ್ ಇನ್‌ಸ್ಟಿಟ್ಯೂಟ್ ಫಾರ ಬಯೋಮೆಡಿಕಲ್ ಸೈನ್ಸಸ್ ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಅಜಯಕುಮಾರ ಓಲಿ ಸ್ವಾಗತಿಸಿದರು. ಡಾ. ಅಜಯ್ ಎಸ್.ಕೆ ಪ್ರಶಸ್ತಿ ವಿಜೇತರ ಪಟ್ಟಿಯನ್ನು ವಾಚಿಸಿದರು. ಕುಮಾರಿ ಅಕ್ಸಾ ಶಫೀಕ್ ಕಾರ್ಯಕ್ರಮ ನಿರೂಪಿಸಿದರು. ಶ್ರೀದೇವಿ ಆಚಾರ್ಯ ವಂದನಾರ್ಪಣೆ ಸಲ್ಲಿಸಿದರು.

ತೌಳವ ಇಂದ್ರ ಸಮಾಜ(ರಿ.)ದಿಂದ ಆಟಿಡೊಂಜಿ ವಿಹಾರ ಕೂಟ

Article Image

ತೌಳವ ಇಂದ್ರ ಸಮಾಜ(ರಿ.)ದಿಂದ ಆಟಿಡೊಂಜಿ ವಿಹಾರ ಕೂಟ

ತೌಳವ ಇಂದ್ರ ಸಮಾಜದ "ಆಟಿಡೊಂಜಿ ವಿಹಾರ ಕೂಟ" ವಿನೂತನವಾದ ಕಾರ್ಯಕ್ರಮ ರವಿವಾರ ಕಾರ್ಕಳ ಶಿರ್ಲಾಲಿನ ಪ್ರಕೃತಿ ಸೌಂದರ್ಯದ ಮಡಿಲಲ್ಲಿರುವ ಸೂಡಿ ಬಸದಿ ಪರಿಸರದಲ್ಲಿ ನಡೆಯಿತು.ಬಸದಿಗೆ ಬನ್ನಿ ಕಾರ್ಯಕ್ರಮದಿಂದ ಪ್ರೇರಿತರಾಗಿ ಈ ಕಾರ್ಯಕ್ರಮ ರೂಪಿಸಲಾಗಿದ್ದು ಸದಸ್ಯರೆಲ್ಲರೂ ಮೂಡಬಿದಿರೆಯಿಂದ ಸೂಡಿಗೆ ವಿಹಾರಗೈದು ಆಟಿ ಕೂಟ ನಡೆಸಿದರು. "ಸೂಡಿ ಬಸದಿ ಸಂದರ್ಶಿಸುವವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎನ್ನುತ್ತಾ "ಪ್ರಸ್ತುತ ಕಾಲಘಟ್ಟದಲ್ಲಿ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ ತಿಳಿಸುವ ಪ್ರಯತ್ನ ಇದಾಗಿದ್ದು ಹಳ್ಳಿ ಪ್ರದೇಶದಲ್ಲಿರುವ ಬಸದಿಗಳನ್ನು ಸಂದರ್ಶಿಸಿ ಸ್ಥಳೀಯರೊಡನೆ ಒಂದುದಿನ ಕಳೆದು ಸಂಪರ್ಕ ಕೊಂಡಿಯನ್ನು ಹೆಚ್ಚಿಸಿಕೊಳ್ಳುವುದು ಒಂದು ಒಳ್ಳೆಯ ಕಾರ್ಯಕ್ರಮ ಅಲ್ಲದೆ ಸ್ಥಳೀಯ ಆಡಳಿತ ಮಂಡಳಿಯವರ ಕಾರ್ಯಕ್ಕೆ ಪ್ರೋತ್ಸಾಹ ಹಾಗೂ ಬೆಂಬಲ ಕೊಟ್ಟಂತೆಯೂ ಆಗುತ್ತದೆ "ಎಂದು ಮುಖ್ಯ ಅತಿಥಿಯಾದ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದ ಗುಣಪಾಲ ಕಡಂಬ ಇಂದಿಲ್ಲಿ ಹೇಳಿದರು. ಸೂಡಿ ಬಸದಿ ಆಡಳಿತ ಮಂಡಳಿ ಕಾರ್ಯದರ್ಶಿ ಸೂರಜ್ ಜೈನ್ ರವರು ಮಾತನಾಡುತ್ತಾ ತೌಳವ ಇಂದ್ರ ಸಮಾಜದ ವಿನೂತನ ವಿಶಿಷ್ಟ ಶೈಲಿಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ ವೇದಿಕೆಯಲ್ಲಿದ್ದು ಶುಭ ಹಾರೈಸಿದರು. ತೌಳವ ಇಂದ್ರ ಸಮಾಜದ ಅಧ್ಯಕ್ಷರಾದ ಜ್ಞಾನಚಂದ್ರ ಇಂದ್ರರು ಪ್ರಾಸ್ತಾವಿಕ ಮಾತು ಆಡಿ, ಅತಿಥಿಗಳನ್ನು ಸ್ವಾಗತಿಸಿದರು. ನಿಕಟ ಪೂರ್ವ ಅಧ್ಯಕ್ಷರಾದ ಅರ್ಕಕೀರ್ತಿ ಇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೊದಲಿಗೆ ಬಸದಿಯ ಶ್ರೀ ಆದಿನಾಥ ಸ್ವಾಮಿಗೆ ಕ್ಷೀರಾಭಿಷೇಕ ಪೂಜೆಯನ್ನು ನಯನ ಇಂದ್ರರು ನೆರವೇರಿಸಿದ ಬಳಿಕ ಬಸದಿಯ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಸದಸ್ಯರಿಗೆ ವಿವಿಧ ಮನರಂಜನಾತ್ಮಕ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಮದ್ಯಾಹ್ನ ಗಂಜಿ ಚಟ್ನಿಯೂಟ, ಉಪಹಾರಕ್ಕೆ ಬಸಳೆಪುಂಡಿ, ಅರಸಿನ ಎಲೆಕಡುಬು ಮುಂತಾದ ಸಾಂಪ್ರದಾಯಿಕ ತಿಂಡಿಗಳನ್ನು ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ಅಲ್ಲಿಂದ ವಿಹಾರ ನಿರ್ಮಾಣ ಹಂತದಲ್ಲಿರುವ ಮೂಡಾರು ಬಸದಿಗೆ ತೆರಳಿ ದರ್ಶನ ಪಡೆದು ಮುಂದುವರಿದು ಹತ್ತಿರದ ಜಲಪಾತ ವೀಕ್ಷಣೆಯೂ ನಡೆಯಿತು. ಮೇಘನಾ ಪ್ರಾರ್ಥನೆ ನೆರವೇರಿಸಿದರು, ತೌಳವ ಇಂದ್ರ ಸಮಾಜದ ಉಪಾಧ್ಯಕ್ಷರಾದ ಅಕ್ಷಯ ಕುಮಾರ್ ಮಳಲಿಯವರು ಕಾರ್ಯಕ್ರಮ ಸಂಯೋಜಿಸಿ, ನಿರ್ವಹಣೆ ಮಾಡಿದರು, ಕಾರ್ಯದರ್ಶಿ ಅಭಯಕುಮಾರ್ ಬಿ. ಧನ್ಯವಾದಗಳನ್ನು ಅರ್ಪಿಸಿದರು.

ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ

Article Image

ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ

ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾಮಂಟಪದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಾಮೂಹಿಕ ಪಂಚ ನಮಸ್ಕಾರದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ್ ಜೈನ್, ನಿರ್ದೇಶಕರಾದ B. ಸೋಮಶೇಖರ ಶೆಟ್ಟಿ ಹಾಗೂ ಇತರ ಉಪಾಧ್ಯಕ್ಷರು, ನಿರ್ದೇಶಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು, ಜೈನ್ ಮಿಲನ್ ರಾಷ್ಟೀಯ ಉಪಾಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು, ಸಭಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರು ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಜಿನಭಜನೆ ಕಾರ್ಯಕ್ರಮದ ಕುರಿತು ಮಾರ್ಗದರ್ಶನ ನೀಡಿದರು. ವಲಯಾಧ್ಯಕ್ಷರಾದ ಯುವರಾಜ್ ಭಂಡಾರಿ ಅವರು ಎಲ್ಲಾ ವಿಭಾಗಗಳ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು, ಕಾರ್ಯದರ್ಶಿ ರತ್ನರಾಜ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು, ಶಾಂತಿಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಬೆಂಗಳೂರಿನ ರಾಜಾಜಿನಗರ: ಜೈನ್ ಮಿಲನ್ ಕಾರ್ಯಕ್ರಮ

Article Image

ಬೆಂಗಳೂರಿನ ರಾಜಾಜಿನಗರ: ಜೈನ್ ಮಿಲನ್ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕದಲ್ಲಿ ಜೈನ ಧರ್ಮ ಸಮಸ್ಯೆಗಳನ್ನು ಎದುರಿಸುತ್ತಿದ್ದು , ಉತ್ತರ ಕರ್ನಾಟಕದ ಸಂಘಟನೆ ಕೊರತೆಯ ಜೊತೆಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಸುಹಾಸ್ತಿ ಜೈನ ಮಿಲನ. ಮುಖಂಡ, ಕಲಾವಿದ ಚಿತ್ತ ಜಿನೇಂದ್ರ ತಿಳಿಸಿದರು. ಅವರು ರಾಜಾಜಿನಗರ ಜೈನ್ ಮಿಲನ್ ಮಾಸಿಕ ಸಭೆಯಲ್ಲಿ, ಮುಖ್ಯ ಅತಿಥಿಗಳಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಜೈನ ಧರ್ಮದ ಸಮಸ್ಯೆ, ಸಂಘಟನೆ, ಸಂಸ್ಕೃತಿ, ಸಂಸ್ಕಾರ, ಆರ್ಥಿಕ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಸಮಸ್ಯೆಗಳು ಎದ್ದು ಕಾಣುತ್ತಿವೆ, ಜೈನ ಧರ್ಮದ ಪರಿಸ್ಥಿತಿ ಹೀನಾಯವಾಗಿದ್ದು ಸಂಘಟನೆ ಕೊರತೆ ಎದ್ದು ಕಾಣುತ್ತಿವೆ ಈ ಬಗ್ಗೆ ಎಲ್ಲರೂ ಸಂಘಟಿತರಾಗಿ ಧ್ವನಿ ಗೂಡಿಸಬೇಕೆಂದರು. ರಾಜಾಜಿನಗರ ಜೈನ್ ಮಿಲನ್ ಅಧ್ಯಕ್ಷೇ ಮಮತಾ ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸುಧಾ ಬಾಹುಬಲಿ, ಬಾಹುಬಲಿ ಗೌರಜ್ ಸೇರಿದಂತೆ ರಾಜಾಜಿನಗರ ಜೈನ ಮಿಲನ್ ಪದಾಧಿಕಾರಿಗಳು, ಶ್ರಾವಕ -ಶ್ರಾವಕಿಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕಲಾವಿದ ಚಿತ್ತ ಜಿನೇಂದ್ರರವರನ್ನು ಸನ್ಮಾನಿಸಲಾಯಿತು. ಜೆ. ರಂಗನಾಥ - ತುಮಕೂರು

ವೇಣೂರು: ಭಾರತೀಯ ಜೈನ್ ಮಿಲನ್ ತಿಂಗಳ ಮಾಸಿಕ ಸಭೆ

Article Image

ವೇಣೂರು: ಭಾರತೀಯ ಜೈನ್ ಮಿಲನ್ ತಿಂಗಳ ಮಾಸಿಕ ಸಭೆ

ವೇಣೂರು: ಭಾರತೀಯ ಜೈನ್ ಮಿಲನ್ ನ ಜುಲೈ ತಿಂಗಳ ಮಾಸಿಕ ಸಭೆ ಹಾಗೂ ಆಹಾರವೋತ್ಸವ ಕಾರ್ಯಕ್ರಮವನ್ನು ಆ. 15ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ವೀರ್ ವೀರಾಂಗನೆಯರು ತಮ್ಮ ಮನೆಯಲ್ಲಿ ತಯಾರಿಸಿದ ಸುಮಾರು 50 ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿದರು. ಮಾಸಿಕ ಸಭೆಯ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದ್ದರು. ಆಹಾರೋತ್ಸವದ ಉದ್ಘಾಟನೆಯನ್ನು ತಿಮ್ಮಣ್ಣರಸರಾದ ಡಾಕ್ಟರ್ ಪದ್ಮಪ್ರಸಾದ್ ಅಜಿಲರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು. ಸಾಂಪ್ರದಾಯಿಕ ತಿಂಡಿ ತಿನಿಸುಗಳ ಮಹತ್ವದ ಕುರಿತು ಉದ್ಘಾಟಕರು ಮತ್ತು ಅತಿಥಿಗಳು ವಿವರಿಸಿದರು. ವಿಜಯರಾಜ ಅಧಿಕಾರಿ ಅವರ ಪ್ರಾರ್ಥನೆಯೊಂದಿಗೆ ನಿರ್ಮಲ್ ಕುಮಾರ್ ಜೈನ್ ಸ್ವಾಗತಿಸಿ, ಪ್ರಾರಂಭವಾದ ಕಾರ್ಯಕ್ರಮವನ್ನು ಮಹಾವೀರ ಜೈನ್ ನಿರೂಪಿಸಿದರು. ಸುನಿತಾ ಎನ್. ಬಲ್ಲಾಳ್ ರವರ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸುಮಾರು 150 ವೀರ್ ವೀರಾಂಗನೆಯರು ಮತ್ತು ವೀರ್ ಕುವರಿಯರು ಮತ್ತು ವೀರ್ ಕುವರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸತ್ತೂರು, ಧಾರವಾಡ: ಡಾ. ಎಸ್.ಕೆ ಜೋಶಿ ಅವರಿಗೆ ಬಿಳ್ಕೋಡುಗೆ ಸಮಾರಂಭ

