Article Image

ಬೆಂಗಳೂರು: ಪೂಜಾ ಕಾರ್ಯಕ್ರಮ

Article Image

ಬೆಂಗಳೂರು: ಪೂಜಾ ಕಾರ್ಯಕ್ರಮ

ನೆಲಮಂಗಲ ತಾಲೂಕಿನ, ಸೋಂಪುರ ಹೋಬಳಿ ಎಲೇಕ್ಯಾತನಹಳ್ಳಿಯ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿಯ ಬಿಂಬಸ್ಥಾಪನೆ ಮಾನ ಸ್ಥಂಬೋಪರಿ ಚತುರ್ಮುಖ ಜಿನಬಿಂಬ ಸ್ಥಾಪನೆ ಮತ್ತು ನಾಗದೇವರ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಜೈನ ಆಗಮೋಕ್ತ ವಿದಿವಿಧಾನಗಳೊಂದಿಗೆ ಜೂ. 29ರಿಂದ ಜೂ. 30ರವರೆಗೆ ಜರುಗಲಿದೆ.

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Article Image

ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ಡಿ.ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದ್ರೆ ಇದರ 2024-25 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಅಮೃತಮಹೋತ್ಸವ ಕಟ್ಟಡದಲ್ಲಿ ನೆರವೇರಿತು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ಗೌರವಾನ್ವಿತ ಶಾಲಾ ಸಂಚಾಲಕರಾದ ಕೆ.ಹೇಮರಾಜ್ ಇವರು ವಹಿಸಿದ್ದರು. ಇದರ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ವೀರ ಮಾರುತಿ ಎಂಟರ್ ಪ್ರೈಸಸ್ ಕಲ್ಸಂಕ ಇದರ ಮಾಲಕರಾದ ವೆಂಕಟೇಶ್ ಪ್ರಭು ನೆರವೇರಿಸಿದರು. ವಿವಿಧ ಸಂಘಗಳ ಕಡತಗಳನ್ನು ಅನಾವರಣಗೊಳಿಸಿ ಮಂತ್ರಿಮಂಡಲದ ಪದಾಧಿಕಾರಿಗಳಿಗೆ ಪದಕ ಧಾರಣೆಯನ್ನು ಮಾಡಿದರು. ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಈ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿ ತಮ್ಮ ಬಾಲ್ಯ ಜೀವನವನ್ನು ಮೆಲುಕು ಹಾಕುತ್ತಾ ಶಾಲೆಗೆ ವಿದ್ಯಾರ್ಥಿ ಸಂಘದ ಅವಶ್ಯಕತೆಗಳನ್ನು ತಿಳಿಸುತ್ತಾ ಮಕ್ಕಳಿಗೆ ತಮ್ಮ ಕೆಲಸ ಕಾರ್ಯಗಳ ಜವಾಬ್ದಾರಿಯನ್ನು ತಿಳಿಸಿದರು. ಶಿಸ್ತು ಬದ್ಧ ಹಾಗೂ ಸಂಸ್ಕಾರಯುತ ಶಿಕ್ಷಣವು ಮಕ್ಕಳನ್ನು ಯಶಸ್ಸಿನ ದಾರಿಯಲ್ಲಿ ಸಾಗಲು ಕಾರಣವಾಗುತ್ತದೆ ಎಂದು ಹೇಳಿ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಮಾಡಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ನಮ್ಮ ಶಾಲೆಯಲ್ಲಿ ಆಧುನಿಕ ತಂತಜ್ಞಾನವನ್ನು ಬಳಸಿ ನಡೆಸಿದ ಚುಣಾವಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಮಂತ್ರಿಮಂಡಲಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಿಧಿಸಿ ತಮ್ಮ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಿದರು. ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರು, ಉಪಾಧ್ಯಕ್ಷರು, ತಾಯಂದಿರ ಸಮಿತಿಯ ಅಧ್ಯಕ್ಷರು ಚುನಾಯಿತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಸಂಚಾಲಕರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಈ ಸಂಸ್ಥೆಯ ಯಶಸ್ವಿಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ತನ್ನ ಕೃತಜ್ಞತೆಯನ್ನು ಸಲ್ಲಿಸಿ ಶಾಲಾ ದಾಖಲಾತಿಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಹಾಗೂ ವೆಂಕಟೇಶ್ ಪ್ರಭು ಇವರು ವೇದಿಕೆಯಲ್ಲಿ ದೇಣಿಗೆಯಾಗಿ ನೀಡಿದ 10,000 ರೂಪಾಯಿಗಳನ್ನು ಶಾಲಾ ಬ್ಯಾಂಡ್ ಸೆಟ್‌ನ ಸಮವಸ್ತ್ರಕ್ಕಾಗಿ ಉಪಯೋಗಿಸಿಕೊಳ್ಳುವುದಾಗಿ ಭರವಸೆ ನೀಡಿ ಕೃತಜ್ಞತೆ ಸಲ್ಲಿಸಿದರು. ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಆಯ್ಕೆಯಾದ ಶ್ರೇಯಾ ಹಾಗೂ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾದ ತನ್ವಿ ಇವರು ತಮ್ಮ ಭಾಷಣದಲ್ಲಿ ಶಾಲೆಯ ಅಭಿವೃದ್ಧಿಯಲ್ಲಿ ತನ್ನ ಜವಾಬ್ದಾರಿಯ ಬಗ್ಗೆ ಮಾತನಾಡಿ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಸಿ ಗೆಲ್ಲಿಸಿದ ವಿದ್ಯಾರ್ಥಿಗಳಿಗೆ ಧನ್ಯವಾದ ಸಲ್ಲಿಸಿದರು. ಮಂಜುಳಾ ಜೈನ್ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ದಿವ್ಯಶ್ರೀ ಧನ್ಯವಾದಗೈದರು. ಮಂಜುಳಾ ಪಿ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ನಾರಾವಿಯಲ್ಲಿ ಮಂಡಲ ಪೂಜೆ

Article Image

ನಾರಾವಿಯಲ್ಲಿ ಮಂಡಲ ಪೂಜೆ

ನಾರಾವಿಯಲ್ಲಿ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪ್ರತಿಷ್ಠಾ ಮಹೋತ್ಸವ ನಡೆದು 48 ದಿನಗಳ ಬಳಿಕ ಶನಿವಾರ ಬಸದಿಯಲ್ಲಿ ಮಂಡಲ ಪೂಜೆ ನಡೆಯಿತು. ಕಾರ್ಕಳ ಜೈನಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಆರ್ಯಿಕಾ ಮುಕ್ತಿಶ್ರೀ ಮಾತಾಜಿ ಉಪಸ್ಥಿತರಿದ್ದರು. ಪೂರ್ವಾಹ್ನ ತೋರಣಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಸಾಮೂಹಿಕ ಜಿನಾಭಿಷೇಕ ಮತ್ತು ಋಷಿಮಂಡಲ ಆರಾಧನೆ ನಡೆಯಿತು. ಊರಿನ ಶ್ರಾವಕರು-ಶ್ರಾವಕಿಯರು ಮಂಗಲದ್ರವ್ಯಗಳಿಂದ ಅಭಿಷೇಕ ಮತ್ತು ಆರಾಧನೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಹೊಂದಿದರು. ಹೊರನಾಡು ಜಯಶ್ರೀ ಧರಣೇಂದ್ರ ಕುಮಾರ್ ಮತ್ತು ಬಳಗದವರ ಸುಶ್ರಾವ್ಯ ಸಂಗೀತ ಪೂಜಾಷ್ಟಕ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು. ಪದ್ಮಾವತಿ ದೇವಿ ಆರಾಧನೆ, ನೂತನ ಉಯ್ಯಾಲೆ ಸಮರ್ಪಣೆ, ಅಷ್ಟಾವಧಾನ ಪೂಜೆ ನಡೆಯಿತು. ಊರಿನ-ಪರವೂರಿನ ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದರು.

ನಾರಾವಿ: ಮಂಡಲ ಪೂಜೆ

Article Image

ನಾರಾವಿ: ಮಂಡಲ ಪೂಜೆ

ನಾರಾವಿ ಮಾಗಣೆ ಭ| ೧೦೦೮ ಶ್ರೀ ಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪ್ರತಿಷ್ಠಾ ಮಹೋತ್ಸವದ 48ನೇ ದಿನದ ಮಂಡಲ ಪೂಜೆಯು ಕಾರ್ಕಳ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಉಪಸ್ಥಿತಿ ಮತ್ತು ಆಶೀರ್ವಚನ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಜೂನ್ 22ರಂದು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರುಗಲಿರುವುದು.

