ಮಂಗಳೂರು: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ
ಮಂಗಳೂರು ಭಾರತೀಯ ಜೈನ್ ಮಿಲನ್ ಮಾಸಿಕ ಸಭೆಯು ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಜೈನ್ ಮಿಲನ್ ಅಧ್ಯಕ್ಷರಾದ ರತ್ನಾಕರ್ ಜೈನ್‌ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಲಯ 8ರ ರಾಷ್ಟ್ರೀಯ ಉಪ ಕಾರ್ಯಾಧ್ಯಕ್ಷ ಪ್ರಸನ್ನ ಕುಮಾರ್ ಹಾಗೂ ಧರ್ಮಸ್ಥಳ ಕ್ಷೇತ್ರದ ರಾಜೇಂದ್ರ ಕುಮಾರ್ ಭಾಗವಹಿಸಿದ್ದರು. ಮಂಗಳೂರು ಜೈನ್ ಸಮಾಜದ ಹಿರಿಯ ವಕೀಲರು ಹಾಗೂ ಮಂಗಳೂರು ಜೈನ್ ಸೊಸೈಟಿ ಅಧ್ಯಕ್ಷರಾದ ಎಲ್.ಡಿ. ಬಲ್ಲಾಳ್ ಮತ್ತು ಹಿರಿಯ ಜೈನ ವಿದ್ವಾಂಸ ಎಂ.ಕೆ. ಕುಟುಂಬದ ನಿರ್ಮಲ್ ಕುಮಾರ್ ಅವರನ್ನು ಸಮ್ಮಾನಿಸಲಾಯಿತು. ಮಿಲನ್ ಸಭೆಯಲ್ಲಿ ನೂತನವಾಗಿ ಸೇರ್ಪಡೆಗೊಂಡ 10 ಸದಸ್ಯರನ್ನು ಸ್ವಾಗತಿಸಿ, ಪ್ರಮಾಣವಚನ ನೀಡಿದ ವಲಯ 8ರ ರಾಷ್ಟ್ರೀಯ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಿಲನ್ ಬಗೆಗೆನ ಮಾಹಿತಿಯನ್ನು ಸಭೆಯಲ್ಲಿ ಹಂಚಿಕೊಂಡರು. ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳಿಸಿ ಸಾಧನೆ ಮಾಡಿದ ನಗರದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯದರ್ಶಿ ವೈಶಾಲಿ ಪಡಿವಾಳ್, ಪ್ರಿಯಾ ಸುದೇಶ್ ವಂದಿಸಿದರು.