Article Image

ಸತ್ತೂರು, ಧಾರವಾಡ: ಡಾ. ಎಸ್.ಕೆ ಜೋಶಿ ಅವರಿಗೆ ಬಿಳ್ಕೋಡುಗೆ ಸಮಾರಂಭ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಹಿರಿಯ ರೇಡಿಯಾಲಜಿ ಪ್ರಾಧ್ಯಾಪಕರು ಮತ್ತು ಮಾಜಿ ಪ್ರಾಂಶುಪಾಲರು ಹಾಗೂ ವಿಶ್ವವಿದ್ಯಾಲಯದ ಸಹ ಉಪ ಕುಲಪತಿಗಳಾದ ಡಾ. ಎಸ್.ಕೆ ಜೋಶಿಯವರು ಸೇವಾ ನಿವೃತ್ತಿ ಹೊಂದಿದ ಸಂಧರ್ಭದಲ್ಲಿ ಇತ್ತೀಚಿಗೆ ಅವರನ್ನು ಬೀಳ್ಕೋಡಲಾಯಿತು. ಸುಮಾರು 21 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಹಾಗೂ ಸಹ ಉಪ ಕುಲಪತಿಗಳಾಗಿ ಅನನ್ಯ ಕೊಡುಗೆಯನ್ನು ನೀಡಿದ ಡಾ. ಎಸ್.ಕೆ ಜೋಶಿ ಅವರ ಸೇವೆಯನ್ನು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಶ್ಲಾಘಿಸಿದರು ಮತ್ತು ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಬೆಳವಣಿಗೆಗೆ ಅವರ ಸೇವೆ ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪಕುಲಪತಿಗಳಾದ ವಿ. ಜೀವಂಧರ ಕುಮಾರ, ಹಣಕಾಸು ಅಧಿಕಾರಿಯಾದ ವಿ. ಜಿ. ಪ್ರಭು ಅವರು ಡಾ. ಎಸ್.ಕೆ ಜೋಶಿ ಅವರಿಗೆ ಸನ್ಮಾನ ಪತ್ರ, ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು. ಡಾ. ಎಸ್.ಕೆ ಜೋಶಿಯವರು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ತಾವು ಎಸ್.ಡಿಎಂ. ಸಂಸ್ಥೆಗೆ ಸೇರುವಾಗ ಆಡಳಿತ ಮಂಡಳಿಯವರ ಮಾಡಿದ ಸಹಕಾರವನ್ನು ಸ್ಮರಿಸಿಕೊಂಡರು. ತಮ್ಮ ಸುದೀರ್ಘ 21 ವರ್ಷಗಳ ಸೇವೆಗೆ ಅನುವು ಮಾಡಿಕೊಟ್ಟ ಕುಲಪತಿಗಳು, ಉಪ ಕಲಪತಿಗಳು ಮತ್ತಿತರೆಲ್ಲರಿಗೂ ತಮ್ಮ ಕೃತಜ್ಞತೆಯನ್ನು ಹೇಳಿದರು. ತಾವು ಸಂಸ್ಥೆಯಿಂದ ನಿರ್ಗಮಿಸುತ್ತಿರುವ ಈ ಸಂದರ್ಭದಲ್ಲಿ ಎಸ್.ಡಿಎಂ. ಸಂಸ್ಥೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳು, ವೈದ್ಯಕೀಯ ಅಧೀಕ್ಷಕರು, ಉಪ ವೈದ್ಯಕೀಯ ಅಧೀಕ್ಷಕರು, ಶೂಶ್ರುಷಕ ಅಧೀಕ್ಷಕರು ಮತ್ತು ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಮತ್ತು ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಡಾ. ನರೇಂದ್ರ ಶಾ ಅವರು ಡಾ. ಎಸ್.ಕೆ. ಜೋಶಿ ಅವರ ಸಮರ್ಪಣಾ ಸೇವೆ ಮತ್ತು ಅವರು ಕಾಲೇಜಿನಲ್ಲಿ ಅನುಸರಿಸಿದ ಶಿಸ್ತು ಬದ್ದತೆಯನ್ನು ಸ್ಮರಿಸಿದರು. ಉಪ ಕುಲಸಚಿವರಾದ ಡಾ. ಅಜಂತಾ ಜಿ.ಎಸ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ವಿನುತಾ ಚಿಕ್ಕಮಠ್ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಬಾಬಣ್ಣ ಶೆಟ್ಟಿಗಾರ್ ವಂದನಾರ್ಪಣೆ ಸಲ್ಲಿಸಿದರು.

ಯೋಗ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ: ಡಾ. ಶಶಿಕಾಂತ ಜೈನ್‌ರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

Article Image

ಯೋಗ ಕ್ಷೇತ್ರದಲ್ಲಿ ಉನ್ನತ ಸೇವೆ, ಸಾಧನೆ: ಡಾ. ಶಶಿಕಾಂತ ಜೈನ್‌ರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಯೋಗ ಕ್ಷೇತ್ರದಲ್ಲಿ ಮಾಡಿದ ಉನ್ನತ ಸೇವೆ, ಸಾಧನೆಗಾಗಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ನ ಯೋಗ ನಿರ್ದೇಶಕ ಡಾ. ಶಶಿಕಾಂತ ಜೈನ್ ಏಶಿಯಾ ಪೆಸಿಫಿಕ್ ಐಕಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅ. 22 ರಂದು ಗುರುವಾರ ಕೊಲೊಂಬೊದಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮಾರಗುತ್ತು ವಿಜಯರಾಜ್ ಅಧಿಕಾರಿ ನಿಧನ

Article Image

ಮಾರಗುತ್ತು ವಿಜಯರಾಜ್ ಅಧಿಕಾರಿ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು, ಶ್ರೀಕ್ಷೇತ್ರ ಮುದ್ದಾಡಿ ದೈವಸ್ಥಾನದ ಆಡಳಿತ ಮೊಕ್ತೇಸರರು, ನಿವೃತ್ತ ಉಪನ್ಯಾಸಕರಾದ ಮಾರಗುತ್ತು ವಿಜಯರಾಜ್ ಅಧಿಕಾರಿಯವರು ಇಂದು (ಆ. 16ರಂದು) ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಇವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಸಹಿತ ಅಪಾರ ಬಂಧು ವಗ೯ವನ್ನು ಅಗಲಿದ್ದಾರೆ. ವೇಣೂರು ಶ್ರೀ ಜೈನ ದಿಗಂಬರ ತೀಥ೯ಕ್ಷೇತ್ರ ಸಮಿತಿಯ ಮಾಜಿ ಕಾಯ೯ದಶಿ೯ಗಳು, ವಿವೇಕಾನಂದ ಸೇವಾ ಟ್ರಸ್ಟ್ ನ ಸ್ಥಾಪಾಕಾಧ್ಯಕ್ಷರೂ ಆದ ಇವರು ಪ್ರಗತಿ ಪರ ಕೃಷಿಕರು, ಧಾರ್ಮಿಕ, ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು.

ಮುನಿಶ್ರೀ ಪುಣ್ಯಸಾಗರ ಮಹಾರಾಜರ ಆಶೀರ್ವಾದ ಪಡೆದ ಧರ್ಮಸ್ಥಳದ ಹೆಗ್ಗಡೆ ಸಹೋದರರು

Article Image

ಮುನಿಶ್ರೀ ಪುಣ್ಯಸಾಗರ ಮಹಾರಾಜರ ಆಶೀರ್ವಾದ ಪಡೆದ ಧರ್ಮಸ್ಥಳದ ಹೆಗ್ಗಡೆ ಸಹೋದರರು

ಹುಬ್ಬಳ್ಳಿ ದಿಗಂಬರ ಜೈನ ಬೋರ್ಡಿಂಗಿನಲ್ಲಿ ಚಾತುರ್ಮಾಸ ನಿರತ ಮುನಿಶ್ರೀ ಪುಣ್ಯಸಾಗರ ಮಹಾರಾಜರ ದರ್ಶನಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಸುರೇಂದ್ರ ಹೆಗಡೆಯವರು ಇಂದು ನಗರಕ್ಕೆ ಆಗಮಿಸಿ ಪೂಜ್ಯರಿಂದ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಧಾರ್ಮಿಕ ಚರ್ಚೆಗಳನ್ನೂ ಮಾಡಿದ ಹೆಗ್ಗಡೆ ಸಹೋದರರು ಇಲ್ಲಿ ನಡೆದಿರುವ ವರ್ಷಾಯೋಗ ಧಾರ್ಮಿಕ ಪ್ರಭಾವನೆಗೆ ಪ್ರೇರಕವಾಗಿದೆ ಎಂದು ತಿಳಿಸಿ ಅತ್ಯಂತ ಹರ್ಷ ವ್ಯಕ್ತಪಡಿಸಿದರು. ಪೂಜ್ಯ ಶ್ರೀ ಹೆಗ್ಗಡೆ ಸಹೋದರರನ್ನು ದಿಗಂಬರ ಜೈನ ಬೋರ್ಡಿಂಗ ಆಡಳಿತಮಂಡಳಿ ಸದಸ್ಯರು ಸನ್ಮಾನಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ದಿಗಂಬರ ಜೈನ ಬೋರ್ಡಿಂಗ ಅಧ್ಯಕ್ಷ ವಿದ್ಯಾಧರ್ ಪಾಟೀಲ, ಆರ್ ಟಿ ತವನಪ್ಪನವರ, ದೇವೇಂದ್ರಪ್ಪ ಕಾಗೇನವರ, ಜಿ ಜಿ ಲೋಗೋಳ, ವಿಮಲಚಂದ ಸಂಗಮಿ, ಪ್ರಶಾಂತ್ ಬಿಶೆಟ್ಟಿ, ಮಹಾವೀರ ಮಣಕಟ್ಟಿ, ಸಂತೋಷಕುಮಾರ ಮುರಗಿ ಪಾಟಿಲ, ಭರತ ಬೀಳಗಿ, ಮಹಿಳಾ ಅಧ್ಯಕ್ಷರಾದ ಸ್ಮಿತಾ ವಾಕಳೆ, ಎ ಎಸ್ ಪಾಟೀಲ, ಮನ್ಮತ ಕ್ಯಾಸಾ, ತ್ರಿಶಲಾ ಮಾಲಗತ್ತಿ ಮತ್ತು ಎಸ್ ಡಿ ಎಂನ ಕಾರ್ಯದರ್ಶಿ ಜೀವoದರಕುಮಾರ ಹಾಗೂ ಹಲವಾರು ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು. ವರದಿ: ಎಸ್ ಆರ್ ಮಲ್ಲಸಮುದ್ರ