ಮಂಡಲ ಪೂಜಾ ಕಾರ್ಯಕ್ರಮ

Article Image

ಮಂಡಲ ಪೂಜಾ ಕಾರ್ಯಕ್ರಮ

ಹುಬ್ಬಳ್ಳಿ-ಧಾರವಾಡದ ನವನಗರ ಬಡಾವಣೆ ಪಂಚಾಕ್ಷರಿ ನಗರದ ಭ| ಶ್ರೀ ೧೦೦೮ ಮುನಿಸುರತ ತೀರ್ಥಂಕರರ ಜೈನ ಮಂದಿರದ ನೂತನ ಮಾನಸ್ಥಂಭದ ಚತುರ್ಮುಖ ಜಿನಬಿಂಬದ ಪಂಚಕಲ್ಯಾಣ ಪೂಜಾ ಮಹೋತ್ಸವದ ಮಂಡಲ ಪೂಜಾ ಕಾರ್ಯಕ್ರಮವು ಪ. ಪೂ. ಅಭಿಕ್ಷಣ ಜ್ಞಾನ ವಾತ್ಸಲ್ಯಮೂರ್ತಿ ೧೦೮ ಪುಣ್ಯ ಸಾಗರ ಮುನಿ ಮಹಾರಾಜರ ಪಾವನ ಸಾನ್ನಿಧ್ಯ ಮತ್ತು ಆಶೀರ್ವಾದದೊಂದಿಗೆ ಹಾಗೂ ಸೋಂದ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಮತ್ತು ವರೂರು ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜೂ. 23 ರಂದು ನೆರವೇರಲಿದೆ.

ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ

Article Image

ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ

ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ ಇಂದು ಸಂಚಾಲಕರಾದ ಕೆ. ಹೇಮರಾಜ್ ಇವರು ದೀಪ ಬೆಳಗುವುದರೊಂದಿಗೆ ಪ್ರಾರಂಭಗೊಂಡಿತು. ಸವಣೂರು ವಿದ್ಯಾರಶ್ಮಿ ಕಾಲೇಜಿನ ಪ್ರಾಂಶುಪಾಲರಾದ ಮತ್ತು ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಸೀತಾರಾಮ ಕೇವಳ ಇವರು ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಮತ್ತು ಎಲ್ಲ ಉಪನ್ಯಾಸಕ ವೃಂದದವರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

Article Image

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ನಿಧನ

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಕರಿಮಣೇಲು ಮಾಗಣೆಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ಇವರು ಹೃದಯಾಘಾತದಿಂದ ಇಂದು(ಜೂ. 12) ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ, ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ. ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕದ ಮಾಧ್ಯಮ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 2000 ಇಸವಿಯ ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಮಸ್ತಕಾಭಿಷೇಕದ ದೃಶ್ಯಗಳನ್ನು ವಿದ್ಯುನ್ಮಾನಗಳ ಮೂಲಕ ಪ್ರಚಾರ ಪಡಿಸುವ ವಿಧಾನವನ್ನು ಮೊತ್ತಮೊದಲಿಗೆ ಈ ಪರಿಸರದಲ್ಲಿ ಪ್ರಚಾರ ಪಡಿಸಿದ ಹೆಗ್ಗಳಿಕೆ ಇವರದು. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಶಿಶಿಲ ಬಸದಿಯಲ್ಲಿ ಕಲ್ಯಾಣ ಮಂದಿರ ಆರಾಧನೆ

Article Image

ಶಿಶಿಲ ಬಸದಿಯಲ್ಲಿ ಕಲ್ಯಾಣ ಮಂದಿರ ಆರಾಧನೆ

ಶಿಶಿಲ ಗ್ರಾಮದಲ್ಲಿರುವ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ಭಾನುವಾರ ಲೋಕಾಕಲ್ಯಾಣಕ್ಕಾಗಿ ಕಲ್ಯಾಣ ಮಂದಿರ ಆರಾಧನೆ ಹಾಗೂ ಪದ್ಮಾವತಿ ಅಮ್ಮನವರ ವಿಶೇಷ ಪೂಜೆಯು ಪ್ರತಿಷ್ಠಾಚಾರ್ಯ ಜಯರಾಜ ಇಂದ್ರ ಹಾಗೂ ಸಹಪುರೋಹಿತರ ಸಹಕಾರದಲ್ಲಿ ನಡೆಯಿತು. ದಾನಿಗಳಾದ ವಿಜಯಕುಮಾರ್, ಕಣಿಯೂರು, ಸುರೇಂದ್ರ ಹೆಗ್ಡೆ ಮತ್ತು ಉಜಿರೆಯ ಶಶಿಪ್ರಭಾ ಅವರನ್ನು ಗೌರವಿಸಲಾಯಿತು. ಬಸದಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸರ್ವಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಲಾದೇವಿ ಮಹಿಳಾ ಸಮಾಜದ ಸದಸ್ಯರು ಸಕ್ರಿಯ ಸಹಕಾರ ನೀಡಿದರು.

ಧಾರವಾಡ: ಹೊರ ರೋಗಿ ವಿಭಾಗದ ನೊಂದಣಿ ಆ್ಯಪ್ ಉದ್ಘಾಟನೆ

Article Image

ಧಾರವಾಡ: ಹೊರ ರೋಗಿ ವಿಭಾಗದ ನೊಂದಣಿ ಆ್ಯಪ್ ಉದ್ಘಾಟನೆ

ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇತ್ತೀಚಿಗೆ ಹೊರ ರೋಗಿಗಳ ಅನುಕೂಲಕ್ಕಾಗಿ ಆನ್‌ಲೈನ್‌ನಲ್ಲಿ ನೊಂದಣಿ ಮಾಡಲು ಮಾದರಿ(ಆ್ಯಪ್)ಅನ್ನು ಉದ್ಘಾಟಿಸಿದರು. ಈ ಮಾದರಿಯಲ್ಲಿ ಹುಬ್ಬಳ್ಳಿ ಮತ್ತು ಧಾರವಾಡದ ಪಾಲಿಕ್ಲಿನಿಕ್‌ಗಳಲ್ಲಿ ವೈದ್ಯರ ಲಭ್ಯತೆಯ ಬಗ್ಗೆ ಮಾಹಿತಿ ಮತ್ತು ರೋಗಿಗಳು ತಮಗೆ ಅನುಕೂಲದ ಸಮಯವನ್ನು ನಿಗದಿಪಡಿಸಿಕೊಳ್ಳಬಹುದು. ಇದು ಶೀಘ್ರದಲ್ಲೇ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್‌ಗಳಲ್ಲಿ ಲಭ್ಯವಿರುತ್ತದೆ. ಎಸ್.ಡಿ.ಎಂ. ಪಾಲಿಕ್ಲಿನಿಕ್ ಧಾರವಾಡದಲ್ಲಿ ಜುಬಲಿ ಸರ್ಕಲ್ ಬಳಿಯ ವಿ.ಜೆ.ಹೌಸ್‌ನಲ್ಲಿ ಮತ್ತು ಹುಬ್ಬಳ್ಳಿಯಲ್ಲಿ ಎಸ್.ಡಿ.ಎಂ. ಪಾಲಿಕ್ಲಿನಿಕ್ ವಿದ್ಯಾನಗರದ, ಗುರುದತ್ತ ಭವನದ ಹತ್ತಿರ ಕಾರ್ಯನಿರ್ವಹಿಸುತ್ತದೆ. ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಮಖ್ದೂಮ್ ಕಿಲ್ಲೆದಾರ ಅವರು ಪ್ರಾತ್ಯಕ್ಷಿಕೆಯೊಂದಿಗೆ ಆ್ಯಪ್ ಕುರಿತು ಕುಲಪತಿಗಳಿಗೆ ಮಾಹಿತಿ ನೀಡಿದರು. ಎಸ್.ಡಿ.ಎಂ. ಆಸ್ಪತ್ರೆಯ ಯುರಾಲಜಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಥುಲಿಯಮ್ ಲೇಸರ 60 ವ್ಯಾಟ್ ಯಂತ್ರ ಮತ್ತು ಫ್ಲೆಕ್ಸಿಬಲ್ ಯುರೆಟೆರೊಸ್ಕೋಪ್‌ಅನ್ನು ಉದ್ಘಾಟಿಸಿದರು. ಇದು ಪ್ರಸ್ತುತ ವಿಶ್ವದ ಆಧುನಿಕ ಲೇಸರ್ ತಂತ್ರಜ್ಞಾನವಾಗಿದ್ದು ಇದರ ಸಹಾಯದಿಂದ ಮೂತ್ರಪಿಂಡ ಕಲ್ಲುಗಳು, ಮೂತ್ರನಾಳದ ಕಲ್ಲುಗಳು, ಮೂತ್ರಪಿಂಡದ ಕ್ಯಾನ್ಸರ್, ವಿವಿಧ ಮೂತ್ರಶಾಶಸ್ತ್ರದ ಸಮಸ್ಯೆಗಳಿಗೆ ರಕ್ತಸ್ರಾವವಿಲ್ಲದೆ, ಕಡಿಮೆ ನೋವು, ಶಸ್ತ್ರ ಚಿಕಿತ್ಸೆಯ ನಂತರದ ಗಾಯಗಳಿಲ್ಲದೇ ಚಿಕಿತ್ಸೆ ನೀಡಬಹುದಾಗಿದ್ದು, ಶೀಘ್ರವಾಗಿ ಚೇತರಿಸಿಕೊಳ್ಳಲು ಇದು ಸಹಕಾರಿಯಾಗಿದೆ. ಅಷ್ಟೇ ಅಲ್ಲದೆ ಹೃದಯ ಸಂಬಂಧಿ ಕಾಯಿಲೆಗಳಿಗೂ ಈ ಯಂತ್ರವನ್ನು ಬಳಸಬಹುದು. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ, ಕಾರ್ಯನಿರ್ವಾಹಕ ನಿದೇಶಕಿಯವರಾದ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಸಹ ಉಪ ಕುಲಪತಿಗಳಾದ ವಿ. ಜೀವಂಧರ ಕುಮಾರ, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ ಹೆಗ್ಡೆ, ಉಪಸ್ಥಿತರಿದ್ದರು. ಯುರಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಿವಾಸ ಕಲಭಾವಿ ಅವರು ಉಪಕರಣಗಳ ಕಾರ್ಯನಿರ್ವಹಿಸುವ ಕುರಿತು ಪ್ರಾತ್ಯಕ್ಷಿತೆ ನೀಡಿದರು.