ಉಜಿರೆ: ಜೈನ್ ಮಿಲನ್ ಆಹಾರೋತ್ಸವ

Article Image

ಉಜಿರೆ: ಜೈನ್ ಮಿಲನ್ ಆಹಾರೋತ್ಸವ

ಭಾರತೀಯ ಜೈನ್ ಮಿಲನ್,ಬೆಳ್ತಂಗಡಿ ಹಾಗೂ ಧೀಮತಿ ಮಹಿಳಾ ಸಂಘ , ಉಜಿರೆ ಜಂಟಿ ಆಶ್ರಯದಲ್ಲಿ ನಡೆದ ಆಷಾಡ ಮಾಸದ ವಿಶೇಷ ಆಹಾರೋತ್ಸವ ಕಾರ್ಯಕ್ರಮ ಅರ್ಥ ಪೂರ್ಣವಾಗಿ ಜರಗಿತು, ಈ ಕಾರ್ಯಕ್ರಮವನ್ನು ಎರಡೂ ಸಂಸ್ಥೆಗಳ ಗೌರವ ಸಲಹೆಗಾರ ರಾಗಿರುವ ಸೋನಿಯಾ ಯಶೋವರ್ಮ ಅವರು ಚೆನ್ನೆ ಮಣೆ ಆಡುವ ಮೂಲಕ ಉದ್ಘಾಟಿಸಿ, ನಮ್ಮ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಆಗುತ್ತಿದೆ, ಔಷಧೀಯ ಗುಣ ಇರುವ ಕಾಲ ಕಾಲಕ್ಕೆ ಹೊಂದುವ, ದೊರೆಯುವ ಪದಾರ್ಥ ವಸ್ತುಗಳನ್ನು ಉಪಯೋಗಿಸುವಂತೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಲಯ ನಿರ್ದೇಶಕರಾದ ಬಿ. ಪ್ರಮೋದ್ ಕುಮಾರ್, ಪ್ರಾಂಶುಪಾಲರು ಮಾತನಾಡಿ ವರ್ಷದ ಪ್ರತಿ ತಿಂಗಳಿಗೂ ಅದರದ್ದೇ ಆದ ಮಹತ್ವ ಇದೆ, ಆಷಾಡ ಮಾಸದ ವಿಶೇಷ ಗಳನ್ನು,ಮುಂದಿನ ಜನಾಂಗ ಅರಿತು ನಮ್ಮ ಪರಂಪರೆಯನ್ನು ಬೆಳೆಸಿಕೊಂಡು ಹೋಗಲು ಇಂತಹ ಕಾರ್ಯಕ್ರಮ ಅವಶ್ಯಕ ಎಂದು ತಿಳಿಸಿದರು. ಇನ್ನೋರ್ವ ವಲಯ ನಿರ್ದೇಶಕರಾದ B.ಸೋಮಶೇಖರ ಶೆಟ್ಟಿ ಅವರು ಮಾತನಾಡಿ, ಹಿಂದಿನ ಕಾಲದಲ್ಲಿ ಅನಿವಾರ್ಯವಾಗಿದ್ದ ಆಷಾಡ ಮಾಸದ ತಿಂಡಿ ತಿನಸುಗಳು ಇಂದು ಆಹಾರೋತ್ಸವವಾಗಿ ಆಚರಿಸಲ್ಪಡುತ್ತದೆ, ಆರೋಗ್ಯಕ್ಕೆ ಪೂರಕವಾದ ಆಹಾರ ಪದ್ಧತಿಯನ್ನು ನಾವು ಅನುಸರಿಸುವುದರಿಂದ ಅನೇಕ ಬಗೆಯ ಕಾಯಿಲೆಗಳಿಂದ ದೂರ ಇರಬಹುದು, ಇಂತಹ ಆಹಾರ ವಸ್ತುಗಳಲ್ಲಿ ಇರುವ ಆರೋಗ್ಯಪೂರಕ ಮಹತ್ವದ ಅರಿವು ಮೂಡಿಸಲು ಮತ್ತು ಹಿಂದಿನ ಕಾಲದ ಜನಜೀವನದ ಪರಿಚಯ ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಈ ಕಾರ್ಯ ಕ್ರಮ ಯಶಸ್ವಿ ಆದ ಬಗ್ಗೆ ಮತ್ತು ಅಪಾರ ಸಂಖ್ಯೆಯಲ್ಲಿ ಸೇರಿದ ಸದಸ್ಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಧೀಮತಿ ಮಹಿಳಾ ಸಮಾಜದ ಅಧ್ಯಕ್ಷೆ ರಜತ ಪಿ. ಶೆಟ್ಟಿ ಮಾತನಾಡಿ ಈ ಕಾರ್ಯ ಕ್ರಮವನ್ನು ವಿಶೇಷ ರೀತಿಯಲ್ಲಿ ಆಯೋಜಿಸಿದ ಹಿನ್ನಲೆಯನ್ನು ವಿವರಿಸಿದರು, ಪ್ರಕೃತಿಯಲ್ಲಿ ದೊರೆಯುವ ಆಹಾರ ಪದಾರ್ಥಗಳನ್ನು ಉಪಯೋಗಿಸುವಾಗ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಿ ತಿಳಿಸಿದರು. ಜೈನ್ ಮಿಲನ್ ಅಧ್ಯಕ್ಷರಾದ ಡಾ, ನವೀನ್ ಕುಮಾರ್ ಜೈನ್ ಅವರು ಮಾತನಾಡಿ, ಆಹಾರ ಪದ್ಧತಿಯ ಹಿನ್ನೆಲೆಯನ್ನು ವೈಜ್ಞಾನಿಕವಾಗಿ ವಿವರಿಸಿ, ಉಪ್ಪಿನ ಕಾಯಿಯಂತಹ ವಸ್ತುಗಳನ್ನು ಪ್ಲಾಸ್ಟಿಕ್ ಡಬ್ಬಗಳಲ್ಲಿ ತುಂಬಿಸಿ ಇಟ್ಟು ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ, ಆಹಾರ ಪದಾರ್ಥಗಳು ಮತ್ತು ಅದನ್ನು ತಯಾರಿಸುವ ಬಗ್ಗೆ ಸಂಗ್ರಹಿಸಿ ಇಡುವ ವಸ್ತುಗಳ ಬಗ್ಗೆ ವಿಶೇಷ ಮಾಹಿತಿಯನ್ನು ವೈಜ್ಞಾನಿಕ ಅಧ್ಯಯನ ಹಿನ್ನೆಲೆಯಲ್ಲಿ ವಿವರಿಸಿ ತಿಳಿಸಿದರು. ಈ ದಿನದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಧೀಮತಿ ಮಹಿಳಾ ಸಮಾಜದ ಸರ್ವರಿಗೂ ಮಿಲನ್ ನ ಸರ್ವಸದಸ್ಯರಿಗೂ ಕೃತ್ತಜ್ಞತೆ ಸಲ್ಲಿಸಿದರು, ಧೀಮತಿ ಮಹಿಳಾ ಸಮಾಜದ ಕಾರ್ಯದರ್ಶಿ ಪ್ರಾಧ್ಯಾಪಕಿ ದಿವ್ಯ ಪ್ರಧಾನ್ ಪ್ರಾಸ್ತಾವಿಕ ಮಾತಿನೊಂದಿಗೆ ಸರ್ವರನ್ನೂ ಸ್ವಾಗತಿಸಿದರು. ಜೈನ್ ಮಿಲನ್ ಕಾರ್ಯದರ್ಶಿ ಸಂಪತ್ ಕುಮಾರ್ ಜೈನ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ನಿಖಿತ್ ಕುಮಾರ್ ವಂದಿಸಿದರು. ಸ್ಮಿತಾ ಪ್ರಶಾಂತ್ ಶಾಂತಿ ಮಂತ್ರ ಪಠಿಸಿದರು, ವಿಶೇಷ ಖಾದ್ಯಗಳನ್ನು ಅಳದಂಗಡಿಯ ಸುನಿಲ್ ಕುಮಾರ್ ಜೈನ್ ತಯಾರಿಸಿದ್ದು ಎಲ್ಲರ ಪ್ರಶಂಸೆಗೆ ಪಾತ್ರರಾದರು.

ವರೂರ ನವಗ್ರಹತೀರ್ಥದ ದ್ವಿತೀಯ ಮಹಾಮಸ್ತಕಾಭಿಷೇಕದ ಸರ್ವಾಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸನ್ಮಾನ

Article Image

ವರೂರ ನವಗ್ರಹತೀರ್ಥದ ದ್ವಿತೀಯ ಮಹಾಮಸ್ತಕಾಭಿಷೇಕದ ಸರ್ವಾಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸನ್ಮಾನ

ಅಂತರಾಷ್ಟ್ರೀಯ ಮಟ್ಟದ ಮತ್ತು ಪ್ರಪಂಚಕ್ಕೆ ಮಾದರಿಯಾಗಲಿರುವ ನವ ತೀರ್ಥoಕರರ ದ್ವಿತೀಯ ಮಹಾಮಸ್ತಕಾಭಿಷೇಕ, ಹಾಗೂ ಪ್ರಪಂಚದ ಮೊದಲ 405 ಅಡಿ ಎತ್ತರದ " ಸುಮೇರು ಪರ್ವತದ" ಲೋಕಾರ್ಪಣೆ ಮತ್ತು ಜಿನಬಿಂಬಗಳ ಪ್ರತಿಷ್ಠಾ ಮಹಾಮಹೋತ್ಸವದ ಸರ್ವಾಧ್ಯಕ್ಷರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಆಯ್ಕೆ ಮಾಡಿದ ಹಿನ್ನಲೆಯಲ್ಲಿ ಇಂದು ಡಾ. ಹೆಗ್ಗಡೆಯವರ ನಿವಾಸದಲ್ಲಿ ಪರಮಪೂಜ್ಯ ರಾಷ್ಟ್ರಸಂತ ಯುವಾಚಾರ್ಯ ಶ್ರೀ 108 ಗುಣದರಂದಿ ಮುನಿ ಮಹಾರಾಜರ ಹಾಗೂ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಸ್ವಾಮಿಗಳ ಶುಭ ಆಶೀರ್ವಾದದೊಂದಿಗೆ ಮತ್ತು ಸೂಚನೆಯ ಪ್ರಕಾರ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ಡಾ. ಹೆಗ್ಗಡೆಯವರು ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ನನಗೆ ಅಧ್ಯಕ್ಷ ಸ್ಥಾನ ನೀಡಿ ಜವಾಬ್ದಾರಿ ವಹಿಸಿದ ಪೂಜ್ಯರ ಆಶಯದಂತೆ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಮಾರಂಭದಲ್ಲಿ ನವಗ್ರಹ ಕ್ಷೇತ್ರದ ವತಿಯಿಂದ ರಾಜೇಶ್ವರಿ ದಿದಿ, ಸಂದೀಪ ಖ್ಯಾತನವರ ಹಾಗೂ ಎ ಜಿ ಎಂ ಸಮೂಹ ಸಂಸ್ಥೆಯ ಸಿಬ್ಬಂದಿ ಮತ್ತು ಜೈನ ಬೋರ್ಡಿಂಗ ಅಧ್ಯಕ್ಷ ವಿದ್ಯಾಧರ ಪಾಟೀಲ, ಸದಸ್ಯರಾದ ದೇವಿಂದ್ರಪ್ಪ ಕಾಗೆನವರ, ವಿಮಲ್ ತಾಳಿಕೋಟಿ ಸಂತೋಷ್ ಮುರಗಿ ಪಾಟೀಲ್, ವಿಮಲನಾಥ ಸಂಗಮಿ, ಪ್ರಶಾಂತ ಬಿಶೆಟ್ಟಿ, ಭರತ ಬಿಳಗಿ ಮತ್ತು ಹುಬ್ಬಳ್ಳಿ ಜೈನ ಸಮಾಜದ ಅಧ್ಯಕ್ಷ ರಾಜೇಂದ್ರ ಬೀಳಗಿ, ಶಾಂತಿನಾಥ ಹೋತಪೇಟೆ ಛಬ್ಬಿ ಹುಬ್ಬಳ್ಳಿ ವರೂರ ಗ್ರಾಮಗಳ ಮತ್ತು ಹಲವಾರು ಜೈನ ಸಮಾಜದ ಮುಖಂಡರು ಭಾಗವಹಿಸಿದ್ದರು. ವರದಿ: ಎಸ್ ಆರ್ ಮಲ್ಲಸಮುದ್ರ

ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Article Image

ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರನ್ನು ಆ.9 ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಹೆಗ್ಗಡೆಯವರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಒಂದು ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಇದು ಒಂದು ಮಾದರಿ ಸಂಸದರ ನಿಧಿಯ ಸದ್ವಿನಿಯೋಗ ಎಂದು ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ ರಾಜ್ಯದಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿ.ಎಸ್.ಸಿ. ಕೇಂದ್ರಗಳ ಮೂಲಕ ಕೇಂದ್ರ ಸರಕಾರದ ಹಾಗೂ ಸಿ.ಎಸ್.ಸಿ.ಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಹೆಗ್ಗಡೆಯವರು ವಿವರಿಸಿದರು. ಇಲ್ಲಿಯವರೆಗೆ ಸುಮಾರು 3 ಕೋಟಿ ಸಿ.ಎಸ್.ಸಿ. ಸೇವೆಗಳು ಯೋಜನೆಯ ಮೂಲಕ ಜನಸಾಮಾನ್ಯರಿಗೆ ತಲುಪಿರುವ ಬಗ್ಗೆ ಪ್ರಧಾನಮಂತ್ರಿಗಳು ಅಚ್ಚರಿ ವ್ಯಕ್ತಪಡಿಸಿದರು. ಹೆಗ್ಗಡೆಯವರ ಈ ಎಲ್ಲಾ ಸೇವೆಗಳ ಚಿಂತನೆಯು ದೇಶಕ್ಕೆ ಮಾದರಿಯಾಗಲಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು. ಬೀದರ್‌ನಲ್ಲಿ ಕ್ಷೀರಕ್ರಾಂತಿ: ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ನಿಧಿಯಿಂದ ಉತ್ತರ ಕರ್ನಾಟಕದ ಹಿಂದುಳಿದ ಜಿಲ್ಲೆಯಾದ ಬೀದರ್‌ನಲ್ಲಿ ಒಂದು ಕ್ಷೀರಕ್ರಾಂತಿಯನ್ನೇ ಮಾಡುವ ಯೋಜನೆ ಹಾಕಿಕೊಂಡು ಕೆ.ಎಂ.ಎಫ್. ಸಹಯೋಗದೊಂದಿಗೆ ಅನೇಕ ಹಾಲು ಒಕ್ಕೂಟಗಳನ್ನು ಅಭಿವೃದ್ಧಿಪಡಿಸಿ ಹೈನುಗಾರಿಕೆ ಮಾಡಲು ಅನೇಕ ಪ್ರೋತ್ಸಾಹಗಳನ್ನು ನೀಡಿದ್ದಾರೆ. ಸಂಸದರ ನಿಧಿಯಿಂದ ಹಾಲು ಸಂಗ್ರಹಣಾ ಕಟ್ಟಡಗಳನ್ನು ನಿರ್ಮಿಸಿದ್ದಲ್ಲದೆ, ಹಾಲು ಸಂಗ್ರಹವನ್ನು ಹೆಚ್ಚಿಸಿಕೊಳ್ಳಲು ಅತ್ಯಾಧುನಿಕ ಯಂತ್ರಗಳಾದ ಆಟೋಮ್ಯಾಟಿಕ್ ಮಿಲ್ಕ್ ಕಲೆಕ್ಟಿಂಗ್ ಯುನಿಟ್(ಎ.ಎಂ.ಸಿ.ಯು.), ಸ್ಪೈನ್‌ಲೆಸ್ ಸ್ಟೀಲ್ ಕ್ಯಾನ್, ಪ್ಯಾಟೋಮ್ಯಾಟಿಕ್ ಯಂತ್ರ, ಹಾಲು ತೂಕದ ಯಂತ್ರಗಳನ್ನು ಒದಗಿಸಿರುತ್ತಾರೆ. ಯೋಜನೆಯ ಕೃಷಿ ಅಧಿಕಾರಿಗಳನ್ನು ನಿಯೋಜಿಸಿ ಗ್ರಾಮೀಣ ರೈತರರಿಗೆ ಹೈನುಗಾರಿಕೆಯ ಬಗ್ಗೆ ಸೂಕ್ತ ತರಬೇತಿಯನ್ನು ನೀಡಿದ್ದಾರೆ. ಈ ಯೋಜನೆ ಪ್ರಾರಂಭವಾಗುವುದಕ್ಕಿಂತ ಮುಂಚೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರತಿನಿತ್ಯ 18 ಸಾವಿರ ಲೀಟರ್ ಮಾತ್ರ ಇತ್ತು. ಇದು ಯೋಜನೆಯಿಂದಾಗಿ ಪ್ರತಿ ದಿನ ಗರಿಷ್ಠ 60 ಸಾವಿರ ಲೀಟರ್‌ಗೆ ಏರಿಕೆ ಕಂಡಿದ್ದು ಕೆಲವೇ ತಿಂಗಳುಗಳಲ್ಲಿ ಪ್ರತಿನಿತ್ಯ 1 ಲಕ್ಷ ಲೀಟರ್ ಹಾಲು ಸಂಗ್ರಹದ ಗುರಿಯನ್ನು ತಲುಪಲಿದ್ದು ಇದೊಂದು ಐತಿಹಾಸಿಕ ಉತ್ಪಾದನೆಯಾಗಿರುತ್ತದೆ. ಸಂಸದರ ನಿಧಿಯ ಬಳಕೆಗೆ ಇದು ಒಂದು ಉತ್ತಮ ಮಾದರಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು. ಆಯುಷ್ಮಾನ್ ಸೇವೆಗೂ ಮೆಚ್ಚುಗೆ: ಡಿ. ವೀರೇಂದ್ರ ಹೆಗ್ಗಡೆಯವರು ಮುನ್ನಡೆಸುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಕೇಂದ್ರ ಸರಕಾರದ ತಂತ್ರಜ್ಞಾನ ಮತ್ತು ಮಾಹಿತಿ ವಿದ್ಯುನ್ಮಾನ ಸಚಿವಾಲಯದ ಮಹತ್ವದ ಕಾರ್ಯಕ್ರಮವಾದ ಸಿ.ಎಸ್.ಸಿ. ಸೇವೆಗಳನ್ನು ಜನ ಸಾಮಾನ್ಯರಿಗೆ ನೀಡುವ ಒಂದು ಪಾಲುದಾರಿಕಾ ಒಪ್ಪಂದವಾಗಿರುತ್ತದೆ. ರಾಜ್ಯಾದ್ಯಾಂತ ಯೋಜನೆಯು 10 ಸಾವಿರ ಗ್ರಾಹಕ ಸೇವಾಕೇಂದ್ರಗಳ ಮೂಲಕ ಸಿ.ಎಸ್.ಸಿ. ಸೇವೆಯನ್ನು ಯಶಸ್ವಿಯಾಗಿ ಜನಸಾಮಾನ್ಯರಿಗೆ ಯೋಜನೆಯಿಂದ ನೀಡಲಾಗುತ್ತಿದೆ. ‘ಆಯುಷ್ಮಾನ್ ಭಾರತ್’ ಸರಕಾರದ ಮಹತ್ವದ ಆರೋಗ್ಯ ವಿಮೆಯಾಗಿದ್ದು ಅರ್ಹ ಫಲಾನುಭವಿಗಳಿಗೆ ಇದನ್ನು ಉಚಿತವಾಗಿ ಸಿ.ಎಸ್.ಸಿ. ಕೇಂದ್ರಗಳ ಮೂಲಕ ವಿತರಿಸಿದ್ದು ಇಲ್ಲಿಯವರೆಗೆ 1.40 ಕೋಟಿಗೂ ಅಧಿಕ ಜನರು ‘ಆಯುಷ್ಮಾನ್ ವಿಮೆ’ಗೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಜನರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇವೆ ನೀಡುವ ಬಗ್ಗೆಯೂ ಪ್ರಧಾನಮಂತ್ರಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಮಾಲತಿ ವಸಂತರಾಜ್ ಕಾರ್ಕಳ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

Article Image

ಮಾಲತಿ ವಸಂತರಾಜ್ ಕಾರ್ಕಳ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

ಮಂಡ್ಯ: ಆಚಾರ್ಯ ಗುರುಕುಲ ಮಹಾ ವಿದ್ಯಾಲಯ, ಮೈಸೂರು, ಮತ್ತು ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠ, ಮಂಡ್ಯ ಜಿಲ್ಲೆ ಹಾಗೂ ಭಾರತ ದಿಗಂಬರ ಜೈನ ಜೈನ ಅರ್ಚಕ ಸಂಘ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚಾರ್ಯ ಗುರುಕುಲ ಮಹಾ ವಿದ್ಯಾಲಯದ ಆರನೇ ಘಟಿಕೋತ್ಸವ, ಮಹಾಕವಿ ರತ್ನಾಕರವರ್ಣಿ ಸಾಹಿತ್ಯ ಪ್ರಸಾರ 1280ನೇ ದಿನ ಮನದ ನಿತ್ಯೋತ್ಸವ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಉಪಾದಿ ಪ್ರಶಸ್ತಿ ಪ್ರದಾನ ಸಮಾರಂಭವು ಪರಮ ಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠದ “ಸನ್ಮತಿ” ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಶ್ರಾಂತ ಭೋಧಕರಾದ ಮಾಲತಿ ವಸಂತರಾಜ್ ಕಾರ್ಕಳ ಇವರ ಶೈಕ್ಷಣಿಕ ಕ್ಷೇತ್ರದ ಸೇವೆಯ ಪರಿಗಣನೆಯ ಮೇಲೆ "ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ"ಯನ್ನು ನೀಡಿ ಸನ್ಮಾನಿಲಾಯಿತು.

ಪ್ರತಿಷ್ಠಾಚಾರ್ಯ ಪದ್ಮಪ್ರಭ ಇಂದ್ರ ಇವರಿಗೆ “ಶಾಸ್ತ್ರಿ ಉಪಾದಿ” ಪದವಿ ಪ್ರದಾನ

Article Image

ಪ್ರತಿಷ್ಠಾಚಾರ್ಯ ಪದ್ಮಪ್ರಭ ಇಂದ್ರ ಇವರಿಗೆ “ಶಾಸ್ತ್ರಿ ಉಪಾದಿ” ಪದವಿ ಪ್ರದಾನ

ಮಂಡ್ಯ: ಆಚಾರ್ಯ ಗುರುಕುಲ ಮಹಾ ವಿದ್ಯಾಲಯ, ಮೈಸೂರು, ಮತ್ತು ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠ, ಮಂಡ್ಯ ಜಿಲ್ಲೆ ಹಾಗೂ ಭಾರತ ದಿಗಂಬರ ಜೈನ ಜೈನ ಅರ್ಚಕ ಸಂಘ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚಾರ್ಯ ಗುರುಕುಲ ಮಹಾ ವಿದ್ಯಾಲಯದ ಆರನೇ ಘಟಿಕೋತ್ಸವ, ಮಹಾಕವಿ ರತ್ನಾಕರವರ್ಣಿ ಸಾಹಿತ್ಯ ಪ್ರಸಾರ 1280ನೇ ದಿನ ಮನದ ನಿತ್ಯೋತ್ಸವ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಉಪಾದಿ ಪ್ರಶಸ್ತಿ ಪ್ರದಾನ ಸಮಾರಂಭವು ಪರಮ ಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠದ “ಸನ್ಮತಿ” ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾಚಾರ್ಯ ಪದ್ಮಪ್ರಭ ಇಂದ್ರ ಅಳದಂಗಡಿ ಇವರ ಜೈನ ಆಗಮ ಶಾಶ್ತç ಸಂಕೃತಿ ಅಧ್ಯಯನ ಜ್ಞಾನಕ್ಕಾಗಿ “ಶಾಸ್ತ್ರಿ ಉಪಾದಿ” ಪದವಿ ಪ್ರದಾನ ಮಾಡಿ ಸನ್ಮಾನಿಲಾಯಿತು.

ಶ್ವೇತಾ ದಿಲೀಪ್ ನಾರಾವಿ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

Article Image

ಶ್ವೇತಾ ದಿಲೀಪ್ ನಾರಾವಿ ಇವರಿಗೆ ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ

ಮಂಡ್ಯ: ಆಚಾರ್ಯ ಗುರುಕುಲ ಮಹಾ ವಿದ್ಯಾಲಯ, ಮೈಸೂರು, ಮತ್ತು ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠ, ಮಂಡ್ಯ ಜಿಲ್ಲೆ ಹಾಗೂ ಭಾರತ ದಿಗಂಬರ ಜೈನ ಜೈನ ಅರ್ಚಕ ಸಂಘ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚಾರ್ಯ ಗುರುಕುಲ ಮಹಾ ವಿದ್ಯಾಲಯದ ಆರನೇ ಘಟಿಕೋತ್ಸವ, ಮಹಾಕವಿ ರತ್ನಾಕರವರ್ಣಿ ಸಾಹಿತ್ಯ ಪ್ರಸಾರ 1280ನೇ ದಿನ ಮನದ ನಿತ್ಯೋತ್ಸವ ಸಂಭ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಉಪಾದಿ ಪ್ರಶಸ್ತಿ ಪ್ರದಾನ ಸಮಾರಂಭವು ಪರಮ ಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಸ್ವಾಮೀಜಿಗಳವರ ಪಾವನ ಸಾನಿಧ್ಯದಲ್ಲಿ ಶ್ರೀ ಕ್ಷೇತ್ರ ಕಂಬದ ಹಳ್ಳಿ, ಜೈನ ಮಠದ “ಸನ್ಮತಿ” ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ವೇತಾ ದಿಲೀಪ್ ನಾರಾವಿ ಇವರ ಧಾರ್ಮಿಕ ಕ್ಷೇತ್ರದ ಪರಿಗಣನೆಯ ಮೇಲೆ “ಆಚಾರ್ಯ ಗುರುಕುಲ ಭಗವಾನ್ ಮಹಾವೀರ ಪ್ರಶಸ್ತಿ”ಯನ್ನು ನೀಡಿ ಸನ್ಮಾನಿಲಾಯಿತು.