ಮೂಡುಬಿದಿರೆ ಜೈನ್ ಮಿಲನ್ ಮಾಸಿಕ ಸಭೆ, ಸನ್ಮಾನ

Article Image

ಮೂಡುಬಿದಿರೆ ಜೈನ್ ಮಿಲನ್ ಮಾಸಿಕ ಸಭೆ, ಸನ್ಮಾನ

ಮೂಡುಬಿದಿರೆ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಘಟಕದ ಮಾಸಿಕ ಸಭೆಯು ಇಲ್ಲಿನ ಎಂ. ಸಿ. ಎಸ್. ಬ್ಯಾಂಕ್ ಸಭಾಭವನದಲ್ಲಿ ಜೈನ್ ಮಿಲನ್ ಅಧ್ಯಕ್ಷ ಆನಡ್ಕ ದಿನೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭಾ ಕಾಯ೯ಕ್ರಮಕ್ಕೂ ಮೊದಲು ಹೃದ್ರೋಗ ಸಂಬಂಧಿ ತಪಾಸಣೆ ಮತ್ತು ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡುಬಿದಿರೆಯ ಹೃದ್ರೋಗ ತಜ್ಞ ಡಾ. ದಿತೇಶ್ ಹೃದ್ರೋಗಕ್ಕೆ ಸಂಬಂಧಿಸಿದಂತೆ ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿರುವ ರವಿರಾಜ್ ಎಂ. ಮತ್ತು ಕೊಡುಗೈ ದಾನಿ ನಿವೃತ್ತ ಟೆಲಿಕಾಂ ಇಂಜಿನಿಯರ್ ಎಂ. ವಿ. ಶೆಟ್ಟಿ ಅವರನ್ನು ಮಿಲನ್ ವತಿಯಿಂದ ಸನ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ವಲಯ ನಿದೇ೯ಶಕರಾದ ಪಿ. ಜಯರಾಜ್ ಕಂಬಳಿ, ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದ ಜೊತೆ ಕಾರ್ಯದರ್ಶಿ ನ್ಯಾಯವಾದಿ ಶ್ವೇತಾ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾಸಿಕ ಸಭಾ ಕಾರ್ಯಕ್ರಮದ ಪ್ರಾಯೋಜಕರಾದ ಎಂ. ಸಿ. ಎಸ್. ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ನೇಮಿರಾಜ್, ಜೈನ್ ಮಿಲನ್ ಪದಾಧಿಕಾರಿಗಳಾದ ರಾಜೇಶ್, ಪುಷ್ಪರಾಜ್ ಜೈನ್, ಅನಂತವೀರ್ ಜೈನ್ ಉಪಸ್ಥಿತರಿದ್ದರು. ಸುರೇಖಾ ವಿ. ಹೆಗ್ಡೆ ಪ್ರಾಥಿ೯ಸಿದರು. ಪ್ರಶಾಂತ್ ಜೈನ್ ಮತ್ತು ಸಂಪತ್ ಕುಮಾರ್ ಸನ್ಮಾನ ಪತ್ರ ವಾಚಿಸಿದರು. ದಿನೇಶ್ ಚೌಟ ಸ್ವಾಗತಿಸಿದರು. ಡಾ. ಕ್ಷಮಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಮಲೆನಾಡು ಜೈನ್ ಮಿಲನ್

Article Image

ಮಲೆನಾಡು ಜೈನ್ ಮಿಲನ್

ಕೊಪ್ಪ, ಶೃಂಗೇರಿ: ಇಲ್ಲಿನ ಮಲೆನಾಡು ಜೈನ್ ಮಿಲನ್ ವತಿಯಿಂದ ಜಯಪುರದ ಶಾಂತ ಕುಮಾರ್ ದಂಪತಿಗಳ ಶಿಕ್ಷಣ ಪ್ರೇಮವನ್ನು ಗುರುತಿಸಿ ಸನ್ಮಾನಿಸಲಾಯಿತು.

ಶ್ರುತ ಪಂಚಮಿ

Article Image

ಶ್ರುತ ಪಂಚಮಿ

ಮೂಡುಬಿದಿರೆ ಶ್ರೀ ಜೈನ ಮಠದಲ್ಲಿ ಶ್ರುತ ಪಂಚಮಿ ನಿಮಿತ್ತ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾ‌ಯ೯ವಯ೯ ಮಹಾಸ್ವಾಮೀಜಿಗಳವರ ಮಾಗ೯ದಶ೯ನ, ನೇತೃತ್ವ ಮತ್ತು ದಿವ್ಯ ಉಪಸ್ಥಿತಿಯಲ್ಲಿ ದಿನಾಂಕ 9-6-2024 ರಿಂದ 11-6-2024ರವರೆಗೆ ಸಾಮೂಹಿಕ ಸರಸ್ವತಿ ಶತಾಷ್ಠ ನಾಮಾವಳಿ ಹಾಗೂ ಶ್ರುತ ಸ್ಕಂದ ಆರಾಧನೆ ಜರುಗಲಿರುವುದು.

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

Article Image

ಗೀತಾ ಅಜೀತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ 'ಶ್ರೇಷ್ಠತಾ ಪ್ರಶಸ್ತಿ'

ಸುಮಾರು ಎರಡು ದಶಕಗಳಿಂದ ಎಲ್.ಐ.ಸಿ ಯಲ್ಲಿ ಸಲಹೆಗಾರರಾಗಿ ಮತ್ತು ಸಲಹೆಗಾರರಿಗೆ ತರಬೇತುಗಾರರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಗೀತಾ ಅಜಿತ್ ಹವಳಣ್ಣವರ ಇವರಿಗೆ ಭಾರತೀಯ ಜೀವ ವಿಮಾ ನಿಗಮದ ಧಾರವಾಡ ವಿಭಾಗದ ಶ್ರೇಷ್ಠತಾ ಪ್ರಶಸ್ತಿ( Excellence Award ) ದೊರೆಕಿದೆ. ಹೈದ್ರಾಬಾದ್ ನ ಹಿರಿಯ ವಿಭಾಗೀಯ ಅಧಿಕಾರಿ ಜಯಸಿಂಹನ್, ಧಾರವಾಡದ ಹಿರಿಯ ವಿಭಾಗೀಯ ವ್ಯವಸ್ಥಾಪಕ ಬಿ.ಎಸ್ ಚಕ್ರವರ್ತಿ, ಮಾರ್ಕೆಟಿಂಗ್ ಮ್ಯಾನೇಜರ್ ಪದ್ಮಪ್ರಭಾ ಶಂಕರ ಮತ್ತು ಮಹೇಶ್ ಹುನ್ಸವಾಡಕರ್ ಇವರೆಲ್ಲರ ಸಮ್ಮುಖದಲ್ಲಿ ಜೂ. 6ರಂದು ಪ್ರಶಸ್ತಿ ಪ್ರದಾನ ಮಾಡಿದರು.

ಸಾಹಿತಿ ರವಿರಾಜ್‌ರವರಿಗೆ ಸನ್ಮಾನ

Article Image

ಸಾಹಿತಿ ರವಿರಾಜ್‌ರವರಿಗೆ ಸನ್ಮಾನ

ಭಾರತೀಯ ಜೈನ್ ಮಿಲನ್ ಮೂಡಬಿದ್ರೆ ಶಾಖೆಯ ಮಾಸಿಕ ಸಭೆಯಲ್ಲಿ ಸಾಹಿತಿ, ಕವಿ, ಸಂಗೀತಗಾರ “ಕಲಾಭೂಷಣ” ಎಂ. ರವಿರಾಜ್ ಅವರನ್ನು ಸನ್ಮಾನಿಸಲಾಯಿತು. ಮೂಡಬಿದ್ರೆಯ ಎಂ.ಸಿ.ಎಸ್ ಬ್ಯಾಂಕಿನ ಕಲ್ಪವೃಕ್ಷ ಸಭಾಭವನದಲ್ಲಿ ಜರುಗಿದ ಸಮಾರಂಭದಲ್ಲಿ ಶಾಖಾ ಅಧ್ಯಕ್ಷರಾದ ಆನಡ್ಕ ದಿನೇಶ್ ಕುಮಾರ್, ವಲಯಾಧಿಕಾರಿಗಳಾದ ಜಯರಾಜ್ ಕಂಬಳಿ, ವಕೀಲರಾದ ಎಂ. ಬಾಹುಬಲಿ ಪ್ರಸಾದ್, ವಕೀಲೆ ಶ್ವೇತಾ ಜೈನ್ ಮತ್ತಿತರರು ಹಾಜರಿದ್ದರು. ಸನ್ಮಾನ ಸ್ವೀಕರಿಸಿದ ರವಿರಾಜ್‌ರವರು ತಾನು 52 ವರ್ಷಗಳ ಹಿಂದೆ ರಚಿಸಿದ “ಮಹಾವೀರ ವಿದ್ಯಾಲಯ ಚರಿತೆ” ಎಂಬ ಕಥನ ಕಾವ್ಯವನ್ನು ವಾಚಿಸಿದರು.

ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ ಗುರಿಯಾಗಬೇಕು. ಜನರೆಲ್ಲ ಜಿನರಾಗಬೇಕು

Article Image

ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ ಗುರಿಯಾಗಬೇಕು. ಜನರೆಲ್ಲ ಜಿನರಾಗಬೇಕು

ಶ್ರಾವಕರ ಷಟ್ಕರ್ಮಗಳಾದ ದೇವರಪೂಜೆ, ಆರಾಧನೆ, ಗುರುಗಳಸೇವೆ, ಸ್ವಾಧ್ಯಾಯ ಮೊದಲಾದವುಗಳನ್ನು ಪರಿಶುದ್ಧ ಮನಸ್ಸಿನಿಂದ ನಿತ್ಯವೂ ಮಾಡಿದಾಗ, ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆ ಕಳೆದು ಆತ್ಮನೇ ಪರಮಾತ್ಮನಾಗುತ್ತಾನೆ. ಜನರೆಲ್ಲ ಜಿನರಾಗಬೇಕು. ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ ಗುರಿಯಾಗಬೇಕು ಎಂದು ಮೂಡಬಿದ್ರೆ ಜೈನಮಠದ ಪರಮ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಹೇಳಿದರು. ಅವರು ಶುಕ್ರವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಪುಂಜಾಲಕಟ್ಟೆ ಕಟ್ಟೆಮನೆ ಗುತ್ತು ದಿವಂಗತ ಉದಯಕುಮಾರ್ ಅವರ ಸ್ಮರಣಾರ್ಥ ಶಾಸ್ತ್ರದಾನಕ್ಕಾಗಿ ಪ್ರಕಟಿಸಿದ “ಸೂರ್ಯೋದಯ” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕ್ರೋಧಾದಿ ಮಾನಕಷಾಯಗಳನ್ನು ತೊರೆದು ನಮ್ಮೊಳಗಿರುವ ವೀತರಾಗ ಸ್ವರೂಪಿ ಆತ್ಮನನ್ನು ಗುರುತಿಸಿಕೊಂಡು ಮೋಕ್ಷಪ್ರಾಪ್ತಿಗೆ ನಿರಂತರ ಪ್ರಯತ್ನಿಸಬೇಕು. ಮೋಹನೀಯ ಕರ್ಮ ಎಲ್ಲಾ ಕರ್ಮಗಳ ರಾಜ. ದ್ರವ್ಯ, ಕ್ಷೇತ್ರ, ಕಾಲ, ಭವ ಮತ್ತು ಭಾವವನ್ನು ಹೊಂದಿಕೊಂಡು ಚಾಕಚಕ್ಯತೆಯಿಂದ ಬದುಕಿನ ಎಲ್ಲಾ ಕಷ್ಟಗಳನ್ನು ತಾಳ್ಮೆಯಿಂದ ಎದುರಿಸಿ ಕರ್ಮ ಬಂಧವನ್ನು ತಡೆದು ಮೋಕ್ಷ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸ್ವಾಮೀಜಿಗಳವರು ಸಲಹೆ ನೀಡಿದರು. ಇವರು ಕಟ್ಟೆಮನೆ ಉದಯಕುಮಾರರ ಸೇವಾ ಮನೋಭಾವ, ಆದರ್ಶ ನಾಯಕತ್ವ, ಶ್ರಾವಕ ಧರ್ಮದ ಪರಿಪಾಲನೆಯನ್ನು ಶ್ಲಾಘಿಸಿದರು. ಭಗವಾನ್ ಶಾಂತಿನಾಥ ಸ್ವಾಮಿಗೆ ೫೦೪ ಕಲಶ ಅಭಿಷೇಕ, ಮೂರೂ ಬಸದಿಗಳಲ್ಲಿ ಪಂಚಾಮೃತ ಅಭಿಷೇಕ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವರಹ ಪೂಜೆ ನಡೆಯಿತು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಬಸದಿಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ ಮತ್ತು ಅಭಯಚಂದ್ರ ಜೈನ್, ಕೆ. ಪ್ರಸನ್ನ ಕುಮಾರ್ ಬೆಳ್ತಂಗಡಿ, ಎಸ್.ಡಿ. ಸಂಪತ್‌ಸಾಮ್ರಾಜ್ಯ ಶಿರ್ತಾಡಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ, ಬ್ಯಾಂಕ್ ಆಫ್ ಬರೋಡದ ನಿವೃತ್ತ ಪ್ರಬಂಧಕರುಗಳಾದ ಎಂ. ಜಿನರಾಜ ಶೆಟ್ಟಿ ಮತ್ತು ಮೋಹನ ಪಡಿವಾಳ್, ಕೆ.ಪಿ. ಜಗದೀಶ ಅಧಿಕಾರಿ ಮೂಡಬಿದ್ರೆ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಧರಣೇಂದ್ರ ಕುಮಾರ್ ಸಭಾಕಾರ್ಯಕ್ರಮ ನಿರ್ವಹಣೆ ಮಾಡಿದರು.

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವ

Article Image

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವ

ಎಕ್ಸಲೆಂಟ್ ಸಿ.ಬಿ.ಎಸ್.ಇ ಶಾಲಾ ಪ್ರಾರಂಭೋತ್ಸವವು ಜೂನ್ 3ರಂದು ಶಾಲಾ ಆವರಣದಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟಕರಾಗಿ ಮೂಡುಬಿದಿರೆಯ ಖ್ಯಾತ ಲೆಕ್ಕ ಪರಿಶೋಧಕರಾದ ಉಮೇಶ್ ರಾವ್ ಮಿಜಾರುರವರು ಉಪಸ್ಥಿತರಿದ್ದು, ಕಷ್ಟವನ್ನು ಎದುರಿಸುವ ಸಾಮರ್ಥ್ಯ, ಸಮಯಪ್ರಜ್ಞೆ ಹಾಗೂ ಶಾಲಾ ನಿಯಮಗಳನ್ನು ಸರಿಯಾಗಿ ವಿದ್ಯಾರ್ಥಿಗಳು ಪಾಲಿಸಿದರೆ ಗೆಲುವು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್‌ರವರು ಶಾಲೆಯಲ್ಲಿ ಪೂರಕವಾದ ಕಲಿಕಾ ವಾತಾವರಣ ಇದ್ದಾಗ ಮಕ್ಕಳು ಉತ್ತಮ ರೀತಿಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಹತ್ತನೆಯ ತರಗತಿಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಸುವಿತ್ ಭಂಡಾರಿ, ಸುಯೋಗ್ ಅಂಚನ್, ಪೃಥ್ವಿ ಪ್ರಕಾಶ್ ಭಂಡಾರಿ ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಇಸ್ರೋ ‘ಯುವಿಕ’ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ, ಸಂಸ್ಥೆಯ ಹಳೆಯ ವಿದ್ಯಾರ್ಥಿನಿಯಾಗಿರುವ ಮೌಲ್ಯ ವೈ. ಆರ್. ಜೈನ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಶಾಲಾ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕರಾದ ಪುಪ್ಪರಾಜ್ ಬಿ., ಶಾಲಾ ಪ್ರಾಂಶುಪಾಲರಾದ ಸುರೇಶ ಹಾಗೂ ಶೈಕ್ಷಣಿಕ ಸಂಯೋಜಕರಾದ ಶ್ರೀಪ್ರಸಾದ್‌ರವರು ಉಪಸ್ಥಿತರಿದ್ದರು. ವಿಮಲಾ ಶೆಟ್ಟಿಯವರು ಕಾರ್ಯಕ್ರಮದ ನಿರೂಪಿಸಿ, ಪದ್ಮಾವತಿಯವರು ವಂದಿಸಿದರು.