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

Article Image

ಬೆಂಗಳೂರು: ಜಿನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ

ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯು ಕುಟುಂಬ ಕೌನ್ಸಿಲರ್ ಪ್ರಾಕ್ಟಿಸ್ ಮಾಡುತ್ತಿರುವ ಜನಶ್ರೀ ಆರ್. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಿದೆ. ಡಾ. ಮಂಜುಳಾ ವಿ. ಅವರ ಮಾರ್ಗದರ್ಶನದಲ್ಲಿ "Process of Emotion regulation in relation to Attachment and Mindfulness traits during Gottman's Dreams & within & Conflict intervention psychology" ಎಂಬ ವಿಷಯ ಮೇಲೆ ಮಂಡಿಸಿದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಲಭಿಸಿದೆ. ಜಿನಶ್ರೀ ಅವರು ಭಾರತದ ರಾಷ್ಟ್ರೀಯ ಗ್ರಂಥಾಲಯ ಕೊಲ್ಕತ್ತಾದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕರಾದ ಡಾ. ಪಿ. ವೈ. ರಾಜೇಂದ್ರ ಕುಮಾರ್ ಅವರ ಪುತ್ರಿಯಾಗಿದ್ದು, ಸಿಸ್ಕೊ, ಎಚ್‌ಪಿ, ವಿಪ್ರೊ ಕಂಪನಿಗಳಲ್ಲಿ 17 ವರ್ಷಗಳ ಕಾಲ ಸಾಫ್ಟ್ವೇರ್ ಎಂಜಿನಿಯರ್ ಮತ್ತು ತಾಂತ್ರಿಕ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. MA ಸೈಕಾಲಜಿ (IGNOU), MBA (SISII ಕ್ಯಾಲಿಫೋರ್ನಿಯಾ), MS (IIITB ಬೆಂಗಳೂರು) ಮತ್ತು BE(BIT, ಬೆಂಗಳೂರು)ನಲ್ಲಿ ಪದವಿ ಪಡೆದಿದ್ದಾರೆ.

ಸತ್ತೂರು,ಧಾರವಾಡ: ಕಳೆವರ ಶರೀರರಚನಾಶಾಸ್ತ್ರದ ಕಾರ್ಯಾಗಾರ

Article Image

ಸತ್ತೂರು,ಧಾರವಾಡ: ಕಳೆವರ ಶರೀರರಚನಾಶಾಸ್ತ್ರದ ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರರಚನಾಶಾಸ್ತ್ರ ವಿಭಾಗವು “ಕೈ ಯ ಶರೀರರಚನಾಶಾಸ್ತ್ರ” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆ. 3 ರಂದು ಏರ್ಪಡಿಸಲಾಗಿತ್ತು. ಶರೀರರಚನಾಶಾಸ್ತ್ರವು ಎಲ್ಲಾ ಆರೋಗ್ಯ ವೃತ್ತಿಪರರಿಗೆ ಮಾನವ ದೇಹದ ರಚನೆಯ ಬಗ್ಗೆ ಮೂಲಭೂತ ಜ್ಞಾನವನ್ನು ಒದಗಿಸುತ್ತದೆ. ಮಾನವನ ಕೈಗಳ ಮೂಳೆಗಳು, ಸ್ನಾಯುರಜ್ಜುಗಳು, ನರಮಂಡಲದ ರಚನೆ ಇತ್ಯಾದಿಗಳನ್ನು ಒಳಗೊಂಡಿರುತ್ತದೆ. ನಾವು ಕೈಗಳನ್ನು ನಿರಂತರ ಎಲ್ಲಾ ಕೆಲಸಗಳಿಗೆ ಬಳಸುವುದರಿಂದ ಕೈಗಳ ಚಲನೆಯೂ ಮುಖ್ಯವಾಗಿರುತ್ತದೆ. ಕೈ ಯ ಶರೀರರಚನಾಶಾಸ್ತ್ರ ದ ಪರಿಶೋಧನೆ, ಅದರ ವೈದ್ಯಕೀಯ ಪ್ರಸ್ತುತತೆ ಮತ್ತು ಶಸ್ತ್ರಚಿಕಿತ್ಸಾ ಪರಿಣಾಮಗಳು ವೈದ್ಯರಿಗೆ ಅಪಾರ ಜ್ಞಾನವನ್ನು ನೀಡುತ್ತದೆ. ಈ ಕಾರ್ಯಾಗಾರವನ್ನು ವಿಶೇಷವಾಗಿ ಮಾನವರ ಕೈಯಿಯ ಬಗ್ಗೆ ತಮ್ಮ ಜ್ಞಾನವನ್ನು ನವೀಕರಿಸಲು ಬಯಸುವ ವೈದ್ಯಕೀಯ ವೃತ್ತಿಪರರು ಮತ್ತು ಆರೋಗ್ಯ ಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಸುಮಾರು 60ಕ್ಕೂ ಹೆಚ್ಚು ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್, ಕುಲಸಚಿವರಾದ ಡಾ. ಚಿದೇಂದ್ರ ಎಂ. ಶೆಟ್ಟರ್, ಶರೀರರಚನಾಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರುಗಳಾದ ಡಾ. ಎ. ವಿ. ಕುಲಕರ್ಣಿ ಮತ್ತು ಡಾ. ಎಸ್. ಕೆ. ದೇಶಪಾಂಡೆ ಈ ಕಾರ್ಯಾಗಾರವನ್ನು ಉದ್ಘಾಟಿಸಿದರು. ಎಸ್.ಡಿ.ಎಂ. ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ಎಂ ದೇಸಾಯಿರವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಕಾರ್ಯಾಗಾರವು ನಮ್ಮ ವೃತ್ತಿಯಾದ್ಯಂತ ಉಪಯುಕ್ತವಾಗಿರುವುದರಿಂದ ವಿದ್ಯಾರ್ಥಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸುಧಾರಿತ ಸೌಲಭ್ಯಗಳು ಮತ್ತು ಜ್ಞಾನದ ನವೀಕರಣವನ್ನು ಬಳಸಿಕೊಂಡು, ನಮ್ಮ ಬೋಧನೆಯನ್ನು ವರ್ಧಿಸಿಕೊಳ್ಳಬೇಕು ಎಂದರು. ಡಾ. ನಿರಂಜನ್ ಕುಮಾರ್ ಅವರು ಮಾದರಿ ತಯಾರಿಕೆಯ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿದರು. ಶರೀರರಚನಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ವೀಣಾ ಕುಲಕರ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ರೋಶನಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಡಾ. ವಿನಯ್ ಕುಲಕರ್ಣಿ ವಂದಿಸಿದರು

ಮೂಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರಿಗೆ ಸನ್ಮಾನ

Article Image

ಮೂಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರಿಗೆ ಸನ್ಮಾನ

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭದಲ್ಲಿ ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಉದ್ಘಾಟಿಸಿ ಆಶೀರ್ವಚನವನ್ನಿತ್ತರು. ಬಳಿಕ ಇದೇ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಕಂಬಳ ಕ್ರೀಡೆ ಹಾಗೂ ಇನ್ನಿತರ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ‘ಬೆದ್ರ ಫ್ರೆಂಡ್ಸ್’ ಇದರ ರುವಾರಿಯಾಗಿ ಅನೇಕ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡ ಸ್ನೇಹ ಜೀವಿ, ಸರಳಜೀವಿ ಹಾಗೂ ಮೂಡಬಿದ್ರೆಗೆ ಆಪ್ತರಾಗಿರುವ ಮೂಡುಬಿದಿರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರನ್ನು ಉಪಸ್ಥಿತ ಗಣ್ಯರ ಸಮಕ್ಷಮದಲ್ಲಿ ಗೌರವಿಸಿ ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಾರಾವಿ ಬಸದಿ ಆಡಳಿತ ಸಮಿತಿ ಅಧ್ಯಕ್ಷರಾಗಿರುವ ಬಿ. ನಿರಂಜನ ಅಜ್ರಿ, ರಾಮೇರಗುತ್ತು ಅವರನ್ನು ಅವರ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಕೊಡುಗೆಗಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಕುಲದೀಪ್ ಜೈನ್, ಚೌಟರ ಅರಮನೆ ಮೂಡಬಿದ್ರೆ ಕೃಷ್ಣರಾಜ್ ಹೆಗ್ಡೆ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು. ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆಡಳಿತ ನಿರ್ದೇಶಕರಾದ ಡಾ. ಬಿ.ಪಿ ಸಂಪತ್‌ಕುಮಾರ್ ನಿರೂಪಿಸಿದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಇವರಿಗೆ ಗೌರವ ಸನ್ಮಾನ

Article Image

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಇವರಿಗೆ ಗೌರವ ಸನ್ಮಾನ

ಧರ್ಮಸ್ಥಳ: ಮಕ್ಕಳನ್ನು ದೇವರ ಮಕ್ಕಳೆಂದು ಭಾವಿಸುತ್ತಾ, ಹಲವಾರು ಕಾರ್ಯಕ್ರಮ ಸಂಘಟನೆ, ಸೇವಾ ಚಟುವಟಿಕೆ, ಸಂಘ ಸಂಸ್ಥೆಗಳ ಸ್ಥಾಪನೆ, ಸಾವಿರಾರು ಕಲಾವಿದರಿಗೆ ಬೆಳಕಾದ ವಿಷಯಕ್ಕಾಗಿ ಆಮಂತ್ರಣ ಪರಿವಾರದ ಮುಖ್ಯಸ್ಥ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಜು.21 ರಂದು ಸನ್ಮಾನ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳ ನೇತ್ರಾವತಿ ಬಳಿಯ ಪ್ರಣವ್ ಸಭಾಂಗಣದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಮಂತ್ರಣ ಸಂಸ್ಥೆಯವರು ಸೇರಿ ಈ ಸನ್ಮಾನ ನೆರವೇರಿಸಿದರು. ಈ ಸಮಾರಂಭದಲ್ಲಿ ಹಿರಿಯರಾದ ಬಿ. ಭುಜಬಲಿ ಧರ್ಮಸ್ಥಳ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಸಂಪತ್ ಬಿ. ಸುವರ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿ, ಉದ್ಯಮಿ ಲ| ನಿತ್ಯಾನಂದ ನಾವರ, ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ, ಡಾ. ದೀಪಾಲಿ ಡೊಂಗ್ರೆ, ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀನಿವಾಸ ರಾವ್ ಧರ್ಮಸ್ಥಳ, ವಿದ್ಯಾಧರ್ ಜೈನ್ ಉಪ್ಪಿನಂಗಡಿ, ಬೆಳ್ತಂಗಡಿ ಜೆಸಿಐ ಮಂಜುಶ್ರೀ ಅಧ್ಯಕ್ಷರಾದ ರಂಜಿತ್ ಹೆಚ್.ಡಿ., ಪ್ರಣವ್ ಸಭಾಂಗಣ ಮಾಲಕರಾದ ಸುರೇಂದ್ರ ಪ್ರಭು, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಶ್ರೀದೇವಿ ಸಚಿನ್, ಬೇಬಿ ಪೂಜಾರಿ ಪುನ್ಕೆತ್ಯಾರು, ಶಾರದ ಶೆಟ್ಟಿ ಅಳದಂಗಡಿ, ಸದಾನಂದ ಬಿ.ಕುದ್ಯಾಡಿ, ಅರುಣ್ ಜೈನ್ ಅಳದಂಗಡಿ, ರಂಜನ್ ನೆರಿಯ, ಸ್ನೇಕ್ ಪ್ರಕಾಶ್ ಶೆಟ್ಟಿ ಧರ್ಮಸ್ಥಳ, ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಹರೀಶ್ ವೈ ಚಂದ್ರಮ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಪ್ರಧಾನ ಸಂಚಾಲಕ ಅಭಿಷೇಕ್ ಬಜಗೋಳಿ, ಅಧ್ಯಕ್ಷರಾದ ನಿರೀಕ್ಷಿತಾ ಮಂಗಳೂರು, ಉಪಾಧ್ಯಕ್ಷೆ ವಿಂಧ್ಯಾ ಎಸ್.ರೈ ಕಡೇಶಿವಾಲಯ, ನಿರ್ದೇಶಕರುಗಳಾದ ಚೇತನ್ ಕುಮಾರ್ ಅಮೈ, ಸ್ವಾತಿ ಸೂರಜ್ ಶಿಶಿಲ, ಆರ್.ಜೆ ಇಂದ್ರ ಕುಂದಾಪುರ, ಆಶಾ ಅಡೂರು, ವಿದ್ಯಾಶ್ರೀ ಅಡೂರ್ ಸ್ವಾತೀ ಕುಲಾಲ್ ಕಡ್ತಲ, ಕವಿತಾ ದಿನೇಶ್ ಕಟೀಲು, ಪ್ರಜ್ಞಾ ವಾಣಿಗೋರೆ ಕಾರ್ಕಳ, ಕೇಶವ ನೆಲ್ಯಾಡಿ, ಪರ್ಣಶಾ ಗೋಖಲೆ, ಹೇಮಾ ಜಯರಾಮ್ ರೈ ಕುರಿಯ, ಸುಶ್ಮೀತಾ ಮೂಡಬಿದ್ರೆ, ಹೆಚ್. ಕೆ. ನಯನಾಡು, ಪ್ರಸಾದ್ ನಾಯಕ್ ಕಾರ್ಕಳ ಮುಂತಾದವರು ಉಪಸ್ಥಿತರಿದ್ದರು.

ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ

Article Image

ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ

ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್‌ನವರು ಹಲವು ಖ್ಯಾತ ವೈದ್ಯರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಜೂನ್ 25ರಂದು ಸಂಜೆ 6 ಗಂಟೆಗೆ ನಯನ ಸಭಾಂಗಣದಲ್ಲಿ ಜರುಗಿದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸನ್ಮಾನ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡಾ. ನೀರಜಾ ನಾಗೇಂದ್ರ ಕುಮಾರ್ ಅವರಿಗೆ ‘ವೈದ್ಯ ಸೇವಾ ರತ್ನ’ ಪ್ರಶಸ್ತಿ ಪ್ರದಾನ ಮಾಡಿದರು.

ಕವಿತಾ ರಚನಾ ಕಮ್ಮಟ

Article Image

ಕವಿತಾ ರಚನಾ ಕಮ್ಮಟ

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ಶಾಲೆಯ ಸಭಾ ಭವನದಲ್ಲಿ ದಿನಾಂಕ 26-07-2024ರಂದು ಒಂದು ದಿನದ ಕವಿತಾ ರಚನಾ ಕಮ್ಮಟ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪವನ್ ಕುಮಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ದಿವಾಕರ್ ಬಲ್ಲಾಲ್ ರವರು ಮಕ್ಕಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಸಭೆಯ ಅಧ್ಯಕ್ಷರಾದ ಮಂಜುಳಾ ಜೈನ್ ರವರು ತಮ್ಮ ಅಧ್ಯಕ್ಷತೆ ನುಡಿಯಲ್ಲಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದರು. ಸಾಹಿತ್ಯ ಸಂಘದ ಮಾರ್ಗದರ್ಶಿ ಶಿಕ್ಷಕರಾದ ಮಂಜುಳಾರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಣ್ಯರನ್ನು ಸಂಧ್ಯಾ ಸ್ವಾಗತಿಸಿದರು. ಸಾಕ್ಷಿ ಧನ್ಯವಾದಗೈದರು. ರೊಲಿಟಾ ಕಾರ್ಯಕ್ರಮವನ್ನು ನಿರೂಪಿಸಿದರು. ಕವಿತಾ ರಚನಾ ಕಮ್ಮಟ ಕಾರ್ಯಗಾರದ ಸಮಾರೋಪ ಸಮಾರಂಭವನ್ನು ಮಧ್ಯಾಹ 3.30 ಕ್ಕೆ ಶಾಲಾ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಯರಾದ ಶಶಿಕಾಂತ್ ವೈ ವಹಿಸಿದ್ದರು. ಅತಿಥಿಗಳಾಗಿ ಟಿ.ಎನ್. ಖಂಡಿಗೆ ಲೇಖಕರು ಮತ್ತು ವಿಮರ್ಶಕರು, ಪುರಸಭೆಯ ಸದಸ್ಯರಾದ ಶ್ವೇತಾ ಪವೀಣ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪವನ್ ಕುಮಾರ್, ಶಾಲಾ ಹಿರಿಯ ಶಿಕ್ಷಕಿ ಅನುಪಮಾ ಕುಮಾರಿ ಹಾಗೂ ಸಾಹಿತ್ಯ ಸಂಘದ ಮೇಲ್ವಿಚಾರಕರಾದ ಮಂಜುಳರವರು ಉಪಸ್ಥಿತರಿದ್ದರು. ಟಿ.ಎನ್ ಖಂಡಿಗ ಇವರು ಕಾರ್ಯಕ್ರಮದ ಆಯೋಜನೆಯ ಕುರಿತು ಸಂತಸ ವ್ಯಕ್ತಪಡಿಸಿದರು. ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ಓದುವಿಕೆಯ ಮಹತ್ವದ ಬಗ್ಗೆ ಕವನ ಮೂಲಕ ತಿಳಿಸಿದರು. ಇನ್ನೋರ್ವ ಅತಿಥಿಯಾದ ಶ್ವೇತಾ ಪ್ರವೀಣ್ ರವರು ಇನ್ನಷ್ಟು ಕವಿತೆಯನ್ನು ಬರೆಯಲು ವಿದ್ಯಾರ್ಥಿಗಳು ಮತ್ತಷ್ಟು ಪ್ರಯತ್ನವನ್ನು ಮಾಡಬೇಕೆಂದು ಶುಭ ಹಾರೈಸಿದರು. ಪವನ್ ಕುಮಾರ್ ರವರು ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕಾರ್ಯಗಾರದ ಅನುಭವವನ್ನು ವೇದಿಕೆಯಲ್ಲಿ ಹಂಚಿಕೊಂಡರು. ಹಾಗೂ ತಾವೇ ಸ್ವತ: ರಚಿಸಿದ ಕವನಗಳನ್ನು ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಅಧ್ಯಕ್ಷೀಯ ನುಡಿಯಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಳ್ಳಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಈ ಕಾರ್ಯಕ್ರಮವನ್ನು ಸಂಧ್ಯಾರವರು ನಿರೂಪಿಸಿದರು.

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭ

Article Image

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭ

ಅರಿಷಡ್ವರ್ಗಗಳನ್ನು ಗೆದ್ದು ಪಂಚೇಂದ್ರಿಯಗಳನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡವರು ಜಿನರು ಆಸ್ತೇಯ ಅಪರಿಗ್ರಹದಂತಹ ಶ್ರೇಷ್ಠ ಸಿದ್ಧಾಂತಗಳನ್ನು ಪಾಲಿಸುತ್ತಾ ಬಂದಿರುವ ಜೈನ ಧರ್ಮದ ಕುರಿತು ಶಿಕ್ಷಣವನ್ನು ನೀಡುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ನರಸಿಂಹರಾಜಪುರದ ಅತಿಶಯ ಕ್ಷೇತ್ರ ಬಸ್ತಿಮಠದ ಪರಮಪೂಜ್ಯ ಡಾ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹೇಳಿದರು. ಅವರು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಜೈನ ಪಾಠಗಳ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನವನ್ನಿತ್ತರು. ಬಳಿಕ ಮಾತಾಡಿದ ಅವರು ಹೆಣ್ಣು ಮಗುವನ್ನು ನಿರ್ಲಕ್ಷಿಸುವ ಧೋರಣೆಯು ನಾಗರಿಕ ಸಮಾಜದಲ್ಲಿ ಹುಟ್ಟಿಕೊಂಡಿರುವುದು ಅತ್ಯಂತ ಖೇದಕರ ಹೆಣ್ಣಿನ ಮನೋವ್ಯಕ್ತಿತ್ವವನ್ನು ಗೌರವಿಸುವ ಮಾನವೀಯ ಧೋರಣೆಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕಾಗಿದೆ. ಬದುಕಿನ ಎಲ್ಲಾ ರಂಗಗಳಲ್ಲೂ ತಾರತಮ್ಯ ಅವಕಾಶವಿಲ್ಲದಂತೆ ಸಮಾಜ ನಿರ್ಮಾಣ ಮಾಡಬೇಕಾಗಿರುವುದು ಇಂದಿನ ಅಗತ್ಯ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ದೀರ್ಘವಾದ ಬದುಕಿನಲ್ಲಿ ಬರುವ ಸಂಘರ್ಷಗಳಿಗೆ ಉತ್ತರವಾಗಬಲ್ಲ ಧರ್ಮಶಿಕ್ಷಣ ನಮ್ಮನ್ನು ಸತ್‌ಪಥದಲ್ಲಿ ನಡೆಯುವಂತೆ ಮಾಡುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ ಧರ್ಮಸಮನ್ವಯತೆಗೆ ಹೆಚ್ಚಿನ ಮಹತ್ವ ನೀಡುತ್ತದೆ ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನ್ಯೂಪಡಿವಾಳ್ಸ್ ನ ಹರ್ಷವರ್ಧನ್ ಪಡಿವಾಳ್ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ನಾರಾವಿ ಬಸದಿ ಆಡಳಿತ ಸಮಿತಿ ಅಧ್ಯಕ್ಷರಾಗಿರುವ ಬಿ. ನಿರಂಜನ ಅಜ್ರಿ, ರಾಮೇರಗುತ್ತು ಅವರನ್ನು ಅವರ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಕೊಡುಗೆಗಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಕುಲದೀಪ್ ಜೈನ್, ಚೌಟರ ಅರಮನೆ ಮೂಡಬಿದ್ರೆ ಕೃಷ್ಣರಾಜ್ ಹೆಗ್ಡೆ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು. ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್‌ಕುಮಾರ್ ನಿರೂಪಿಸಿದರು.

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

Article Image

ದೂರದರ್ಶನದ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಅನನ್ಯ ರಂಜನಿ ಆಯ್ಕೆ

ದೂರದರ್ಶನ 'ಬಿ' ಗ್ರೇಡ್ ಕಲಾವಿದೆಯಾಗಿ ಮೂಡುಬಿದಿರೆಯ ಮಹಾವೀರ ಹಾಗೂ ಆರತಿರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಅನನ್ಯ ರಂಜನಿ ಆಯ್ಕೆಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್, ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ. ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು, ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟ

Article Image

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು ಈ ಕೆಳಗಿನಂತಿವೆ. • 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು. • ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು. • ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು. • ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ. • ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ

Article Image

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ

ಉಜಿರೆ: ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ನೀಡುವವನೆ ಗುರು. ಗುರುವಿನ ಮಹಿಮೆ ಅಪಾರವಾಗಿದ್ದು, ಗುರುವಿಗೆ ವಿಶೇಷ ಮಾನ್ಯತೆಗೆ, ಗೌರವ ಇದೆ. ಗುರು ಇಲ್ಲದಿದ್ದರೆ ಜೀವನವೇ ಶೂನ್ಯವಾಗುತ್ತದೆ ಎಂದು ಪೂಜ್ಯ ಆರ್ಯಿಕಾ ಮುಕ್ತಿಮತಿ ಮಾತಾಜಿ ಹೇಳಿದರು. ಬೆಳ್ತಂಗಡಿ ತಾಲೂಕಿನ ನಾರಾವಿ ಬಳಿ ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಮಹಾವೀರ ಸ್ವಾಮಿ ಬಸದಿಯಲ್ಲಿ ತಮ್ಮ ಚಾತುರ್ಮಾಸ ವೃತಾಚರಣೆಯ ಅಂಗವಾಗಿ ಗುರುಪೂರ್ಣಿಮೆಯ ದಿನ ಭಾನುವಾರ ಮಂಗಳಕಲಶ ಸ್ಥಾಪನೆ ಸಮಾರಂಭದಲ್ಲಿ ಅವರು ಮಂಗಳ ಪ್ರವಚನ ನೀಡಿದರು. ಗುರುಗಳ ಮೂಲಕ ಆತ್ಮನ ನಿಜಸ್ವರೂಪವನ್ನು ತಿಳಿದು ವೃತ- ನಿಯಮಗಳ ಪಾಲನೆ, ಸ್ವಾಧ್ಯಾಯ, ಜಪ, ತಪ, ಧ್ಯಾನ, ಸತ್ಯ, ಅಹಿಂಸೆ, ಅಪರಿಗ್ರಹ ಮೊದಲಾದ ಪಂಚಾಣು ವೃತಗಳ ಪಾಲನೆಯೊಂದಿಗೆ, ರತ್ನತ್ರಯ ಧರ್ಮದ ಅನುಷ್ಠಾನದಿಂದ ಅಕ್ಷಯ ಸುಖವನ್ನೀಯುವ ಮೋಕ್ಷಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿ, ಕಾಲ್ನಡಿಗೆಯಲ್ಲೆ ಸಂಚರಿಸಿ ಧರ್ಮಪ್ರಭಾವನೆ ಮಾಡುವ ಮುನಿಗಳು, ಸಾಧು-ಸಂತರು, ಮಾತಾಜಿಯವರು ನಲಿದಾಡುವ ದೇವರು. ಅವರ ವಾಸ್ತವ್ಯ, ದರ್ಶನ ಮತ್ತು ಸೇವೆಯಿಂದ ಸಾನ್ನಿಧ್ಯ ವೃದ್ಧಿಯಾಗುತ್ತದೆ. ಬದುಕಿನಲ್ಲಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ. ಧರ್ಮದ ಮರ್ಮವನ್ನರಿತು ಬದುಕಿನಲ್ಲಿ ಅನುಷ್ಠಾನಗೊಳಿಸಬೇಕು. ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು. ಮಕ್ಕಳಿಗೆ ಉತ್ತಮ ಧಾರ್ಮಿಕ ಸಂಸ್ಕಾರ ನೀಡಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು. ಭಕ್ತಿಯೇ ಮುಕ್ತಿಗೆ ಸಾಧನ, ಸರ್ವಶ್ರೇಷ್ಠ ಎಂದು ಅವರು ತಿಳಿಸಿದರು. ಹಿರಿಯ ವಿದ್ವಾಂಸ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಮಾತನಾಡಿ, ಚಾತುರ್ಮಾಸವು ಜ್ಞಾನಸಂಪಾದಿಸುವ ಜ್ಞಾನಯಜ್ಞವಾಗಿದ್ದು, ಆತ್ಮಕಲ್ಯಾಣಕ್ಕೆ ಪ್ರೇರಕವಾಗಿದೆ. ಮಾತಾಜಿಯವರ ಶ್ರದ್ಧಾ-ಭಕ್ತಿಯ ಸೇವೆಯಿಂದ ಮಾನಸಿಕ ಶಾಂತಿ, ನೆಮ್ಮದಿ ದೊರಕಿ ಜೀವನ ಪಾವನವಾಗುತ್ತದೆ ಎಂದರು. ಅಂಡಾರು ಗುಣಪಾಲ ಹೆಗ್ಡೆ ಶುಭಾಶಂಸನೆ ಮಾಡಿದರು. ಅಧ್ಯಕ್ಷತೆ ವಹಿಸಿದ ಸುದರ್ಶನ ಜೈನ್, ಬಂಟ್ವಾಳ ಮಾತನಾಡಿ ಯುವಜನತೆ ಹೃದಯ ಶ್ರೀಮಂತಿಕೆಯೊಂದಿಗೆ ಧಾರ್ಮಿಕ ಸಭೆ-ಸಮಾರಂಭಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು. ಮೊದಲ ಮಂಗಳಕಲಶಗಳನ್ನು ಚಾತುರ್ಮಾಸ ಸಮಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಹೊಸ್ಮಾರು ಸ್ಥಾಪನೆ ಮಾಡಿದರು. ನಿರೀಕ್ಷಾ ಹೊಸ್ಮಾರು ಅವರ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು. ಪ್ರೇಮ್‌ಕುಮಾರ್ ಸ್ವಾಗತಿಸಿದರು. ಶಿಶುಪಾಲ ಜೈನ್ ನಾರಾವಿ ಧನ್ಯವಾದವಿತ್ತರು. ನಿರಂಜನ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ಚಾತುರ್ಮಾಸದ ಅವಧಿಯಲ್ಲಿ ವಿಶೇಷ ಪೂಜೆ, ಆರಾಧನೆ, ಸಾಮೂಹಿಕ ವೃತೋಪದೇಶ, ಮಾತಾಜಿಯವರಿಂದ ಮಂಗಳ ಪ್ರವಚನ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಶಿಕ್ಷಕ ಕೌಶಲ್ಯ ವರ್ಧನಾ ತರಬೇತಿ ಕಾರ್ಯಗಾರ