ಸತ್ತೂರು, ಧಾರವಾಡ: “ನೆನಪು ಮತ್ತು ಮರೆವು” ಕಾರ್ಯಾಗಾರ

Article Image

ಸತ್ತೂರು, ಧಾರವಾಡ: “ನೆನಪು ಮತ್ತು ಮರೆವು” ಕಾರ್ಯಾಗಾರ

ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಶರೀರ ಕ್ರೀಯಾ ಶಾಸ್ತ್ರ ವಿಭಾಗದಿಂದ “ನೆನಪು ಮತ್ತು ಮರೆವು” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ಜೂ. 1ರಂದು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಅತಿಥಿಗಳಾದ ಡಾ. ರತ್ನಮಾಲಾ ಎಂ. ದೇಸಾಯಿ ಅವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ ನೆನಪು ಮಾನವನಿಗೆ ಅತೀ ಮೌಲ್ಯವಾದ ಆಯುಧವಾಗಿದೆ. ಕಹಿ ನೆನಪುಗಳನ್ನು ಮರೆಯುವುದು ಒಂದು ವರದಾನವಾಗಿದೆ. ಗೊಂದಲಗಳು ಹೆಚ್ಚಾಗುವುದು ಮತ್ತು ಏಕಾಗ್ರತೆ ಕಡಿಮೆಯಾಗುವುದು ಒಳ್ಳೆಯ ಲಕ್ಷಣವಲ್ಲಾ. ಉತ್ತಮ ಶಿಕ್ಷಣ ನೀಡುವುದಕ್ಕೆ ಶಿಕ್ಷಕರು ಒಳ್ಳೆಯ ನೆನಪಿನ ಶಕ್ತಿ ಹೊಂದಿರಬೇಕು. ಉತ್ತಮ ನೆನಪು ಮತು ಒಳ್ಳೆಯ ಜ್ಞಾನವು ಜೀವನದಲ್ಲಿ ಮರುಕಳಿಸುತ್ತಿರಬೇಕು ಎಂದು ಹೇಳಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಕಾರ್ಯಾಗಾರದ ಸಂಘಟನಾ ಅಧ್ಯಕ್ಷರು ಮತ್ತು ಶರೀರ ಕ್ರೀಯಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ನಾಗಲಕ್ಷ್ಮೀ ಉಪಸ್ಥಿತರಿದ್ದರು. ಡಾ. ಗ್ರಾಮೋಪಾಧ್ಯಾಯ ಭೂಷಣ, ಡಾ. ನಾಗಲಕ್ಷ್ಮೀ , ಡಾ. ಸಚಿನ್ ಬಿ.ಎಸ್., ಡಾ. ಮಲ್ಲಿಕಾರ್ಜುನಗೌಡರ ಅವರು ವಿಷಯದ ಕುರಿತು ತಜ್ಞ ಉಪನ್ಯಾಸವನ್ನು ನೀಡಿದರು. ಈ ಕಾರ್ಯಾಗಾರದಲ್ಲಿ ಉತ್ತರ ಕರ್ನಾಟಕದ ಸುಮಾರು 200ಕ್ಕೂ ಹೆಚ್ಚು ಪ್ರಾಧ್ಯಾಪಕರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಘಟನಾ ಕಾರ್ಯದರ್ಶಿಗಳಾದ ಡಾ. ಶ್ವೇತಾ ಗೌಡಪ್ಪಣ್ಣವರ ಸ್ವಾಗತಿಸಿದರು. ವೈಷ್ಣವಿ ಕುಲಕರ್ಣಿ ಮತ್ತು ವೇಣು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಸಂಘಟನಾ ಕಾರ್ಯದರ್ಶಿಗಳಾದ ಡಾ. ವಿದ್ಯಾ ನಾಡಗೇರ ಅವರು ವಂದನಾರ್ಪಣೆ ಸಲ್ಲಿಸಿದರು.

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಉದ್ಘಾಟನೆ

Article Image

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ರಜತ ಮಹೋತ್ಸವ ಉದ್ಘಾಟನೆ

ಧರ್ಮಸ್ಥಳ: ಮಹಿಳೆಯರು ಬುದ್ಧಿವಂತರಾಗಿದ್ದು, ಸದಾ ಜಾಗೃತರಾಗಿರುತ್ತಾರೆ. ಅವರಲ್ಲಿ ಅದ್ಭುತ ಶಕ್ತಿ ಇದೆ. ಆದುದರಿಂದಲೇ ಇಂದು ಅವರು ತಮಗೆ ಸಿಗುವ ಎಲ್ಲಾ ಅವಕಾಶ, ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದಾರೆ ಎಂದು ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಿಗೆ ಪುರುಷರಿಂದ ಆಶ್ರಯ ಬೇಕಾಗಿಲ್ಲ. ಸದಾ ಸಕಾಲಿಕ ಪ್ರೋತ್ಸಾಹ, ಪ್ರೇರಣೆ ಅಗತ್ಯವಾಗಿದೆ. ಕುಟುಂಬ ಮತ್ತು ಸಮಾಜದ ಸುಗಮ ನಿರ್ವಹಣೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಬಾಲ್ಯದಿಂದಲೆ ಮಕ್ಕಳನ್ನು ತಿದ್ದಿ, ತೀಡಿ ಉತ್ತಮ ಸಂಸ್ಕಾರ ನೀಡಿ ಆದರ್ಶ ವ್ಯಕ್ತಿತ್ವ ರೂಪಿಸುವುದು ಮಾತೆಯರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಆದುದರಿಂದಲೆ ಧರ್ಮಸ್ಥಳದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡುವಾಗ ಪೋಷಕರಿಗೂ ತಜ್ಞರಿಂದ ಮಾಹಿತಿ, ಮಾರ್ಗದರ್ಶನ ನೀಡಲಾಗುತ್ತದೆ ಎಂದು ಹೆಗ್ಗಡೆಯವರು ಹೇಳಿದರು. ಎಲ್ಲಾ ಶಾಖೆಗಳ ಕಾರ್ಯನಿರ್ವಹಣೆಯನ್ನು ಏಕಸೂತ್ರದಲ್ಲಿ ಪೋಣಿಸಿ ಸಂದರ್ಭೋಚಿತವಾಗಿ ಮಾಹಿತಿ, ಮಾರ್ಗದರ್ಶನ ನೀಡುವುದು ಒಕ್ಕೂಟದ ಜವಾಬ್ದಾರಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸ್ವ-ಸಹಾಯ ಸಂಘಗಳಿಗೆ ಒಕ್ಕೂಟದ ನೇತೃತ್ವದಲ್ಲಿ ಸದಾ ಪ್ರೋತ್ಸಾಹ, ಮಾರ್ಗದರ್ಶನ ನೀಡಲಾಗುತ್ತದೆ ಎಂದರು. ಕಾಲಕ್ಕೆ ತಕ್ಕಂತೆ ಅವರವರ ಪ್ರಾಯಕ್ಕೆ ಅನುಗುಣವಾಗಿ ಮಾತೆಯರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಸಮಾಜದ ಮುಂದಿನ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಸಾಧನೆಯನ್ನು ಹೆಗ್ಗಡೆಯವರು ಶ್ಲಾಘಿಸಿ ಎಲ್ಲಾ ಪದಾಧಿಕಾರಿಗಳನ್ನು ಹಾಗೂ ಸದಸ್ಯರನ್ನು ಅಭಿನಂದಿಸಿದರು. ಹೇಮಾವತಿ ಹೆಗ್ಗಡೆಯವರು ಬರೆದ “ಗೆಳತಿ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಚಲನಚಿತ್ರ ನಟಿ ಪದ್ಮಜಾ ರಾವ್ ಮಾತನಾಡಿ ಧರ್ಮಸ್ಥಳದಲ್ಲಿ ತಮಗೆಲ್ಲ ದೊರೆತ ರಾಜಮರ್ಯಾದೆಯೊಂದಿಗೆ ಗೌರವಪೂರ್ವಕ ಆತಿಥ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ಯಾವುದೇ ಕ್ಷೇತ್ರದಲ್ಲಿ ಮಹಿಳೆಯರು ಸ್ವಾವಲಂಬಿಗಳಾದರೆ ಧೈರ್ಯ ಮತ್ತು ಆತ್ಮವಿಶ್ವಾಸ ಮೂಡಿ ಬರುತ್ತದೆ. ಮಹಿಳಾ ಸಬಲೀಕರಣವೂ ಆಗುತ್ತದೆ ಎಂದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಸಂಚಿಕೆ ಬಿಡುಗಡೆಗೊಳಿಸಿದ ಮಕ್ಕಳ ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿ, ದಾನ ಚಿಂತಾಮಣಿ ಅತ್ತಿಮಬ್ಬೆ, ಉಳ್ಳಾಲದ ರಾಣಿ ಅಬ್ಬಕ್ಕ, ಮೊದಲಾದವರು ಮಹಿಳೆಯರಿಗೆ ಪ್ರೇರಕ ಶಕ್ತಿಯಾಗಿದ್ದಾರೆ. ಮಹಿಳೆಯರು ಸದಾ ಮಾತನಾಡುವ ಮಾತೆಯರಾಗದೆ, ಚಿಂತೆಯನ್ನು ಬಿಟ್ಟು ಸದಾಚಿಂತನೆಯನ್ನು ಮಾಡುವ ಚಿಂತಾಮಣಿಗಳಾಗಬೇಕು. ಮಹಿಳೆಯರು ಸಮರ್ಪಣಾ ಮನೋಭಾವದಿಂದ ಆರೋಗ್ಯಪೂರ್ಣ, ಕುಟುಂಬ, ಸಮಾಜ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಬೇಕು. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಸಲ್ಲದು ಎಂದು ಅವರು ಕಿವಿಮಾತು ಹೇಳಿದರು. ಸಾಧಕರ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ ಬೆಳಗಾವಿಯ ಸುಮನ್ ಪತ್ರಾವಳಿ, ಮೂಡಬಿದ್ರೆಯ ವೀಣಾ ಶೆಟ್ಟಿ, ಬೆಂಗಳೂರಿನ ಸುಶೀಮಾ ಯಶವಂತ್, ಛಾಯಾಚಿತ್ರಗ್ರಾಹಕಿ ಹುಣಸೂರಿನ ಛಾಯಾ ಸುನಿಲ್ ಮತ್ತು ಮೈಸೂರಿನ ಕುಮಾರಿ ಅನನ್ಯ ಜೈನ್ ಅವರನ್ನು ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಹೇಮಾವತಿ ಹೆಗ್ಗಡೆಯವರು ಮಾತನಾಡಿ, ಜೈನಧರ್ಮದಲ್ಲಿ ತ್ಯಾಗ, ಅಹಿಂಸೆ ಮತ್ತು ವಿರಕ್ತಿಗೆ ಪ್ರಾಶಸ್ತ್ಯವಿದೆ. ಮಹಿಳೆಯರು ಕುಟುಂಬದ ಮತ್ತು ಸಮಾಜದ ಅವಿಭಾಜ್ಯ ಅಂಗವಾಗಿದ್ದು ಬಿಂದುವಾಗಿ ಮಾತ್ರವಲ್ಲದೆ ಸಿಂಧುವಾಗಿಯೂ ಎಲ್ಲರೊಂದಿಗೂ ಮುಕ್ತವಾಗಿ ಬೆರೆತು ನಿರಂತರ ಪ್ರಗತಿಗೆ ಸಹಕರಿಸಬೇಕು. ಮಹಿಳೆಯರಿಗೆ ಮಂದಿರಗಳು ಪಾಠಶಾಲೆಯಾದರೆ, ಸಮಾಜ ಪ್ರಯೋಗ ಶಾಲೆಯಾಗಬೇಕು. ಮಹಿಳೆಯರ ತ್ಯಾಗ, ಸೇವೆ, ಪ್ರೀತಿ-ವಿಶ್ವಾಸಕ್ಕೆ, ಸಮಾಜಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಸೇವೆಯಿಂದ ಸಿಗುವ ತೃಪ್ತಿ, ಸಂತೋಷ ಮತ್ತು ನೆಮ್ಮದಿಯೇ ಮಹಿಳೆಯರಿಗೆ ದೊರಕುವ ನಿಜವಾದ ಪ್ರಶಸ್ತಿ ಎಂದು ಅಭಿಪ್ರಾಯಪಟ್ಟರು. ಮಹಿಳೆಯರು ತಮ್ಮ ಮಕ್ಕಳನ್ನು ಉತ್ತಮ ಸಂಸ್ಕಾರವಂತರಾಗಿ ರೂಪಿಸಬೇಕು ಎಂದು ಅವರು ಹೇಳಿದರು. ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಪದ್ಮಿನಿ ಪದ್ಮರಾಜ್ ಸ್ವಾಗತಿಸಿದರು. ಜಯಶ್ರೀ ಧನ್ಯವಾದವಿತ್ತರು. ಕುಮುದಾ ನಾಗಭೂಷಣ್ ಕಾರ್ಯಕ್ರಮ ನಿರ್ವಹಿಸಿದರು.

”ಕ್ರೀವಾ-2024” ಸಾಂಸ್ಕೃತಿಕ ಕಾರ್ಯಕ್ರಮ

Article Image

”ಕ್ರೀವಾ-2024” ಸಾಂಸ್ಕೃತಿಕ ಕಾರ್ಯಕ್ರಮ

ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಿಗೆ “ಕ್ರೀವಾ 2024”-“ವಸಂತ- ಹೊಸ ಹೆಜ್ಜೆ, ಹೊಸ ಆರಂಭ” ಎಂಬ ಧ್ಯೇಯೆಯೊಂದಿಗೆ ಮೇ 29ರಿಂದ ಜೂನ್ 1, 2024ವರೆಗೆ ನಾಲ್ಕು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು "ಕ್ರೀವಾ 2024" ಕಲೆ, ಸಂಸ್ಕೃತಿ ಮತ್ತು ಸಂಗೀತಗಳನ್ನೊಳಗೊಂಡ ವಾರ್ಷಿಕ ಸಾಂಸ್ಕೃತಿಕ ವೇದಿಕೆಯಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ ಮತ್ತು ನರರೋಗ ವಿಭಾಗದ ಮುಖ್ಯಸ್ಥರಾದ ಡಾ. ಬಸವರಾಜ ಬಣಕಾರ ಮುಖ್ಯ ಅತಿಥಿಗಳಾಗಿದ್ದು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ: ಪ್ರಕೃತಿಯ ಸಂರಕ್ಷಣೆಯು ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರೂ ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಬೇಕು ಮತ್ತು ಯಶಸ್ಸು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. ನಾವು ಮಾಡುವ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡಿವುದರೊಂದಿಗೆ ಇತರರನ್ನು ತೃಪ್ತಿಪಡಿಸಬೇಕು. ನಿರಂತರ ಪರಿಶ್ರಮ ಮತ್ತು ಉತ್ತಮ ಅಭ್ಯಾಸದಿಂದ ಸಾಧನೆಗಳ ಶಿಖರವನ್ನೇರಬಹುದು. ನಾವು ವೃತ್ತಿ ಮತ್ತು ವೈಯಕ್ತಿಕ ಜೀವನವನ್ನು ಸಮತೋಲನದಿಂದ ಮುನ್ನಡೆಸಬೇಕು. ವಿಶಾಲ ಮನೋಭಾವನೆಯಿಂದ ವಿದ್ಯಾರ್ಥಿಗಳು ಅತ್ಯುತ್ತಮ ಸೇವೆಯನ್ನು ನೀಡಲು ಸಾಧ್ಯ. ನೈತಿಕತೆ ಮತ್ತು ಉದ್ದೇಶ ಶಿಕ್ಷಣದ ಪ್ರಮುಖ ಉದ್ದೇಶವಾಗಿರಬೇಕು. ಎಸ್. ಡಿ. ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು “ಕ್ರೀವಾ-2024” ಲಾಂಛನವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಸಹ ಉಪಕುಲಪತಿಗಳಾದ ವಿ. ಜೀವಂಧರ ಕುಮಾರ, ಕುಲಸಚಿವರಾದ ಡಾ. ಚಿದೇಂದ್ರ ಶೆಟ್ಟರ, ಆಡಳಿತ ನಿರ್ದೇಶಕರಾದ ಸಾಕೇತ ಶೆಟ್ಟಿ, ಎಸ್.ಡಿ.ಎಂ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ ಪರಮಾರ ಉಪಸ್ಥಿತರಿದ್ದರು. ಡಾ. ಸಂಗೀತಾ ಅಪ್ಪಣ್ಣವರು ಅತಿಥಿಗಳನ್ನು ಸ್ವಾಗತಿಸಿದರು. ರಶ್ಮಿ ಭಟ್ ರವರು ಕ್ರೀವಾದ ಅವಲೋಕನ ನೀಡಿದರು. ಚಾಂದನಿ ಮತ್ತು ಅಂಕಿತ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ಜ್ಯೋತಿ ಜೀವನ್‌ರವರು ವಂದನಾರ್ಪಣೆ ಸಲ್ಲಿಸಿದರು.