Article Image

ಶಿಕ್ಷಕ ಕೌಶಲ್ಯ ವರ್ಧನಾ ತರಬೇತಿ ಕಾರ್ಯಗಾರ

ದಿಗಂಬರ ಜೈನ ವಿದ್ಯಾವರ್ಧಕ ಸಂಘ(ರಿ.)ಮೂಡಬಿದ್ರೆ ಇದರ ಆಶ್ರಿತ ಸಂಸ್ಥೆಗಳಾದ ಜೈನ ಪ್ರೌಢಶಾಲೆ, ಡಿ.ಜೆ ಆಂಗ್ಲ ಮಾಧ್ಯಮ ಶಾಲೆ ಮತ್ತು ಡಿ.ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಒಂದು ದಿನದ ‘ಶಿಕ್ಷಕ ಕೌಶಲ್ಯ ವರ್ಧನಾ’ ತರಬೇತಿ ಕಾರ್ಯಕ್ರಮವನ್ನು (Teacher’s skill Enhancement training program) ಜೈನ ಪ್ರೌಢಶಾಲೆಯ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕರಾದ ಕೆ. ಹೇಮರಾಜ್ ರವರು ನೆರವೇರಿಸಿದರು. ತರಬೇತುದಾರರಾಗಿ ರಾಷ್ಟ್ರೀಯ ತರಬೇತುದಾರರಾದ ಬಾಸುಮ ಕೊಡಗು ಆಗಮಿಸಿದ್ದರು. ಬೆಳಗ್ಗೆ 9.30 ರಿಂದ ಸಂಜೆ 4.00 ಗಂಟೆಯವರೆಗೆ ನಡೆದ ಈ ತರಬೇತಿ ಕಾರ್ಯಗಾರದಲ್ಲಿ ಶಿಕ್ಷಕರ ಅವಲೋಕನ, ವಿದ್ಯಾರ್ಥಿ-ಶಿಕ್ಷಕ ಸಂಬಂಧ, ಸಂವಹನ ಮಾಧ್ಯಮ, ಅಂತರ್ಜಾಲ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಪ್ರಭಾವ ಇತ್ಯಾದಿ ವಿಷಯಗಳನ್ನು ತರಬೇತುದಾರರು ಗುಂಪು ಚರ್ಚೆಗಳ ಮೂಲಕ ಪ್ರಸ್ತುತ ಪಡಿಸಿದರು. ಕಾರ್ಯಕ್ರಮದಲ್ಲಿ ಜೈನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೆ. ಶ್ಯಾಮ್ ಪ್ರಸಾದ್, ಡಿ.ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ, ಡಿ.ಜೆ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವೀಣಾ ಹಾಗೂ 3 ವಿದ್ಯಾಸಂಸ್ಥೆಗಳ ಶಿಕ್ಷಕರು ಭಾಗವಹಿಸಿದ್ದರು. ಶಿಕ್ಷಕರಾದ ನಿತೇಶ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು ಮತ್ತು ಸುಧಾ ಕೆ. ತರಬೇತುದಾರರನ್ನು ಪರಿಚಯಿಸಿದರು.

ಅಷ್ಟಾಹ್ನಿಕ ಪೂಜಾ ಕಾರ್ಯಕ್ರಮ

Article Image

ಅಷ್ಟಾಹ್ನಿಕ ಪೂಜಾ ಕಾರ್ಯಕ್ರಮ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಕಾರ್ಕಳದ ಪರಮಪೂಜ್ಯ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶುಭ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭಾನುವಾರ ಅಷ್ಟಾಹ್ನಿಕ ಪೂಜೆ ಕಾರ್ಯಕ್ರಮ ಪ್ರಾರಂಭವಾಯಿತು. ಸುಗುಣ ಎಸ್.ಡಿ. ಶೆಟ್ಟಿ ಉಜಿರೆ ಅವರ ಮಗಳು ಪ್ರಗತಿ ರಾಜಿತ್ ಶೆಟ್ಟಿ, ಶ್ರೀ ಕ್ಷೇತ್ರ ಚಂದ್ರಪುರಕ್ಕೆ 52 ಜಿನ ಬಿಂಬಗಳಿರುವ ನಂದೀಶ್ವರ ಮಂಟಪವನ್ನು ದಾನವಾಗಿ ನೀಡಿದ್ದು, ಕೊಲ್ಲಾಪುರ ಸಮೀಪ ಉದ್ಗಾವ್‌ನಲ್ಲಿ ಆಚಾರ್ಯ ಶ್ರೀ 108 ವಿಶುದ್ದ ಸಾಗರಮುನಿ ಮಹಾರಾಜರಿಂದ ನಂದೀಶ್ವರ ಮಂಟಪಕ್ಕೆ ಲಘು ಪಂಚ ಕಲ್ಯಾಣ ನಡೆಯಿತು. ಆಷಾಢ ಮಾಸದ ಅಷ್ಟಾಹ್ನಿಕ ಪರ್ವದ ಮೊದಲ ಅಷ್ಟಮಿಯ ದಿನದಂದು ಬೆಳಗ್ಗೆ 10.30ಕ್ಕೆ ಜಿನ ಮಂದಿರದಲ್ಲಿ ವಿಶೇಷ ಆರಾಧನೆ ಹಾಗೂ ವಿಶೇಷ ಪೂಜೆಗಳು ನೆರವೇರಿದ ನಂತರ ವಿರಾಜಮಾನಗೊಂಡಿದೆ. ಈ ಪುಣ್ಯ ಕಾರ್ಯದಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದರು. ಉಜಿರೆ ಎಸ್.ಡಿ. ಶೆಟ್ಟಿ ದಂಪತಿಗಳನ್ನು ಗೌರವಿಸಲಾಯಿತು. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ 53ನೆ ವರ್ಷದ ಪುರಾಣ ಕಾವ್ಯ ವಾಚನ - ಪ್ರವಚನ ಉದ್ಘಾಟನೆ

Article Image

ಧರ್ಮಸ್ಥಳದಲ್ಲಿ 53ನೆ ವರ್ಷದ ಪುರಾಣ ಕಾವ್ಯ ವಾಚನ - ಪ್ರವಚನ ಉದ್ಘಾಟನೆ

ಉಜಿರೆ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣ ವಾಚನ - ಪ್ರವಚನದಿಂದ ಪ್ರತಿ ಕಲೆಯೂ, ಕಲಾವಿದರೂ ಬೆಳೆಯಬೇಕು ಎಂದು ಹಿರಿಯ ವಿದ್ವಾಂಸ ಪ್ರೊ. ಎಮ್. ಪ್ರಭಾಕರ ಜೋಶಿ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಜು. 16 ರಿಂದ ಆಗೋಸ್ಟ್ 17 ರ ವರೆಗೆ ಪ್ರತಿ ದಿನ ಸಂಜೆ ಗಂಟೆ 6.30 ರಿಂದ 8.00 ರ ವರೆಗೆ ನಡೆಯಲಿರುವ 53ನೆ ವರ್ಷದ “ಜೈಮಿನಿ ಭಾರತ” ಮತ್ತು “ತುರಂಗ ಭಾರತ” ಪುರಾಣ ಕಾವ್ಯ ವಾಚನ - ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇವರ ಕಲ್ಪನೆಯನ್ನು ಜನಮನಕ್ಕೆ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ವಿಷ್ಣುಪುರಾಣ, ಭಾಗವತ, ರಾಮಾಯಣ, ಮಹಾಭಾರತ ಮೊದಲಾದ ಅನೇಕ ಪುರಾಣಗಳಿವೆ. ರಾಮಾಯಣದಲ್ಲಿಯೂ ಬೇರೆ ಬೇರೆ ಭಾಷೆಗಳಲ್ಲಿ ಹಲವು ರೀತಿಯ ರಾಮಾಯಣಗಳು ರಚನೆಯಾಗಿವೆ. ನಮ್ಮ ಸನಾತನ ಧಾರ್ಮಿಕ ಪರಂಪರೆಯನ್ನು ವಿಸ್ತರಿಸಿ ಸೃಜನಶೀಲತೆಯೊಂದಿಗೆ ಜನರಿಗೆ ತಲುಪಿಸುವ ಕಾಯಕವನ್ನು ಪುರಾಣಗಳು ಮಾಡುತ್ತವೆ. ಪುರಾಣಗಳಲ್ಲಿ ಜ್ಞಾನ, ವಿಜ್ಞಾನ, ಸಾಹಿತ್ಯ, ಕಲೆ, ಸಂಗೀತ, ಮಾನವೀಯ ಮೌಲ್ಯಗಳು – ಎಲ್ಲವೂ ಅಡಕವಾಗಿವೆ ಎಂದು ಪ್ರೊ. ಎಮ್. ಪ್ರಭಾಕರ ಜೋಶಿ ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪುರಾಣ ವಾಚನ - ಪ್ರವಚನದಿಂದ ಸಮಯದ ಸದುಪಯೋಗದೊಂದಿಗೆ ವಿಶಿಷ್ಟ ಮಾಹಿತಿ, ಮಾರ್ಗದರ್ಶನ ದೊರಕುತ್ತದೆ. ನಮ್ಮ ಜ್ಞಾನ ಕ್ಷಿತಿಜ ವಿಸ್ತರಣೆಯಾಗುತ್ತದೆ ಎಂದು ಹೇಳಿದರು. ಪ್ರಸ್ತುತ ಜನರಲ್ಲಿ ಮಾತನಾಡುವ ಚಟ ಹೆಚ್ಚಾಗಿದೆ. ಕೇಳುವ ವ್ಯವಧಾನ ಯಾರಲ್ಲೂ ಇರುವುದಿಲ್ಲ. ಎಲ್ಲರೂ ಉತ್ತಮ ಶ್ರೋತೃಗಳಾಗಿ ಜೀವನಶೈಲಿ ಸುಧಾರಣೆ ಮಾಡಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿದ್ದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ಕೊನೆಯಲ್ಲಿ ಧನ್ಯವಾದವಿತ್ತರು.

ಉಜಿರೆ: ಸ್ನೇಹಕೂಟ

Article Image

ಉಜಿರೆ: ಸ್ನೇಹಕೂಟ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ, ವಿದ್ಯಾರ್ಥಿ ಕ್ಷೇಮಪಾಲನ ಮುಖ್ಯ ಅಧಿಕಾರಿಯಾಗಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬಿ. ಸೋಮಶೇಖರ ಶೆಟ್ಟಿಯವರು ಏರ್ಪಡಿಸಿದ ಸ್ನೇಹಕೂಟದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ| ಸತೀಶ್ಚಂದ್ರ ಎಸ್. ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಬಿ. ಸೋಮಶೇಖರ ಶೆಟ್ಟಿಯವರು ದಣಿವರಿಯದ ದುಡಿಮೆಗಾರ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ಮಾಡುವ ಪರಿಯಿಂದ ಆಡಳಿತ ಮಂಡಳಿಯ ಮೆಚ್ಚುಗೆಗೆ ಪಾತ್ರರಾದವರು. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ರಚಿಸಿದ ಪ್ರಗತಿ ಪರಿಶೀಲನ ತಂಡದ ಸಂಚಾಲಕರಾಗಿ ಶಾಲೆಗಳಿಗೆ ಭೇಟಿ ನೀಡಿ, ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದಿಂದ ಶಾಲಾ ಫಲಿತಾಂಶದಲ್ಲಿ ವಿಶೇಷ ಸಾಧನೆಗಳ ಮೂಲಕ ಎಸ್.ಡಿ.ಎಂ. ನ ಎಲ್ಲಾ ಪ್ರೌಢ ಶಾಲೆಗಳಲ್ಲಿಯೂ ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇಕಡಾ ನೂರು ಫಲಿತಾಂಶ ದಾಖಲಿಸುವಲ್ಲಿ ಇವರ ಪ್ರಯತ್ನ ಗಮನಾರ್ಹವಾದುದು. ಶಿಕ್ಷಣ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿದ್ದು, ಪ್ರಾರಂಭದ ವರ್ಷದಲ್ಲಿ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಣೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದರು. ಸಂಸ್ಥೆಯ ಸಹೋದ್ಯೋಗಿಗಳ ಜೊತೆ ಆತ್ಮೀಯರಾಗಿದ್ದು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ನಿಷ್ಠುರವಾದಿ. ಎಸ್.ಡಿ.ಎಂ. ಕಲಾ ಕೇಂದ್ರದಲ್ಲಿ ಕಲಾ ವೈಭವ ತಂಡ ಕಟ್ಟುವಲ್ಲಿ ವಿಶೇಷ ಶ್ರಮವಹಿಸಿದ್ದರು ಎಂದು ತಿಳಿಸಿದರು. ಕಾರ್ಯಕ್ರಮ ಸಂಘಟಕರೂ, ಉತ್ತಮ ತರಬೇತುದಾರರೂ, ವಾಗ್ಮಿಗಳೂ ಆಗಿರುವ ಬಿ. ಸೋಮಶೇಖರ ಶೆಟ್ಟಿ ಹಾಗೂ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಜಯಭಾರತಿ ಇವರನ್ನು ಗೌರವಿಸಿ ನಿವೃತ್ತ ಜೀವಕ್ಕೆ ಶುಭ ಹಾರೈಸಿದರು. ಬಿ. ಸೋಮಶೇಖರ ಶೆಟ್ಟಿಯವರು ಮಾತನಾಡಿ, ಶ್ರೀ ಕ್ಷೇತ್ರ ದರ್ಮಸ್ಥಳದ ಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರು ಶಿಕ್ಷಣದ ಜೊತೆಗೆ ಉದ್ಯೋಗ ನೀಡಿ ಬದುಕಿಗೆ ಆಶ್ರಯ ನೀಡಿದವರು ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸುವ ವಿಶೇಷ ಅವಕಾಶದ ಜೊತೆಗೆ, ಶ್ರೀ ಕ್ಷೇತ್ರದ ಅನೇಕ ಸಮಾರಂಭಗಳಲ್ಲಿ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಹೊಣೆಗಾರಿಕೆಯನ್ನು ಒದಗಿಸಿದ್ದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ, ಆಧುನಿಕತೆ, ಮೌಲ್ಯ ಶಿಕ್ಷಣ, ಭೌತಿಕ ಸೌಲಭ್ಯಗಳ ಮೂಲಕ, ಮಾದರಿ ಶಿಕ್ಷಣ ಸಂಸ್ಥೆಗಳನ್ನಾಗಿ ಮಾಡುವಲ್ಲಿ ನಿರಂತರ ಮಾರ್ಗದರ್ಶನ ಮಾಡಿದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯವರಾದ ಡಿ. ಹರ್ಷೇಂದ್ರ ಕುಮಾರ್‌ರವರ ಆಶಯದಂತೆ ಕರ್ತವ್ಯ ನಿರ್ವಹಿಸಿದ ಬಗ್ಗೆ ತೃಪ್ತಿಯ ಮಾತುಗಳನ್ನಾಡಿದರು. ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಸುಪ್ರೀಯ ಹರ್ಷೇಂದ್ರ ಕುಮಾರ್‌ರವರ ಹಾಗೂ ಕೀರ್ತಿ ಶೇಷ ಡಾ| ಬಿ. ಯಶೋವರ್ಮರ ಮಾರ್ಗದರ್ಶನ, ಸಹಕಾರವನ್ನು ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು ವರ್ಷಗಳಿಂದ ಕಾರ್ಯದರ್ಶಿಯಾಗಿ, ನಿರಂತರ ಮಾರ್ಗದರ್ಶನ ಮಾಡಿದ ಡಾ| ಸತೀಶ್ಚಂದ್ರ ಎಸ್. ಇವರ ನೇತೃತ್ವದಲ್ಲಿ ಯಶಸ್ವೀ ಕರ್ತವ್ಯ ನಿರ್ವಹಿಸಿದ ಸಂತೋಷವನ್ನು ವ್ಯಕ್ತಪಡಿಸಿ ವಂದಿಸಿದರು. ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲರನ್ನು ನೆನಪಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ CEO ಪೂರಣ್ ವರ್ಮ, ವಿವಿಧ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಮುಖ್ಯ ಶಿಕ್ಷಕರೂ, ಶಾರೀರಿಕ ನಿರ್ದೇಶಕರು, ಬಂಧು ಬಳಗ, ಸ್ನೇಹಿತರು ಸ್ನೇಹಕೂಟದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಪತ್ನಿ ಜಯಭಾರತಿ, ಪುತ್ರ ಬಿ. ಮಿಥುನ್ ಕುಮಾರ್, ಅಪೂರ್ವ ಮಿಥುನ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಪುನೀತ್ ಸ್ವಾಗತಿಸಿ, ನಿರೂಪಿಸಿದ ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯ ಕುಮಾರ್ ಎಂ. ಇವರು ವಂದಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ನವೀಕೃತ ಸಭಾಂಗಣ ಲೋಕಾರ್ಪಣೆ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ನವೀಕೃತ ಸಭಾಂಗಣ ಲೋಕಾರ್ಪಣೆ

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಸೇರಿದಂತೆ ಮಹತ್ವದ ಬೃಹತ್ ಕಾರ್ಯಕ್ರಮಗಳಿಗೆ ವೇದಿಕೆ ಒದಗಿಸಿಕೊಡುವ ಬಹುಉದ್ದೇಶಿತ ಸುಸಜ್ಜಿತ ನವೀಕೃತ ಇಂದ್ರಪಸ್ಥ ಒಳಾಂಗಣ ಸಭಾಂಗಣವನ್ನು ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಶೈಕ್ಷಣಿಕ ಕಲಿಕೆಯೊಂದಿಗೆ ಸಂಸ್ಕೃತಿನಿಷ್ಠ ವಿವೇಕವನ್ನು ಯುವಪೀಳಿಗೆಗೆ ದಾಟಿಸುವುದಕ್ಕೆ ಆದ್ಯತೆ ನೀಡುವ ಎಸ್.ಡಿ.ಎಂ ಕಾಲೇಜಿನ ಉದಾತ್ತ ಆಶಯಕ್ಕೆ ಅನುಗುಣವಾಗಿ ಇಂದ್ರಪ್ರಸ್ಥ ಸಭಾಂಗಣ ರೂಪುಗೊಂಡಿದೆ ಎಂದರು. ಶೈಕ್ಷಣಿಕ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡು ಬಹುಮುಖೀ ವ್ಯಕ್ತಿತ್ವದೊಂದಿಗೆ ಬೆಳಗಬೇಕೆಂಬುದು ಸಂಸ್ಥೆಯ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯಗಳೊಂದಿಗಿನ ಇಂದ್ರಪ್ರಸ್ಥ ಸಭಾಂಗಣ ವೇದಿಕೆ ಒದಗಿಸಿಕೊಡುತ್ತದೆ ಎಂದು ಹೇಳಿದರು. ಕರಾವಳಿ ಭಾಗದಲ್ಲಿ ನಾಲ್ಕು ತಿಂಗಳ ಕಾಲವೂ ನಿರಂತರ ಮಳೆ ಇರುತ್ತದೆ. ಇದರ ಮಧ್ಯೆಯೂ ನಾಟಕ, ನೃತ್ಯ, ಮನರಂಜನೆ ಹಾಗೂ ಕ್ರೀಡಾ ಚಟುವಟಿಕೆಗಳು ಮಳೆಗಾಲದಲ್ಲಿಯೂ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶ ಇಂದ್ರಪ್ರಸ್ಥ ಸಭಾಂಗಣದ ನವೀಕರಣದ ಹಿಂದಿದೆ. ಕಾಲಕ್ಕನುಗುಣವಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳು ಇಲ್ಲಿ ಅಳವಡಿಕೆಯಾಗಿರುವುದು ಸಂತಸದ ವಿಚಾರ ಎಂದರು. ಇಂದ್ರಪ್ರಸ್ತ ಸಭಾಂಗಣದ ನವೀಕರಣದ ಸಂಪೂರ್ಣ ನಿರ್ವಹಣಾ ಜವಾಬ್ದಾರಿ ಹೊಂದಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರಕುಮಾರ್ ಅವರು ಮಾತನಾಡಿ ಸಭಾಂಗಣದ ವೈಶಿಷ್ಟ್ಯತೆಯ ಸಂಪೂರ್ಣ ವಿವರ ನೀಡಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಸಭಾಂಗಣಕ್ಕೆ ವಿಶೇಷ ಮಹತ್ವವಿದೆ ಎಂದರು. 1991ರಲ್ಲಿ ಕಾಲೇಜಿನ ಬೆಳ್ಳಿಹಬ್ಬದ ಸಂದರ್ಭದಲ್ಲಿ ಸಭಾಂಗಣದ ಪರಿಕಲ್ಪನೆ ಹುಟ್ಟಿಕೊಂಡಿತು. 1994ರಲ್ಲಿ ಸಭಾಂಗಣ ಉದ್ಘಾಟನೆಗೊಂಡಿತ್ತು. ಪ್ರಸ್ತುತ ಕಾಲಘಟ್ಟದ ಅವಶ್ಯಕತೆಗೆ ಅನುಗುಣವಾಗಿ ಸಭಾಂಗಣವನ್ನು ನವೀಕರಿಸಲಾಗಿದೆ. ಕಾರ್ಯಕ್ರಮಗಳು ಆಯೋಜಿತವಾದಾಗ ಕಾಂಕ್ರೀಟ್ ಗೋಡೆ ಇದ್ದಕಾರಣದ ಪ್ರತಿಧ್ವನಿಯ ಸಮಸ್ಯೆ ಇತ್ತು. ಇದರೊಂದಿಗೆ ಇತರೆ ತಾಂತ್ರಿಕ ನ್ಯೂನತೆಗಳು ಮತ್ತು ಸವಾಲುಗಳೂ ಇದ್ದವು. ಈಗ ಪುನರ್ನಿರ್ಮಾಣದ ಹಂತದಲ್ಲಿ ಇವೆಲ್ಲಾ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು. ಧ್ವನಿ ಮತ್ತು ಬೆಳಕಿನ ವ್ಯವಸ್ಥೆಗೆ ಹೊಸ ಆಯಾಮ ನೀಡಲಾಗಿದೆ. ಪ್ರೇಕ್ಷಕರ ಸಾಲುಗಳನ್ನೂ ಸುವ್ಯವಸ್ಥಿತಗೊಳಿಸಲಾಗಿದೆ. ವೇದಿಕೆಯು ಹಿಂದಿಗಿಂತಲೂ ಈಗ ಇನ್ನಷ್ಟು ವಿಸ್ತಾರಗೊಂಡಿದೆ. ಗ್ರೀನ್ ರೂಮ್‌ನಲ್ಲೂ ಕೂಡಾ ಅತ್ಯಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲಾಗಿದೆ. ತುಂಬಾ ಅತ್ಯಾಕರ್ಷಕವಾಗಿ ರೂಪುಗೊಂಡಿರುವ ಈ ಸಭಾಂಗಣವು ನಿರಂತರವಾಗಿ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ ಸದ್ಬಳಕೆ ಆಗಲಿ ಎಂದು ಆಶಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸುಪ್ರಿಯಾ ಹರ್ಷೇಂದ್ರಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ.ಕುಮಾರ ಹೆಗಡೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐಟಿ ವಿಭಾಗದ ಸಿಇಓ ಪೂರಣ್ ವರ್ಮಾ, ಸೋನಿಯಾ ವರ್ಮಾ, ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಅಧ್ಯಾಪಕರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ, ಟ್ರಸ್ಟ್ ಸದಸ್ಯರು ಹಾಗೂ ಉದ್ಯೋಗಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸುಶ್ರಾವ್ಯ ಪ್ರಾರ್ಥನೆ ಹಾಗೂ ಗೀತೆಗಳಿಂದ ಮನಸೆಳೆದರು.

First Previous

Showing 14 of 20 pages

Next Last