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

Article Image

ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡಬಿದ್ರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್

ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ ಇವರು ಶಾಲಾ ಮಕ್ಕಳಿಗಾಗಿ ಪ್ರತಿ ವರ್ಷವೂ ಆಯೋಜಿಸುವ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮ ‘ಯುವಿಕ’ಗೆ ಈ ಬಾರಿ ಎಕ್ಸಲೆಂಟ್ ಮೂಡುಬಿದಿರೆಯ ಪ್ರತಿಭೆ ಮೌಲ್ಯ ವೈ. ಆರ್. ಜೈನ್ ಆಯ್ಕೆಗೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಯನ್ನು ಗೈದಿದ್ದಾರೆ. ಇಸ್ರೋ’ ನ ವಿವಿಧ ಕೇಂದ್ರಗಳಲ್ಲಿ ಎರಡು ವಾರಗಳ ಕಾಲ ಜರಗುವ 'ಯುವಿಕ-2024' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ಬಾರಿ ದೇಶದ ಎಲ್ಲಾ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 85,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಕಾಂಕ್ಷಿಗಳಾಗಿ ಅರ್ಜಿಯನ್ನು ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮೂರು ವರುಷಗಳ ಶೈಕ್ಷಣಿಕ ಸಾಧನೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ವೈಜ್ಞಾನಿಕ, ಕ್ರೀಡಾ ಸಾಧನೆಗಳು, ಒಲಂಪಿಯಾಡ್ ತತ್ಸಮಾನ ಸ್ಪರ್ಧೆಗಳಲ್ಲಿ ಪಡೆದ ರ‍್ಯಾಂಕ್ ಜೊತೆಗೆ ಮುಖ್ಯವಾಗಿ ಇಸ್ರೋ ಆಯೋಜಿಸುವ ಆನ್‌ಲೈನ್ ರಸಪ್ರಸ್ನೆಯಲ್ಲಿ ವಿದ್ಯಾರ್ಥಿಯ ಪಲಿತಾಂಶ ಇವೆಲ್ಲವನ್ನು ಮಾನದಂಡವನ್ನಾಗಿರಿಸಿ 250 ಮಂದಿ ವಿದ್ಯಾರ್ಥಿಗಳನ್ನು ಪ್ರಸಕ್ತ ಸಾಲಿನ ‘ಯುವಿಕ’ಗೆ ಆಯ್ಕೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ 12 ಮಂದಿಗಳಲ್ಲಿ ರಾಜ್ಯ ಪಠ್ಯಕ್ರಮ ಭೋಧಿಸುವ ಶಿಕ್ಷಣ ಸಂಸ್ಥೆಯಿಂದ ಆಯ್ಕೆಯಾಗಿ ಭಾಗವಹಿಸಿದ ಕರ್ನಾಟಕದ ಏಕೈಕ ವಿದ್ಯಾರ್ಥಿನಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೌಲ್ಯ ವೈ. ಆರ್. ಜೈನ್ ಆಗಿರುವುದು ಶಿಕ್ಷಣ ಕಾಶಿ ಎನಿಸಿದ ಮೂಡುಬಿದಿರೆಗೆ ವಿಶೇಷ ಮೆರಗನ್ನು ತಂದಿದೆ ಈಗಾಗಲೇ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿ ತಯಾರಿ, ಜಿಲ್ಲಾ ರಾಜ್ಯ ಮಟ್ಟದ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆಯ ಜೊತೆಗೆ ರಾಷ್ಟ್ರ, ರಾಜ್ಯಮಟ್ಟದ ಅಟಲ್ ಮಾರಥಾನ್, ಇನ್‌ಸ್ಪಾಯರ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿನೂತನವಾದ ಸಂಶೋಧನಾತ್ಮಕ ಮಾದರಿಗಳನ್ನು ಪ್ರಸ್ತುತ ಪಡಿಸುವ ಮೂಲಕ ಗಮನ ಸೆಳೆದಿರುವ ಈ ಪ್ರತಿಭೆ ಮೂಡುಬಿದಿರೆಯ ಪ್ರತಿಷ್ಠಿತ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಇವರ ಸುಪುತ್ರಿಯಾಗಿದ್ದಾಳೆ.

ಜೈನ ಬಸದಿಗಳ ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯವರಿಗೆ ಮನವಿ

Article Image

ಜೈನ ಬಸದಿಗಳ ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯಮಂತ್ರಿಯವರಿಗೆ ಮನವಿ

ಬೆಳ್ತಂಗಡಿ; ಕರ್ನಾಟಕ ಸರಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಗೌರವಾನ್ವಿತ ಸಿದ್ದರಾಮಯ್ಯನವರನ್ನು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ನಾಭಿರಾಜ್ ಜೈನ್ ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯಕುಮಾರ್ ಕಾರ್ಯತ್ತಡ್ಕ, ಧನ ಕೀರ್ತಿ ಶೆಟ್ಟಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮುಂತಾದವರಿದ್ದರು.

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ಮೇ 30 ರಂದು ಧರ್ಮಸ್ಥಳದಲ್ಲಿ ರಜತ ಮಹೋತ್ಸವ ಸಮಾರಂಭ

Article Image

ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ: ಮೇ 30 ರಂದು ಧರ್ಮಸ್ಥಳದಲ್ಲಿ ರಜತ ಮಹೋತ್ಸವ ಸಮಾರಂಭ

ಉಜಿರೆ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭ ಇದೇ 30 ರಂದು ಗುರುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ ಎಂದು ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಬೆಂಗಳೂರಿನ ಪದ್ಮಿನಿ ಪದ್ಮರಾಜ್ ರವರು ತಿಳಿಸಿದ್ದಾರೆ. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಸೇವೆ, ಸಾಧನೆ ಬಗ್ಗೆ ಅವರು ಧರ್ಮಸ್ಥಳದಲ್ಲಿ ಮಾಹಿತಿ ನೀಡಿದರು. ಮೇ 30 ರಂದು ಗುರುವಾರ ಪೂರ್ವಾಹ್ನ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸುವರು. ಹೇಮಾವತಿ ವೀ. ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಖ್ಯಾತ ಹೃದ್ರೋಗ ತಜ್ಞರಾದ ಬೆಂಗಳೂರಿನ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರೀಯವರು ಮತ್ತು ಚಲನಚಿತ್ರ ನಟಿ ಪದ್ಮಜಾ ರಾವ್ ರವರು ಶುಭಾಶಂಸನೆ ಮಾಡುವರು. ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದ, ಬೆಳಗಾವಿಯ ಸುಮನ್ ಪತ್ರಾವಳಿ, ಮೂಡಬಿದ್ರೆಯ ವೀಣಾ ಶೆಟ್ಟಿ, ಬೆಂಗಳೂರಿನ ಸುರೀಮಾ ಯಶವಂತ್, ಹುಣಸೂರಿನ ಛಾಯಾ ಮತ್ತು ಮೈಸೂರಿನ ಕುಮಾರಿ ಅನನ್ಯಾ ಅವರನ್ನು ಸನ್ಮಾನಿಸಲಾಗುವುದು. ರಾಜ್ಯದಲ್ಲಿರುವ ಜೈನ ಮಹಿಳಾ ಒಕ್ಕೂಟದ ಎಲ್ಲಾ ಶಾಖೆಗಳಿಂದ ಸುಮಾರು ಒಂದು ಸಾವಿರ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದು ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದು ಪದ್ಮಿನಿ ಪದ್ಮರಾಜ್ ರವರು ಮಾಹಿತಿ ನೀಡಿದರು.

ಸತ್ತೂರು, ಧಾರವಾಡ: “ಪರ್ವ 2024”-ಸಾಂಸ್ಕೃತಿಕ ಕಾರ್ಯಕ್ರಮ

Article Image

ಸತ್ತೂರು, ಧಾರವಾಡ: “ಪರ್ವ 2024”-ಸಾಂಸ್ಕೃತಿಕ ಕಾರ್ಯಕ್ರಮ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಲೈಡ ಹೆಲ್ತ್ ಸೈನ್ಸ್ ವಿಭಾಗದವರಿಂದ “ಪರ್ವ 2024”-ಸಾಗರ ಸಂರಕ್ಷಣೆಯ ಭಾಗವಾಗಿ “ಸಮುದ್ರ ನಮ್ಮ ಜೀವನದ ಸೌಂದರ್ಯ” ಎಂಬ ಧ್ಯೇಯೆಯೊಂದಿಗೆ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಮತ್ತಿತರ ಗಣ್ಯರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪದ್ಮಲತಾ ನಿರಂಜನ್, ಸಾಕೇತ್ ಶೆಟ್ಟಿ, ಡಾ. ಚಿದೇಂದ್ರ ಶೆಟ್ಟರ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಲೈಡ ಹೆಲ್ತ್ ಸೈನ್ಸ್ ನ ಸಂಯೋಜಕರಾದ ಡಾ. ವಿದ್ಯಾ ಪಾಟೀಲ ಅವರು ಪರ್ವ 2024 ಸಾಂಸ್ಕೃತಿಕ ಕಾರ್ಯಕ್ರಮದ ಅವಲೋಕನವನ್ನು ನೀಡಿದರು. ಶೋಧನ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಮೀನಾಜ್ ಮತ್ತು ತಾಂಜೀಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಸೌಮ್ಯ ವಂದನಾರ್ಪಣೆ ಸಲ್ಲಿಸಿದರು.

ಧರ್ಮಸ್ಥಳ ಬಸದಿಯಲ್ಲಿ ವಾರ್ಷಿಕೋತ್ಸವ

Article Image

ಧರ್ಮಸ್ಥಳ ಬಸದಿಯಲ್ಲಿ ವಾರ್ಷಿಕೋತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಅಪರಾಹ್ನ ಶ್ರೀ ಪದ್ಮಾವತಿದೇವಿ ಆರಾಧನೆ, ಶ್ರಾವಕಿಯರಿಂದ ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳು ನಡೆದವು. ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ೧೦೮ ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ ಹೆಗ್ಗಡೆಯವರು, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಮೂಡುಬಿದಿರೆ: 3ನೇ ವಾರ್ಷಿಕೋತ್ಸವ

Article Image

ಮೂಡುಬಿದಿರೆ: 3ನೇ ವಾರ್ಷಿಕೋತ್ಸವ

2022ರಂದು ಜೀರ್ಣೋದ್ಧಾರಗೊಳಿಸಿ, ಪ್ರತಿಷ್ಠಾಪಿಸಿದ ಮೂಡುಬಿದಿರೆ ಪಡುಬಸದಿ ಭಗವಾನ್ ಶ್ರೀಶ್ರೀಶ್ರೀ ವಿಮಲ ಶ್ರೀಶ್ರೀಶ್ರೀ ಅನಂತ, ಶ್ರೀಶ್ರೀಶ್ರೀ ಧರ್ಮನಾಥ ಸ್ವಾಮಿಯ ಬಿಂಬ ಪ್ರತಿಷ್ಠಾ ಮಹೋತ್ಸವದ 3ನೇ ವಾರ್ಷಿಕೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ, ನಾಳೆ (ಮೇ 24) ವಿಮಾನಶುದ್ಧಿ, ಶ್ರುತ ಪೂಜೆ, ಭ| ಶೀತಲ ತೀರ್ಥಂಕರ-ಶ್ರೀ ಬ್ರಹ್ಮಯಕ್ಷ ಆರಾಧನೆ- ಶ್ರೀ ಪದ್ಮಾವತಿ ಷೋಡಶೋಪಚಾರ ಪೂಜೆ, ಉತ್ಸವ ಮತ್ತು ಧಾರ್ಮಿಕ ಸಭಾಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ನಿಧನ: ಕಟ್ಟೆಮನೆ ಉದಯ್ ಕುಮಾರ್

Article Image

ನಿಧನ: ಕಟ್ಟೆಮನೆ ಉದಯ್ ಕುಮಾರ್

ಪುಂಜಾಲಕಟ್ಟೆ: ಇಲ್ಲಿಯ ಕಟ್ಟೆಮನೆ ಉದಯ್ ಕುಮಾರ್ (77ವ) ಇವರು ಮೇ 21 ರಂದು ರಾತ್ರಿ ನಿಧನ ಹೊಂದಿದರು. ಇವರು ಪತ್ನಿ ಮತ್ತು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು- ವರ್ಗವನ್ನು ಅಗಲಿದ್ದಾರೆ

ಧರ್ಮಸ್ಥಳ ಬಸದಿಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Article Image

ಧರ್ಮಸ್ಥಳ ಬಸದಿಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಧರ್ಮಸ್ಥಳ: ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮಂಗಳವಾರ(ಮೇ.21) ತೋರಣ ಮುಹೂರ್ತ, ವಿಮಾನಶುದ್ಧಿ, ಆರಾಧನಾ ಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು. ಇಂದಿನ ಕಾರ್ಯಕ್ರಮ: ಇಂದು ಬುಧವಾರ ವಾಸ್ತುಪೂಜಾ ವಿಧಾನ, ಜಿನಸಹಸ್ರನಾಮ ಪುಷ್ಪಾರ್ಚನೆ, ಷೋಡಶ ಕಲಶಾಭಿಷೇಕ, ನವಗ್ರಹ ಮಹಾಶಾಂತಿ, ಮಹಾಮಂಗಳಾರತಿ ಮೊದಲಾದ ಕಾರ್ಯಕ್ರಮಗಳು ನಡೆಯುತ್ತವೆ. ನಾಳೆ ಗುರುವಾರ ಅಪರಾಹ್ನ ಗಂಟೆ 2.30 ರಿಂದ ಮಹಾಮಾತೆ ಶ್ರೀಪದ್ಮಾವತಿ ಅಮ್ಮನವರ ಆರಾಧನೆ, ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿ ದೇವಿ ಪ್ರತಿಷ್ಠೆ, ಭವ್ಯ ಅಗ್ರೋದಕ ಮೆರವಣಿಗೆ ಮತ್ತು ಉತ್ಸವ ಸಹಿತ ಭಗವಾನ್ ಚಂದ್ರನಾಥ ಸ್ವಾಮಿಗೆ 108 ಕಲಶಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ.

ಧರ್ಮಸ್ಥಳ ಮ್ಯೂಸಿಯಂಗೆ ಕಾರ್ ಕೊಡುಗೆ ನೀಡಿದ ಭಟ್ಟಾರಕ ಶ್ರೀಗಳವರು

Article Image

ಧರ್ಮಸ್ಥಳ ಮ್ಯೂಸಿಯಂಗೆ ಕಾರ್ ಕೊಡುಗೆ ನೀಡಿದ ಭಟ್ಟಾರಕ ಶ್ರೀಗಳವರು

ಮೂಡುಬಿದಿರೆ: ಇಲ್ಲಿನ ಶ್ರೀ ಜೈನಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು 2003ರಲ್ಲಿ ಖರೀದಿಸಿದ ಟೊಯೋಟಾ ಕ್ವಾಲಿಸ್ ವಾಹನವನ್ನು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕಾರ್ ಮ್ಯೂಸಿಯಂಗೆ ವಾಹನ ವರ್ಗಾವಣೆ ಸಹಿ ಮಾಡಿ ವರ್ಗಾಯಿಸಿದರು. ೧೦೮ ಶಾಂತಿ ಸಾಗರ ಆಚಾರ್ಯ ಪದರೋಹಣ ಶತಾಬ್ಧಿ ಮಹೋತ್ಸವ ಶ್ರೀಮಠದ ವತಿಯಿಂದ ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭ ನೆರವೇರಿಸಿದ ನೆನಪಿನಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ದಂಪತಿಯನ್ನು ಸ್ವಾಮೀಜಿಗಳವರು ಗೌರವಿಸಿ, ಅಭಿನಂದನಾ ಪತ್ರ, ಶ್ರೀಫಲ ನೀಡಿ ಹರಸಿದರು. ಹೆಗ್ಗಡೆಯವರು ವಾಹನ ವಸ್ತು ಸಂಗ್ರಹಾಲಯಕ್ಕೆ ಮೋಟಾರ್ ಕಾರ್ ಕೊಡುಗೆ ನೀಡಿದ ಸ್ವಾಮೀಜಿಗಳವರಿಗೆ ಅಭಿನಂದನಾ ಪತ್ರ ನೀಡಿದರು. ಶೈಲೇಂದ್ರ ಜೈನ್, ಎಂ. ಬಾಹುಬಲಿ ಪ್ರಸಾದ್, ಪ್ರವೀಣ್ ಇಂದ್ರ ವೇಣೂರು, ನಾಗವರ್ಮ ಆದಿತ್ಯ ಜೈನ್ ಉಪಸ್ಥಿತರಿದ್ದರು.

ನಿಧನ: ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ

Article Image

ನಿಧನ: ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ

ಗುರುವಾಯನಕೆರೆ ಶಕ್ತಿನಗರದ ಧನಂಜಯ ಇಂದ್ರ(72ವ) ಇವರು ಇಂದು (ಮೇ. 19) ಬೆಳಗ್ಗೆ ನಿಧನ ಹೊಂದಿದರು. ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ಬಸದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಓರ್ವ ಮಗ, ಸೊಸೆ ಹಾಗೂ ಅಪಾರ ಬಂಧು-ವರ್ಗವನ್ನು ಅಗಲಿದ್ದಾರೆ.

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

Article Image

ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ

ಭಾರತೀಯ ಜೈನ್ ಮಿಲನ್ ಮೂಡುಬಿದಿರೆಯ ಮಾಸಿಕ ಸಭೆ ವಾಲ್ಪಾಡಿ ಬಸದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀಪಾಲ್ ಎಸ್. ರವರು ತಮ್ಮ ಧರ್ಮಪತ್ನಿ ಮತ್ತು ಮಾತೃಶ್ರೀಯವರ ಸ್ಮರಣೆಯಲ್ಲಿ ಕೊಡಮಾಡುವ "ವಜ್ರಶ್ರೀ ಅರ್ಚಕ ಪುರಸ್ಕಾರ"ವನ್ನು ಅಳಿಯೂರು ಬಸದಿಯ ಹಿರಿಯ ಅರ್ಚಕರಾದ ರತ್ನವರ್ಮ ಇಂದ್ರರ ಸೇವೆಯನ್ನು ಗುರುತಿಸಿ, ರತ್ನವರ್ಮ ಇಂದ್ರ ಹಾಗೂ ವಿನಯ ದಂಪತಿಯನ್ನು ಶಾಲು, ಫಲಕಾಣಿಕೆ, ಸನ್ಮಾನ ಪತ್ರ ಹಾಗೂ ನಗದು ಪುರಸ್ಕಾರದೊಂದಿಗೆ ಜೈನ್ ಮಿಲನ್ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಮಿಲನ್ ಅಧ್ಯಕ್ಷ ದಿನೇಶ್ ಕುಮಾರ್ ಆನಡ್ಕ, ಶ್ವೇತಾ ಜೈನ್, ಪ್ರಭಾಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.

First Previous

Showing 5 of 10 pages

Next Last